Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:1 - ಪರಿಶುದ್ದ ಬೈಬಲ್‌

1 ಆಮೇಲೆ ಮನಸ್ಸೆ ಕುಲದವರಿಗೆ ಭೂಮಿಯನ್ನು ಕೊಡಲಾಯಿತು. ಮನಸ್ಸೆಯು ಯೋಸೇಫನ ಚೊಚ್ಚಲ ಮಗನು. ಗಿಲ್ಯಾದನ ತಂದೆಯಾದ ಮಾಕೀರನು ಮನಸ್ಸೆಯ ಚೊಚ್ಚಲ ಮಗನು. ಮಾಕೀರನು ವೀರ ಸೈನಿಕನಾಗಿದ್ದನು. ಈ ಕಾರಣದಿಂದ ಗಿಲ್ಯಾದ್ ಮತ್ತು ಬಾಷಾನ್ ಕ್ಷೇತ್ರಗಳನ್ನು ಮಾಕೀರ ಮನೆತನದವರಿಗೆ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಸೇಫನ ಚೊಚ್ಚಲ ಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವತ್ತಿನ ವಿವರ: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾಗಿದ್ದನು. ಆದ್ದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜೋಸೆಫನ ಚೊಚ್ಚಲ ಮಗ ಮನಸ್ಸೆಯ ವಂಶದವರಿಗೆ ದೊರಕಿದ ಸೊತ್ತಿನ ವಿವರ ಇದು: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆದ ಮಾಕೀರನು ಯುದ್ಧವೀರನು. ಆದ್ದರಿಂದ ಅವನಿಗೆ ಗಿಲ್ಯಾದ, ಬಾಷಾನ ಎಂಬ ಪ್ರಾಂತ್ಯಗಳು ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಸೇಫನ ಚೊಚ್ಚಲಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವಾಸ್ತ್ಯದ ವಿವರ. ಮನಸ್ಸೆಯ ಹಿರೀಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾದದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತಗಳು ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗ ದೊರೆಯಿತು. ಏಕೆಂದರೆ ಅವನು ಯೋಸೇಫನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದುದರಿಂದ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಅವನ ಪಾಲಿಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:1
20 ತಿಳಿವುಗಳ ಹೋಲಿಕೆ  

ಮನಸ್ಸೆ ಕುಲದ ಕುಟುಂಬಗಳು: ಮಾಕೀರನ ಕುಟುಂಬದವರಾದ ಮಾಕೀರ್ಯರು; ಮಾಕೀರನ ಮಗನಾದ ಗಿಲ್ಯಾದನ ಕುಟುಂಬದವರಾದ ಗಿಲ್ಯಾದ್ಯರು.


ಮೊದಲನೆಯ ಮಗನು ಹುಟ್ಟಿದಾಗ, “ನನ್ನ ಎಲ್ಲಾ ಕಷ್ಟಗಳನ್ನೂ ನನ್ನ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ನನಗೆ ಸಹಾಯ ಮಾಡಿದನು” ಎಂದು ಹೇಳಿ ಯೋಸೇಫನು ಆ ಮಗುವಿಗೆ, “ಮನಸ್ಸೆ” ಎಂದು ಹೆಸರಿಟ್ಟನು.


ಯೋಸೇಫನು ಜೀವದಿಂದಿದ್ದ ಕಾಲದಲ್ಲಿ, ಎಫ್ರಾಯೀಮನು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆದನು. ಅವನ ಮಗನಾದ ಮನಸ್ಸೆಗೆ ಮಾಕೀರನೆಂಬ ಗಂಡುಮಗನು ಹುಟ್ಟಿದನು. ಯೋಸೇಫನು ಮಾಕೀರನ ಮಕ್ಕಳನ್ನೂ ನೋಡಿದನು.


ಈಜಿಪ್ಟಿನಲ್ಲಿ ಯೋಸೇಫನಿಗೆ ಇಬ್ಬರು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಮನಸ್ಸೆ ಮತ್ತು ಎಫ್ರಾಯೀಮ್. (ಯೋಸೇಫನ ಹೆಂಡತಿ “ಆಸನತ್” ಈಕೆ ಓನ್ ಪಟ್ಟಣದ ಆಚಾರ್ಯನಾಗಿದ್ದ ಫೋಟೀಫರನ ಮಗಳು.)


ಯೋಸೇಫನು ತನ್ನ ತಂದೆಗೆ, “ನೀನು ನಿನ್ನ ಬಲಗೈಯನ್ನು ತಪ್ಪಾಗಿ ಎಫ್ರಾಯೀಮನ ಮೇಲೆ ಇಟ್ಟಿರುವೆ. ಮೊದಲು ಹುಟ್ಟಿದವನು ಮನಸ್ಸೆ” ಎಂದು ಹೇಳಿದನು.


ಆದರೆ ಗೆಷೂರ್ ಮತ್ತು ಅರಾಮನು ಯಾಯೀರನ ಊರುಗಳನ್ನು ವಶಪಡಿಸಿಕೊಂಡರು. ಅದರಲ್ಲಿ ಕೆನತ್ ಮತ್ತು ಅದರ ಸುತ್ತಮುತ್ತಲಿದ್ದ ಕೆಲವು ಹಳ್ಳಿಗಳು ಸೇರಿದ್ದವು. ಒಟ್ಟು ಅರವತ್ತು ಸಣ್ಣ ಪಟ್ಟಣಗಳಿದ್ದವು. ಇವೆಲ್ಲವೂ ಗಿಲ್ಯಾದನ ತಂದೆಯಾದ ಮಾಕೀರನಿಗೆ ಸೇರಿದವುಗಳಾಗಿದ್ದವು.


“ಅಮಾಲೇಕ್ ಪರ್ವತ ಪ್ರದೇಶದಲ್ಲಿ ವಾಸಮಾಡುತ್ತಿದ್ದ ಎಫ್ರಾಯೀಮ್ಯರು ಬಂದರು; ನಿನ್ನನ್ನೂ ನಿನ್ನ ಜನರನ್ನೂ ಅನುಸರಿಸುತ್ತಿದ್ದ ಬೆನ್ಯಾಮೀನ್ಯರೂ ಬಂದರು; ಮಾಕೀರನ ಕುಲದಿಂದ ನಾಯಕರು ಬಂದರು; ಜೆಬುಲೂನ್ ಕುಲದಿಂದ ನಾಯಕರು ಕಂಚಿನ ದೊಣ್ಣೆಗಳೊಡನೆ ಬಂದರು.


ತಾನು ಪ್ರೀತಿಸದೆ ಇರುವ ಹೆಂಡತಿಯ ಚೊಚ್ಚಲಮಗನನ್ನು ಅವನು ಸ್ವೀಕರಿಸಬೇಕು. ಆ ಚೊಚ್ಚಲಮಗನಿಗೆ ಬೇರೆ ಮಕ್ಕಳಿಗಿಂತ ಎರಡು ಪಾಲು ಆಸ್ತಿಯನ್ನು ಕೊಡಬೇಕು. ಯಾಕೆಂದರೆ ಅವನು ನಿಮ್ಮ ಚೊಚ್ಚಲ ಮಗನು. ಚೊಚ್ಚಲ ಮಗನ ಹಕ್ಕು ಅವನಿಗೆ ಸೇರಿದ್ದು.


ಆಗ ಮೋಶೆಯು ಗಾದ್ ಮತ್ತು ರೂಬೇನ್ ಕುಲಗಳವರಿಗೆ ಮತ್ತು ಯೋಸೇಫನ ಮಗನಾದ ಮನಸ್ಸೆಯ ಅರ್ಧಕುಲದವರಿಗೆ ಅಮೋರಿಯರ ರಾಜನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ರಾಜನಾದ ಓಗನ ರಾಜ್ಯವನ್ನೂ ಅವುಗಳ ಎಲ್ಲಾ ಊರುಗಳನ್ನೂ ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.


ಚಲ್ಪಹಾದನು ಹೇಫೆರನ ಮಗನು. ಹೇಫೆರನು ಗಿಲ್ಯಾದನ ಮಗನು. ಗಿಲ್ಯಾದನು ಮಾಕೀರನ ಮಗನು. ಮಾಕೀರನು ಮನಸ್ಸೆಯ ಮಗನು. ಮನಸ್ಸೆಯು ಯೋಸೇಫನ ಮಗನು. ಚಲ್ಪಹಾದನಿಗೆ ಐದುಮಂದಿ ಹೆಣ್ಣುಮಕ್ಕಳಿದ್ದರು. ಅವರು ಯಾರೆಂದರೆ: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ.


ಇಸ್ರೇಲನು ತನ್ನ ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲಿಟ್ಟಿದ್ದರಿಂದ ಯೋಸೇಫನು ಅಸಮಾಧಾನದಿಂದ ನೋಡಿ ತಂದೆಯ ಕೈಯನ್ನು ಹಿಡಿದುಕೊಂಡನು; ಅಲ್ಲದೆ ತಂದೆಯ ಕೈಯನ್ನು ಎಫ್ರಾಯೀಮನ ತಲೆಯ ಮೇಲಿಂದ ತೆಗೆದುಕೊಂಡು ಮನಸ್ಸೆಯ ತಲೆಯ ಮೇಲೆ ಇಡಬೇಕೆಂದಿದ್ದನು.


ಮನಸ್ಸೆ ಕುಲದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೇರ್, ಶೆಮೀದಾ ಎಂಬವರ ವಂಶದವರಿಗೂ ಭೂಮಿಯನ್ನು ಕೊಡಲಾಯಿತು. ಇವರೆಲ್ಲರು ಯೋಸೇಫನ ಮಗನಾದ ಮನಸ್ಸೆಯ ಉಳಿದ ಗಂಡುಮಕ್ಕಳು. ಈ ಜನರ ವಂಶದವರೂ ತಮ್ಮ ಪಾಲಿನ ಭೂಮಿಯನ್ನು ಪಡೆದುಕೊಂಡರು.


ಮೋಶೆಯು ಮನಸ್ಸೆಕುಲದ ಅರ್ಧಜನರಿಗೆ ಬಾಷಾನ್ ಪ್ರದೇಶವನ್ನು ಕೊಟ್ಟಿದ್ದನು. ಯೆಹೋಶುವನು ಮನಸ್ಸೆಕುಲದ ಉಳಿದರ್ಧ ಜನರಿಗೆ ಜೋರ್ಡನ್ ನದಿಯ ಪಶ್ಚಿಮಕ್ಕೆ ಭೂಮಿಯನ್ನು ಕೊಟ್ಟನು. ಯೆಹೋಶುವನು ಅವರನ್ನು ಆಶೀರ್ವದಿಸಿ ಮನೆಗೆ ಕಳುಹಿಸಿದನು.


ಎರಡನೆ ಮಗನು ಹುಟ್ಟಿದಾಗ, “ನನಗೆ ಕಷ್ಟ ಬಂದ ದೇಶದಲ್ಲೇ ದೇವರು ನನ್ನನ್ನು ಅಭಿವೃದ್ಧಿಪಡಿಸಿದನು” ಎಂದು ಹೇಳಿ, ಆ ಮಗುವಿಗೆ, “ಎಫ್ರಾಯೀಮ್” ಎಂದು ಹೆಸರಿಟ್ಟನು.


ಆ ಸ್ಥಳದಲ್ಲಿ ಅಬ್ನೇರನು ಈಷ್ಬೋಶೆತನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್ ಮತ್ತು ಬೆನ್ಯಾಮೀನ್ ಜನರ ಮೇಲೆಯೂ ಮತ್ತು ಇಸ್ರೇಲಿಗೆಲ್ಲ ರಾಜನನ್ನಾಗಿ ಮಾಡಿದನು.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲರ ಹನ್ನೆರಡು ಕುಲಗಳಿಗೆ ದೇಶವನ್ನು ವಿಂಗಡಿಸುವಾಗ ಅವುಗಳ ಮೇರೆ ಯಾವುವೆಂದರೆ, ಯೋಸೇಫನಿಗೆ ಎರಡು ಪಾಲು ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು