Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 16:2 - ಪರಿಶುದ್ದ ಬೈಬಲ್‌

2 ಲೂಜ್ ಎಂದು ಕರೆಯುವ ಬೇತೇಲಿನಿಂದ ಅಟಾರೋತಿನಲ್ಲಿ ಅರ್ಕೀಯರ ಸೀಮೆಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬೇತೇಲ್ ಇವುಗಳ ಮೇಲೆ ಲೂಜಿಗೂ ಹೋಗುತ್ತದೆ. ಅಲ್ಲಿಂದ ಅರ್ಕಿಯರ ಮೇರೆಯನ್ನು ಅನುಸರಿಸಿ ಅಟಾರೋತಿಗೆ ಹೋಗುತ್ತದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿಂದ ಅರ್ಕೀಯರ ಎಲ್ಲೆಯನ್ನು ಅನುಸರಿಸಿ ಅಟಾರೋತಿಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬೇತೇಲ್ ಇವುಗಳ ಮೇಲೆ ಲೂಜಿಗೆ ಹೋಗುತ್ತದೆ. ಅಲ್ಲಿಂದ ಅರ್ಕೀಯರ ಮೇರೆಯನ್ನು ಅನುಸರಿಸಿ ಅಟಾರೋತಿಗೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಬೇತೇಲಿನಿಂದ ಅಂದರೆ ಲೂಜ್ ಅಲ್ಲಿಂದ ಅರ್ಕಿಯ ಮೇರೆಗಳಾದ ಅಟಾರೋತನ್ನು ದಾಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 16:2
8 ತಿಳಿವುಗಳ ಹೋಲಿಕೆ  

ದಕ್ಷಿಣದಲ್ಲಿರುವ ಬೇತೇಲ್ ಎಂಬ ಲೂಜಿಗೆ ಹೋಗುತ್ತದೆ. ಅಲ್ಲಿಂದ ಇಳಿದು ಅಟಾರೋತದ್ದಾರ್‌ಗೆ ಹೋಗುತ್ತದೆ. ಅಟಾರೋತದ್ದಾರ್ ಕೆಳಗಿನ ಬೇತ್‌ಹೋರೋನಿನ ದಕ್ಷಿಣದಲ್ಲಿರುವ ಬೆಟ್ಟದ ಮೇಲೆ ಇದೆ.


ಆ ಸ್ಥಳದ ಹೆಸರು ಲೂಜ್. ಆದರೆ ಯಾಕೋಬನು ಅದಕ್ಕೆ ಬೇತೇಲ್ ಎಂದು ಹೆಸರಿಟ್ಟನು.


ಅಹೀತೋಫೆಲನು ರಾಜನ ಮಂತ್ರಾಲೋಚಕನಾಗಿದ್ದನು. ಹೂಷೈ ರಾಜನ ಮಿತ್ರನಾಗಿದ್ದನು. ಇವನು ಅರ್ಕೀಯ ಜನರಿಗೆ ಸೇರಿದವನಾಗಿದ್ದನು.


ದಾವೀದನ ಸ್ನೇಹಿತನೂ ಅರ್ಕೀಯನೂ ಆದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದನು. ಹೂಷೈಯು, “ರಾಜನು ಚಿರಾಯುವಾಗಿರಲಿ, ರಾಜನು ಚಿರಾಯುವಾಗಿರಲಿ” ಎಂದು ಅಬ್ಷಾಲೋಮನಿಗೆ ಹೇಳಿದನು.


ದಾವೀದನು ಬೆಟ್ಟದ ಮೇಲೆ ದೇವರನ್ನು ಆರಾಧಿಸಿದನು. ಆ ಸಮಯದಲ್ಲಿ ಅರ್ಕೀಯನಾದ ಹೂಷೈ ಎಂಬವನು ಅವನಲ್ಲಿಗೆ ಬಂದನು. ಹೂಷೈನ ಅಂಗಿಯು ಹರಿದಿತ್ತು. ಅವನ ತಲೆಯ ಮೇಲೆಲ್ಲಾ ಧೂಳಿತ್ತು.


ಎಫ್ರಾಯೀಮನ ಸಂತತಿಯವರು ವಾಸಿಸಿದ ಪಟ್ಟಣಗಳು ಯಾವುವೆಂದರೆ: ಬೇತೇಲ್ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಪೂರ್ವದಲ್ಲಿ ನಾರಾನ್; ಪಶ್ಚಿಮದಲ್ಲಿ ಗೆಜೆರ್ ಪಟ್ಟಣ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಶೆಕೆಮ್ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು, ಅಯ್ಯಾ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು;


ದಾವೀದನ ಗೆಳೆಯನಾದ ಹೂಷೈ ನಗರಕ್ಕೆ ಹೋದನು. ಅಬ್ಷಾಲೋಮನು ಜೆರುಸಲೇಮಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು