ಯೆಹೋಶುವ 15:9 - ಪರಿಶುದ್ದ ಬೈಬಲ್9 ಅಲ್ಲಿಂದ ಆ ಸೀಮೆಯು ನೆಫ್ತೋಹ ಬುಗ್ಗೆಗೆ ಹೋಗುತ್ತದೆ; ಅಲ್ಲಿಂದ ಎಫ್ರೋನ್ ಬೆಟ್ಟದ ಸಮೀಪದ ನಗರಗಳಿಗೆ ಹೋಗುತ್ತದೆ; ಅಲ್ಲಿಂದ ತಿರುಗಿ “ಬಾಲಾ” ಎಂಬ ಊರಿಗೆ ಹೋಗುತ್ತದೆ. (ಬಾಲಾವನ್ನು ಕಿರ್ಯತ್ಯಾರೀಮ್ ಎಂದೂ ಕರೆಯುತ್ತಾರೆ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಫ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ಪಟ್ಟಣಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನ್ನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಪ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ನಗರಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಫ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ಪಟ್ಟಣಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಅನ್ನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆ ಬೆಟ್ಟದ ಶಿಖರದಿಂದ ನೆಫ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣಗಳಿಗೂ ಅಲ್ಲಿಂದ ಕಿರ್ಯತ್ ಯಾರೀಮ್ ಆದ ಬಾಲಾ ಎಂಬ ಊರಿನವರೆಗೆ ಹೋಗುತ್ತದೆ. ಅಧ್ಯಾಯವನ್ನು ನೋಡಿ |
ಆಗ ದಾವೀದನು ತನ್ನ ಜನರೊಂದಿಗೆ ಯೆಹೂದದ ಬಾಳಾ ಎಂಬಲ್ಲಿಗೆ ಹೋದನು. ಯೆಹೂದದ ಬಾಳಾ ಎಂಬ ಸ್ಥಳದಲ್ಲಿದ್ದ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದನು. ಯೆಹೋವನನ್ನು ಆರಾಧಿಸುವುದಕ್ಕಾಗಿ ಜನರು ಪವಿತ್ರ ಪೆಟ್ಟಿಗೆಯ ಬಳಿ ಹೋಗುತ್ತಿದ್ದರು. ಪವಿತ್ರ ಪೆಟ್ಟಿಗೆಯು ಯೆಹೋವನ ಪೀಠದಂತಿತ್ತು. ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಯೆಹೋವನು ರಾಜನಂತೆ ದೂತರ ಮೇಲೆ ಆಸೀನನಾಗಿದ್ದನು.