ಕಾನಾನ್ಯರಾಗಿದ್ದ ಕೆಲವರು ಚೆಫತ್ ಎಂಬ ನಗರದಲ್ಲಿ ವಾಸ ಮಾಡಿಕೊಂಡಿದ್ದರು. ಯೆಹೂದ್ಯರು ಮತ್ತು ಸಿಮೆಯೋನ್ಯರು ಆ ಕಾನಾನ್ಯರ ಮೇಲೆ ಧಾಳಿಮಾಡಿ ಆ ನಗರವನ್ನು ಸಂಪೂರ್ಣವಾಗಿ ನಾಶಮಾಡಿದರು; ಅಲ್ಲದೆ ಆ ನಗರಕ್ಕೆ ಹೊರ್ಮಾ ಎಂದು ಹೆಸರಿಟ್ಟರು.
ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸಲು ಸಹಾಯಮಾಡಿದ್ದರಿಂದ ಅವರು ಕಾನಾನ್ಯರನ್ನೂ ಅವರ ಗ್ರಾಮಗಳನ್ನೂ ಸಂಪೂರ್ಣವಾಗಿ ನಾಶಮಾಡಿಬಿಟ್ಟರು. ಆದ್ದರಿಂದ ಆ ಪ್ರದೇಶಕ್ಕೆ ಹೊರ್ಮಾ ಎಂದು ಹೆಸರಾಯಿತು.