Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:63 - ಪರಿಶುದ್ದ ಬೈಬಲ್‌

63 ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಹಾಕಲು ಯೆಹೂದ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಯೆಬೂಸಿಯರು ಇಂದಿನವರೆಗೂ ಜೆರುಸಲೇಮಿನಲ್ಲಿ ಯೆಹೂದ ಕುಲದವರೊಡನೆ ವಾಸವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಯೆರೂಸಲೇಮಿನಲ್ಲೇ ವಾಸವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

63 ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಜೆರುಸಲೇಮಿನಲ್ಲೇ ವಾಸವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

63 ಯೆರೂಸಲೇವಿುನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸುವದು ಯೆಹೂದಕುಲದವರಿಂದ ಆಗದೆ ಹೋಯಿತು. ಆದದರಿಂದ ಅವರು ಇಂದಿನವರೆಗೂ ಯೆಹೂದಕುಲದವರೊಡನೆ ಯೆರೂಸಲೇವಿುನಲ್ಲೇ ವಾಸವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

63 ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೆಹೂದ ಗೋತ್ರದವರಿಂದ ಹೊರಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಈ ದಿವಸದವರೆಗೂ ಯೆಬೂಸಿಯರು ಯೆಹೂದ ಗೋತ್ರದವರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:63
9 ತಿಳಿವುಗಳ ಹೋಲಿಕೆ  

ಬೆನ್ಯಾಮೀನನ ಕುಲದವರಿಗೆ ಯೆಬೂಸಿಯರನ್ನು ಜೆರುಸಲೇಮಿನಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿನವರೆಗೂ ಅವರು ಬೆನ್ಯಾಮೀನರೊಡನೆ ಜೆರುಸಲೇಮಿನಲ್ಲಿಯೇ ವಾಸವಾಗಿದ್ದಾರೆ.


ಯೆಹೂದ್ಯರು ಜೆರುಸಲೇಮಿನ ವಿರುದ್ಧ ಯುದ್ಧಮಾಡಿ ಅದನ್ನು ಗೆದ್ದುಕೊಂಡರು. ಯೆಹೂದ್ಯರು ಜೆರುಸಲೇಮಿನ ಜನರನ್ನು ಖಡ್ಗಗಳಿಂದ ಕೊಂದು ನಗರವನ್ನು ಸುಟ್ಟುಹಾಕಿದರು.


ಆ ಸೀಮೆಯು ಜೆರುಸಲೇಮ್ ಎಂದು ಕರೆಯಲ್ಪಟುವ ಯೆಬೂಸಿಯ ನಗರದ ದಕ್ಷಿಣ ಮಾರ್ಗವಾಗಿ ಬೆನ್‌ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಆ ಸ್ಧಳದಲ್ಲಿ ಸೀಮೆಯು ಹಿನ್ನೋಮ್ ಕಣಿವೆಯ ಪಶ್ಚಿಮದಿಕ್ಕಿನ ಬೆಟ್ಟದ ತುದಿಗೆ ಹೋಗುತ್ತದೆ. ಇದು ರೆಫಾಯೀಮ್ ಕಣಿವೆಯ ಉತ್ತರದ ಕೊನೆ.


ನಿಬ್ಷಾನ್, ಉಪ್ಪಿನಪಟ್ಟಣ ಮತ್ತು ಏಂಗೆದೀ ಎಂಬ ಆರು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.


ಇಸ್ರೇಲರು ಈ ಜನರನ್ನು ನಾಶಪಡಿಸಲು ಸಮರ್ಥರಾಗಿರಲಿಲ್ಲ. ಆದರೆ ಸೊಲೊಮೋನನು ಅವರನ್ನು ತನ್ನ ಕೆಲಸ ಮಾಡಲು ಗುಲಾಮರನ್ನಾಗಿ ಇಟ್ಟುಕೊಂಡನು; ಅವರು ಇಂದಿಗೂ ಗುಲಾಮರಾಗಿದ್ದಾರೆ.


ಈ ಜನರೆಲ್ಲರು ತಮ್ಮ ಗೋತ್ರಗಳಿಗೆ ನಾಯಕರಾಗಿದ್ದರು. ಇವರ ಗೋತ್ರ ಚರಿತ್ರೆಯಲ್ಲಿ ಇವರನ್ನು ನಾಯಕರ ಪಟ್ಟಿಯಲ್ಲಿ ಸೇರಿಸಲಾಗಿದೆ. ಇವರೆಲ್ಲಾ ಜೆರುಸಲೇಮಿನಲ್ಲಿ ವಾಸವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು