Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:7 - ಪರಿಶುದ್ದ ಬೈಬಲ್‌

7 ಅಲ್ಲಿಂದ ಅದು ಆಕೋರಿನ ಕಣಿವೆಯಿಂದ ಹಾದು ದೆಬೀರಕ್ಕೆ ಮುಟ್ಟಿ ಅಲ್ಲಿ ಉತ್ತರಕ್ಕೆ ತಿರುಗಿ ಗಿಲ್ಗಾಲಕ್ಕೆ ಮುಟ್ಟಿತ್ತು. ಅದು ಮೀಮಿನ ಬೆಟ್ಟದಿಂದ ಹೋಗುವ ದಾರಿಯ ಎದುರಿಗೆ ಗಿಲ್ಗಾಲ್ ಇದೆ. ಅದು ಹಳ್ಳದ ದಕ್ಷಿಣ ಭಾಗದಲ್ಲಿದೆ. ಈ ಸೀಮೆಯು ಏನ್‌ಷೆಮೆಷ್ ನದಿಯವರೆಗೆ ಹೋಗಿ ಏನ್‌ರೋಗೆಲ್‌ನಲ್ಲಿ ಕೊನೆಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಕೋರಿನ ಕಣಿವೆ ಇವುಗಳ ಮೇಲೆ ದೆಬೇರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಹಳ್ಳದ ದಕ್ಷಿಣದಲ್ಲಿರುವ ಅದುಮೀಮಿಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್ ಏನ್ ಷೆಮೆಷ್ ಅನ್ನಿಸಿಕೊಳ್ಳುವ ಬುಗ್ಗೆ ಏನ್ ರೋಗೆಲ್ ಇವುಗಳ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇವುಗಳ ಮೇಲೆ ದೆಬೀರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ನದಿಯ ದಕ್ಷಿಣದಲ್ಲಿರುವ ಅದುಮೀಮಿಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್, ಏನ್ ಷೆಮೆಷ್ ಎನ್ನುವ ಬುಗ್ಗೆ, ಏನ್ ರೋಗೆಲ್ ಇವುಗಳ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಕೋರಿನ ತಗ್ಗು ಇವುಗಳ ಮೇಲೆ ದೆಬೀರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಹಳ್ಳದ ದಕ್ಷಿಣದಲ್ಲಿರುವ ಅದುಮೀವಿುಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್, ಏನ್‍ಷೆಮೆಷ್ ಅನ್ನಿಸಿಕೊಳ್ಳುವ ಬುಗ್ಗೆ, ಏನ್‍ರೋಗೆಲ್ ಇವುಗಳ ಮೇಲೆ ಬೆನ್‍ಹಿನ್ನೋಮನ ತಗ್ಗಿಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಲ್ಲಿಂದ ಆಕೋರ್ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಗೆ ತಿರುಗಿಕೊಂಡು ದಕ್ಷಿಣದಲ್ಲಿರುವ ಅದುಮೀಮಿನ ದಿಬ್ಬೆಗೆ ಎದುರಾಗಿರುವ ಗಿಲ್ಗಾಲಿಗೂ, ಅಲ್ಲಿಂದ ಏನ್ ಷೆಮೆಷ್ ಎಂಬ ಬುಗ್ಗೆಗೂ, ಅಲ್ಲಿಂದ ಏನ್ ರೋಗೆಲ್‌ವರೆಗೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:7
13 ತಿಳಿವುಗಳ ಹೋಲಿಕೆ  

ಒಂದು ದಿನ, ಅದೋನೀಯನು ಎನ್‌ರೋಗೆಲಿನ ಹತ್ತಿರದ ಚೋಹೆಲೆತ್ ಎಂಬ ಬಂಡೆಯ ಬಳಿ ಕೆಲವು ಕುರಿಗಳನ್ನು, ಹಸುಗಳನ್ನು ಮತ್ತು ಕೊಬ್ಬಿದ ಕರುಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅದೋನೀಯನು ತನ್ನ ಸಹೋದರರನ್ನು (ರಾಜನ ಇತರ ಗಂಡುಮಕ್ಕಳನ್ನು) ಮತ್ತು ಯೆಹೂದದ ಅಧಿಕಾರಿಗಳನ್ನು ಆಹ್ವಾನಿಸಿದನು.


ಯಾಜಕರ ಮಕ್ಕಳಾದ ಯೋನಾತಾನನು ಮತ್ತು ಅಹೀಮಾಚನು ಎನ್-ರೋಗೆಲಿನ ಬುಗ್ಗೆಯ ಹತ್ತಿರ ಕಾದಿದ್ದರು. ತಾವು ನಗರದೊಳಕ್ಕೆ ಹೋಗುವುದನ್ನು ಯಾರೂ ನೋಡಬಾರದೆಂದು ಅವರು ಅಲ್ಲಿ ಅಡಗಿಕೊಂಡಿದ್ದರು. ಆದ್ದರಿಂದ ಕೆಲಸದ ಹುಡುಗಿಯೊಬ್ಬಳು ಹೊರಗೆ ಬಂದು ಅವರಿಗೆ ಆ ಸಂದೇಶವನ್ನು ತಿಳಿಸಿದಳು. ಬಳಿಕ ಯೋನಾತಾನನು ಮತ್ತು ಅಹೀಮಾಚನು ದಾವೀದ ರಾಜನ ಬಳಿಗೆ ಹೋಗಿ ಅದನ್ನು ತಿಳಿಸಿದರು.


ಆಕಾನನನ್ನು ಸುಟ್ಟ ಬಳಿಕ ಅವರು ಅವನ ದೇಹದ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಆ ಕುಪ್ಪೆಯು ಇಂದಿಗೂ ಅಲ್ಲಿದೆ. ಹೀಗೆ ದೇವರು ಆಕಾನನನ್ನು ಶಿಕ್ಷಿಸಿದನು. ಅದಕ್ಕಾಗಿ ಆ ಕಣಿವೆಗೆ “ಆಕೋರ್ ಕಣಿವೆ” ಎಂಬ ಹೆಸರು ಬಂದಿತು. ಬಳಿಕ ಯೆಹೋವನಿಗೆ ಜನರ ಮೇಲಿದ್ದ ಕೋಪ ಶಮನವಾಯಿತು.


ಅವರ ತಾಯಿಯು ವೇಶ್ಯೆಯಂತೆ ವರ್ತಿಸಿದಳು. ತಾನು ನಡಿಸಿದ ಕೃತ್ಯಗಳಿಗಾಗಿ ಆಕೆ ನಾಚಿಕೆಪಡಬೇಕು. ಆಕೆಯು ಹೀಗೆಂದುಕೊಳ್ಳುತ್ತಿದ್ದಾಳೆ, ‘ನಾನು ನನ್ನ ಪ್ರಿಯತಮರ ಬಳಿಗೆ ಹೋಗುವೆನು. ಅವರು ನನಗೆ ಅನ್ನ ನೀರನ್ನು ಕೊಡುವರು. ನನಗೆ ಉಣ್ಣೆಯನ್ನೂ, ನಾರುಮಡಿಯನ್ನೂ ಕೊಡುವರು. ದ್ರಾಕ್ಷಾರಸ ಮತ್ತು ಆಲೀವ್ ಎಣ್ಣೆಯನ್ನೂ ಕೊಡುವರು.’


ಆಗ ಶಾರೋನಿನ ಕಣಿವೆಯು ಕುರಿಗಳು ಮೇಯುವ ಮೈದಾನವಾಗುವದು. ಆಕೋರಿನ ಕಣಿವೆಯು ದನಗಳು ಮಲಗುವ ಸ್ಥಳವಾಗುವದು. ಇವೆಲ್ಲವೂ ನನ್ನ ಜನರಿಗಾಗುವದು. ಇವರು ನನಗಾಗಿ ಹುಡುಕುತ್ತಿರುವರು.


ಆಮೇಲೆ ಕಾಲೇಬನು ದೆಬೀರಿನಲ್ಲಿ ವಾಸಮಾಡುತ್ತಿದ್ದ ಜನರ ವಿರುದ್ಧ ಹೋರಾಡಿದನು. (ಹಿಂದಿನ ಕಾಲದಲ್ಲಿ ದೆಬೀರಿಗೆ ಕಿರ್ಯತ್‌ಸೇಫೇರ್ ಎಂದು ಕರೆಯುತ್ತಿದ್ದರು.)


ಆಮೇಲೆ ಯೆಹೋಶುವನು ಮತ್ತು ಇಸ್ರೇಲಿನ ಜನರೆಲ್ಲರು ಗಿಲ್ಗಾಲಿನಲ್ಲಿದ್ದ ತಮ್ಮ ಪಾಳೆಯಕ್ಕೆ ಹಿಂತಿರುಗಿದರು.


ಆಗ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಸೇರಿ ಜೆರಹನ ಮಗನಾದ ಆಕಾನನನ್ನು, ಬೆಳ್ಳಿಯನ್ನು, ನಿಲುವಂಗಿಯನ್ನು, ಬಂಗಾರವನ್ನು, ಆಕಾನನ ಮಕ್ಕಳನ್ನು, ಅವನ ದನಕರುಗಳನ್ನು, ಕತ್ತೆಗಳನ್ನು, ಅವನ ಕುರಿಗಳನ್ನು, ಅವನ ಗುಡಾರವನ್ನು ಮತ್ತು ಅವನ ಎಲ್ಲ ಸ್ವತ್ತನ್ನು “ಆಕೋರ್” ಕಣಿವೆಗೆ ತೆಗೆದುಕೊಂಡು ಹೋದರು.


ಅವರು ಜೋರ್ಡನ್ ನದಿಯನ್ನು ಮೊದಲನೆಯ ತಿಂಗಳಿನ ಹತ್ತನೆಯ ದಿನ ದಾಟಿದರು. ಅವರು ಜೆರಿಕೊವಿನ ಪೂರ್ವಕ್ಕಿರುವ ಗಿಲ್ಗಾಲಿನಲ್ಲಿ ಇಳಿದುಕೊಂಡಿದ್ದರು.


ಅಲ್ಲಿಂದ ಬೇತ್‌ಹೊಗ್ಲಾಕ್ಕೆ ಸಾಗಿ ಬೇತ್‌ಅರಬಾದ ಉತ್ತರಕ್ಕೆ ಮುಂದುವರಿದಿತ್ತು. ಅಲ್ಲಿಂದ ಅದು ರೂಬೇನನ ಮಗನಾದ ಬೋಹನನ ಬಂಡೆಯವರೆಗೆ ಸಾಗಿತ್ತು.


ಅಲ್ಲಿಂದ ಆ ಸೀಮೆಯು ಉತ್ತರಕ್ಕೆ ತಿರುಗಿ ಏನ್‌ಷೆಮೆಸ್‌ಗೆ ಹೋಗುತ್ತದೆ. ಅದು ಗೆಲೀಲೋತದವರೆಗೆ ಮುಂದುವರೆಯುತ್ತದೆ. (ಬೆಟ್ಟಗಳಲ್ಲಿರುವ ಅದುಮ್ಮೀಮ್ ಎಂಬ ಇಕ್ಕಟ್ಟಾದ ಮಾರ್ಗದ ಸಮೀಪದಲ್ಲಿದೆ ಗೆಲೀಲೋತ್.) ಆ ಸೀಮೆಯು ರೂಬೇನನ ಮಗನಾದ ಬೋಹನನ ಹೆಸರಿನ ಮಹಾಬಂಡೆಗೆ ಹೋಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು