ಯೆಹೋಶುವ 17:10 - ಪರಿಶುದ್ದ ಬೈಬಲ್10 ದಕ್ಷಿಣದ ಭೂಮಿ ಎಫ್ರಾಯೀಮ್ ಜನರಿಗೆ ಸೇರಿದೆ. ಉತ್ತರದ ಭೂಮಿ ಮನಸ್ಸೆಯ ಜನರಿಗೆ ಸೇರಿದೆ. ಮೆಡಿಟರೆನಿಯನ್ ಸಮುದ್ರವು ಅದರ ಪಶ್ಚಿಮದ ಗಡಿಯಾಗಿತ್ತು. ಅದರ ಸೀಮೆಯು ಉತ್ತರದಲ್ಲಿ ಆಶೇರ್ ಕುಲದವರ ಪ್ರಾಂತ್ಯವನ್ನೂ ಪೂರ್ವದಲ್ಲಿ ಇಸ್ಸಾಕಾರ್ ಕುಲದವರ ನಾಡನ್ನೂ ಮುಟ್ಟುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ಹಳ್ಳದ ದಕ್ಷಿಣ ತೀರವು ಎಫ್ರಾಯೀಮ್ಯರದು; ಉತ್ತರ ತೀರವು ಮನಸ್ಸೆಯವರದು. ಸಮುದ್ರವೇ ಇವರ ಪಶ್ಚಿಮದ ಮೇರೆಯು. ಉತ್ತರಕ್ಕೆ ಆಶೇರ್ ಕುಲದವರ ಪ್ರಾಂತ್ಯವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ದೇಶವೂ ಇರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆ ಹಳ್ಳದ ದಕ್ಷಿಣ ತೀರ ಎಫ್ರಯಿಮ್ಯರದು; ಉತ್ತರ ತೀರ ಮನಸ್ಸೆಯವರದು. ಸಮುದ್ರವೇ ಇವರ ಪಶ್ಚಿಮದ ಎಲ್ಲೆ. ಉತ್ತರಕ್ಕೆ ಆಶೇರ ಕುಲದವರ ಪ್ರಾಂತ್ಯವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ನಾಡೂ ಇರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಹಳ್ಳದ ದಕ್ಷಿಣ ತೀರವು ಎಫ್ರಾಯೀಮ್ಯರದು; ಉತ್ತರ ತೀರವು ಮನಸ್ಸೆಯವರದು. ಮಹಾಸಾಗರವೇ ಇವರ ಪಶ್ಚಿಮದ ಮೇರೆ. ಉತ್ತರಕ್ಕೆ ಆಶೇರ್ ಕುಲದವರ ಪ್ರಾಂತವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ದೇಶವೂ ಇರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನದಿಯ ದಕ್ಷಿಣ ಸೀಮೆ ಎಫ್ರಾಯೀಮನದು; ಉತ್ತರ ಸೀಮೆ ಮನಸ್ಸೆಯದು, ಮೆಡಿಟೆರೆನಿಯನ್ ಸಮುದ್ರವು ಅದರ ಮೇರೆಯಾಗಿರುವುದು. ಉತ್ತರಕ್ಕೆ ಇರುವ ಆಶೇರ್ ಗೋತ್ರದವರ ಪ್ರಾಂತವೂ ಪೂರ್ವಕ್ಕೆ ಇರುವ ಇಸ್ಸಾಕಾರ್ ಗೋತ್ರವೂ ಇರುವುದು. ಅಧ್ಯಾಯವನ್ನು ನೋಡಿ |
ಮನಸ್ಸೆ ಕುಲದವರು ಇಸ್ಸಾಕಾರ್, ಆಶೇರ್ ಪ್ರಾಂತಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲೆಯಾಮ್ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನಕ್, ಮೆಗಿದ್ದೋ ಮತ್ತು ಆ ಪಟ್ಟಣಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು.