ಯೆಹೋಶುವ 16:9 - ಪರಿಶುದ್ದ ಬೈಬಲ್9 ಎಫ್ರಾಯೀಮಿನ ಹಲವಾರು ಗಡಿಯ ಗ್ರಾಮಗಳು ಮನಸ್ಸೆ ಕುಲದವರ ಪ್ರದೇಶದೊಳಗೆ ಸೇರಿಕೊಂಡಿದ್ದವು. ಆದರೂ ಎಫ್ರಾಯೀಮ್ ಜನರು ಆ ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ತಮ್ಮ ಸ್ವತ್ತಾಗಿ ಮಾಡಿಕೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ಎಫ್ರಾಯೀಮ್ ಕುಲದವರ ಮತ್ತು ಮನಸ್ಸೆ ಕುಲದವರ ಮಧ್ಯದಲ್ಲಿ ಪ್ರತ್ಯೇಕವಾದ ಕೆಲವು ಪಟ್ಟಣಗಳು ಅವುಗಳಿಗೆ ಸೇರಿದ ಗ್ರಾಮಗಳು ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದಲ್ಲದೆ, ಎಫ್ರಯಿಮ್ ಕುಲದವರಿಗೆ ಮನಸ್ಸೆ ಕುಲದವರ ಮಧ್ಯೆ ಪ್ರತ್ಯೇಕವಾದ ಕೆಲವು ನಗರಗಳೂ ಅವಕ್ಕೆ ಸೇರಿದ ಗ್ರಾಮಗಳೂ ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ಎಫ್ರಾಯೀಮ್ ಕುಲದವರಿಗೆ ಮನಸ್ಸೆಕುಲದವರ ಮಧ್ಯದಲ್ಲಿ ಪ್ರತ್ಯೇಕವಾದ ಕೆಲವು ಪಟ್ಟಣಗಳೂ ಅವುಗಳ ಗ್ರಾಮಗಳೂ ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ಎಫ್ರಾಯೀಮ್ ಹಾಗೂ ಮನಸ್ಸೆ ಗೋತ್ರದವರ ಮಧ್ಯೆ ಕೊಡಲಾದ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಪ್ರತ್ಯೇಕವಾಗಿ ಕೊಡಲಾಗಿತ್ತು. ಅಧ್ಯಾಯವನ್ನು ನೋಡಿ |