Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 16:1 - ಪರಿಶುದ್ದ ಬೈಬಲ್‌

1 ಯೋಸೇಫನ ಕುಟುಂಬದವರು ಈ ಸ್ವಾಸ್ತ್ಯವನ್ನು ಪಡೆದುಕೊಂಡರು. ಅವರ ಸ್ವಾಸ್ತ್ಯವು ಜೋರ್ಡನ್ ನದಿಯಿಂದ (ಜೆರಿಕೊ ಹತ್ತಿರ) ಆರಂಭವಾಗಿ ಜೆರಿಕೊವಿನ ಹಳ್ಳಗಳ ಉದ್ದಕ್ಕೂ ಮುಂದುವರೆದಿದೆ. (ಇದು ಜೆರಿಕೊವಿನ ಪೂರ್ವದಲ್ಲಿದೆ.) ಆ ಸೀಮೆಯು ಜೆರಿಕೊವಿನಿಂದ ಬೇತೇಲಿನ ಬೆಟ್ಟಪ್ರದೇಶಕ್ಕೆ ಮುಂದುವರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಸೇಫನ ವಂಶದವರಿಗೆ ದೊರಕಿದ ಸ್ವತ್ತಿನ ಮೇರೆಯು: ಯೆರಿಕೋವಿನ ಬಳಿಯಲ್ಲಿ ಯೊರ್ದನ್ ತೀರದಿಂದ ಯೆರಿಕೋವಿನ ಪೂರ್ವದಲ್ಲಿದ್ದ ನದಿ, ಯೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಬೆಟ್ಟದ ಸೀಮೆಯ ಅರಣ್ಯ ಹಾಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜೋಸೆಫನ ವಂಶದವರಿಗೆ ದೊರಕಿದ ಆಸ್ತಿಪಾಸ್ತಿಯ ಎಲ್ಲೆಯು ಜೆರಿಕೋವಿನ ಬಳಿಯಲ್ಲಿ ಜೋರ್ಡನ್ ತೀರದಿಂದ ತೊಡಗಿ ಜೆರಿಕೋವಿನ ಪೂರ್ವದಲ್ಲಿದ್ದ ನದಿ, ಜೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಮಲೆನಾಡಿನ ಮರುಭೂಮಿ ಹಾಗೂ ಬೇತೇಲ್ ಇವುಗಳ ಮೇಲೆ ಲೂಜಿಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಸೇಫನ ವಂಶದವರಿಗೆ ದೊರಕಿದ ಸ್ವಾಸ್ತ್ಯದ ಮೇರೆಯು ಯೆರಿಕೋವಿನ ಬಳಿಯಲ್ಲಿ ಯೊರ್ದನ್ ತೀರದಿಂದ ತೊಡಗಿ ಯೆರಿಕೋವಿನ ಪೂರ್ವದಲ್ಲಿದ್ದ ಹಳ್ಳ, ಯೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಬೆಟ್ಟದ ಸೀಮೆಯ ಅರಣ್ಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಉಂಟಾದ ಸೊತ್ತಿನ ವಿವರ: ಯೆರಿಕೋವಿನ ಬಳಿಯಲ್ಲಿರುವ ಯೊರ್ದನ್ ನದಿಯಿಂದ ಪೂರ್ವದಲ್ಲಿರುವ ಯೆರಿಕೋವಿನ ಜಲದವರೆಗೂ ಮತ್ತು ಬೇತೇಲಿನ ಬೆಟ್ಟಗಳವರೆಗೂ ಇರುವ ಮರುಭೂಮಿಯ ಮಾರ್ಗವಾಗಿ ಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 16:1
10 ತಿಳಿವುಗಳ ಹೋಲಿಕೆ  

ಅದರ ಉತ್ತರದಿಕ್ಕಿನ ಮೇರೆಯು ಜೋರ್ಡನ್ ನದಿಯಿಂದ ಆರಂಭವಾಗುತ್ತದೆ. ಅದು ಜೆರಿಕೊವಿನ ಉತ್ತರ ಅಂಚಿನೊಂದಿಗೆ ಹೊರಟು ಪಶ್ಚಿಮದ ಬೆಟ್ಟಪ್ರದೇಶದೊಳಗೆ ಹೋಗುತ್ತದೆ. ಆ ಸೀಮೆಯು ಬೇತಾವೆನಿನ ಪೂರ್ವದಿಕ್ಕಿಗೆ ಅತಿಸಮೀಪದಲ್ಲಿ ಮುಂದುವರೆದು


ಯೆಹೋಶುವನು ಮತ್ತು ಇಸ್ರೇಲರ ಎಲ್ಲ ಜನರು “ಆಯಿ”ಯ ಸೈನ್ಯವು ತಮ್ಮನ್ನು ಹಿಮ್ಮೆಟ್ಟುವುದಕ್ಕೆ ಅವಕಾಶ ಮಾಡಿಕೊಟ್ಟರು. ಯೆಹೋಶುವನು ಮತ್ತು ಅವನ ಜನರು ಪೂರ್ವಕ್ಕೆ ಮರಭೂಮಿಯ ಕಡೆಗೆ ಓಡಲು ಪ್ರಾರಂಭಿಸಿದರು.


ಯೆಹೂದದ ಜನರಿಗೆ ಮರುಭೂಮಿಯಲ್ಲಿಯೂ ಕೆಲವು ಊರುಗಳನ್ನು ಕೊಡಲಾಯಿತು. ಆ ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಬೇತ್‌ಅರಾಬಾ, ಮಿದ್ದೀನ್, ಸೆಕಾಕಾ,


ದಾವೀದನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಕೆಲವು ವಸ್ತುಗಳನ್ನು ಬೇತೇಲಿನವರಿಗೆ, ನೆಗೆವಿನ ರಾಮೋತಿನವರಿಗೆ, ಯತ್ತೀರಿನವರಿಗೆ,


ರಾಹೇಲಳ ಗಂಡುಮಕ್ಕಳು: ಯೋಸೇಫ ಮತ್ತು ಬೆನ್ಯಾಮೀನ್.


ಅವರು ಆ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಲಿ. ಯೆಹೂದದ ಜನರು ದಕ್ಷಿಣದಲ್ಲಿ ತಮ್ಮ ಭೂಮಿಯನ್ನು ಇಟ್ಟುಕೊಳ್ಳಲಿ. ಯೋಸೇಫನ ಜನರು ಉತ್ತರದಲ್ಲಿ ತಮ್ಮ ಭೂಮಿಯನ್ನು ಇಟ್ಟುಕೊಳ್ಳಲಿ.


ಯೋಸೇಫನ ಕುಲದವರು ಲೂಜ್ ಎಂಬ ಬೇತೇಲ್ ನಗರದ ಮೇಲೆ ಧಾಳಿಮಾಡಲು ಹೋದರು. ಯೆಹೋವನು ಯೋಸೇಫನ ಕುಲದವರ ಸಂಗಡ ಇದ್ದನು. ಯೋಸೇಫನ ಕುಲದವರು ಬೇತೇಲ್ ನಗರಕ್ಕೆ ಕೆಲವು ಜನ ಗೂಢಚಾರರನ್ನು ಕಳುಹಿಸಿದರು. ಇವರು ಬೇತೇಲ್ ನಗರವನ್ನು ವಶಪಡಿಸಿಕೊಳ್ಳುವ ಮಾರ್ಗಗಳ ಬಗ್ಗೆ ಯೋಚಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು