Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 16:7 - ಪರಿಶುದ್ದ ಬೈಬಲ್‌

7 ಅಲ್ಲಿಂದ ಆ ಸೀಮೆಯು ಯಾನೋಹ ಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತದೆ. ಆ ಸೀಮೆಯು ಜೆರಿಕೊವಿನವರೆಗೆ ಮುನ್ನಡೆದು ಜೋರ್ಡನ್ ನದಿಯ ಹತ್ತಿರ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಲ್ಲಿಂದ ಯಾನೋಹ ಊರಿನ ಪೂರ್ವಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತಾ ಯೆರಿಕೋ ಪ್ರಾಂತ್ಯಕ್ಕೆ ಬಂದು ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಲ್ಲಿಂದ ಯಾನೋಹ ಊರಿನ ಪೂರ್ವಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತಾ ಯೆರಿಕೋ ಪ್ರಾಂತಕ್ಕೆ ತಗಲಿ ಯೊರ್ದನ್ ಹೊಳೆಯ ತೀರದಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾನೋಹದಿಂದ ಅಟಾರೋತ್‌ಗೂ ನಾರಾ ಎಂಬ ಊರುಗಳ ಮೇಲೆ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನ್ ನದಿಗೆ ಮುಗಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 16:7
6 ತಿಳಿವುಗಳ ಹೋಲಿಕೆ  

ಎಫ್ರಾಯೀಮನ ಸಂತತಿಯವರು ವಾಸಿಸಿದ ಪಟ್ಟಣಗಳು ಯಾವುವೆಂದರೆ: ಬೇತೇಲ್ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಪೂರ್ವದಲ್ಲಿ ನಾರಾನ್; ಪಶ್ಚಿಮದಲ್ಲಿ ಗೆಜೆರ್ ಪಟ್ಟಣ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಶೆಕೆಮ್ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು, ಅಯ್ಯಾ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು;


ಆ ಸಮಯದಲ್ಲಿ ಯೆಹೋಶುವನು, ಇಸ್ರೇಲಿನ ಜನರಿಂದ ಪ್ರಮಾಣಮಾಡಿಸಿ ಅವರಿಗೆ, “ಈ ಜೆರಿಕೊ ಪಟ್ಟಣವನ್ನು ಪುನಃ ಕಟ್ಟಲು ಪ್ರಯತ್ನಿಸುವವನು ಯೆಹೋವನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಲಿ. ಈ ನಗರಕ್ಕೆ ಅಡಿಗಲ್ಲನ್ನಿಡುವ ವ್ಯಕ್ತಿಯು ತನ್ನ ಹಿರಿಯ ಮಗನನ್ನು ಕಳೆದುಕೊಳ್ಳಲಿ; ಹೆಬ್ಬಾಗಿಲನ್ನು ನಿಲ್ಲಿಸುವ ವ್ಯಕ್ತಿ ತನ್ನ ಕಿರಿಯ ಮಗನನ್ನು ಕಳೆದುಕೊಳ್ಳಲಿ” ಎಂದು ಹೇಳಿದನು.


ಜೆರಿಕೊ ಪಟ್ಟಣದ ಬಾಗಿಲನ್ನು ಮುಚ್ಚಲಾಗಿತ್ತು. ಇಸ್ರೇಲರು ಸಮೀಪದಲ್ಲೇ ಇದ್ದುದರಿಂದ ಪಟ್ಟಣದ ಜನರು ಹೆದರಿಕೊಂಡಿದ್ದರು. ಒಬ್ಬರಾದರೂ ಪಟ್ಟಣದಲ್ಲಿ ಪ್ರವೇಶ ಮಾಡಲಿಲ್ಲ; ಒಬ್ಬರಾದರೂ ಪಟ್ಟಣದಿಂದ ಹೊರ ಬರಲಿಲ್ಲ.


ಆಗ ನೀರು ಹರಿಯದೆ ನಿಂತುಬಿಟ್ಟಿತು. ಆ ಸ್ಥಳದ ಹಿಂಭಾಗದಲ್ಲಿ ಒಂದು ಸರೋವರದಂತೆ ನೀರು ತುಂಬಿಕೊಂಡಿತು. ನೀರು ಬಹುದೂರದಲ್ಲಿರುವ ಆದಾಮ್ ಊರು ಅಂದರೆ ಜಾರೆತಾನಿನ ಹತ್ತಿರ ಇರುವ ಒಂದು ಊರಿನವರೆಗೂ ರಾಶಿರಾಶಿಯಾಗಿ ನಿಂತುಕೊಂಡಿತು. ಜನರು ಜೆರಿಕೊವಿನ ಹತ್ತಿರ ನದಿಯನ್ನು ದಾಟಿದರು.


ಅಬಾರೀಮ್ ಬೆಟ್ಟಗಳಿಂದ ಹೊರಟು, ಜೆರಿಕೊ ಪಟ್ಟಣದ ಆಚೆಕಡೆಯಲ್ಲಿರುವ ಜೋರ್ಡನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.


ಅದರ ಪಶ್ಚಿಮದಿಕ್ಕಿನ ಸೀಮೆಯು ಮಿಕ್ಮೆತಾತ್‌ನಿಂದ ಆರಂಭವಾಗಿ ಪೂರ್ವದ ಕಡೆಗೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗಿ ಯಾನೋಹ ಊರಿನ ಪೂರ್ವದಿಕ್ಕಿನಲ್ಲಿ ಮುಂದುವರಿಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು