Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:15 - ಪರಿಶುದ್ದ ಬೈಬಲ್‌

15 ಯೆಹೋಶುವನು, “ನಿಮ್ಮಲ್ಲಿ ಬಹಳ ಜನರಿದ್ದರೆ ಬೆಟ್ಟಪ್ರದೇಶಕ್ಕೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ. ಆ ಭೂಮಿಯು ಈಗ ಪೆರಿಜ್ಜೀಯರ ಮತ್ತು ರೆಫಾಯರ ಸ್ವತ್ತಾಗಿದೆ. ನಿಮಗೆ ಕೊಟ್ಟಿರುವ ಎಫ್ರಾಯೀಮ್ ಬೆಟ್ಟಪ್ರದೇಶವು ಚಿಕ್ಕದೆನಿಸಿದರೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋಶುವನು ಅವರಿಗೆ, “ಮಹಾಜನಾಂಗವಾದ ನಿಮಗೆ ಎಫ್ರಾಯೀಮ್ ಬೆಟ್ಟದ ಸೀಮೆ ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ಸೀಮೆಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳಮಾಡಿಕೊಳ್ಳಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಯೆಹೋಶುವನು, “ಮಹಾಜನಾಂಗವಾದ ನಿಮಗೆ ಎಫ್ರಯಿಮ್ ಮಲೆನಾಡು ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳ ಮಾಡಿಕೊಳ್ಳಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋಶುವನು ಅವರಿಗೆ - ಮಹಾಜನಾಂಗವಾದ ನಿಮಗೆ ಎಫ್ರಾಯೀಮ್ ಬೆಟ್ಟದ ಸೀಮೆ ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ಸೀಮೆಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳಮಾಡಿಕೊಳ್ಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಯೆಹೋಶುವನು ಉತ್ತರವಾಗಿ ಅವರಿಗೆ, “ನೀವು ಹೆಚ್ಚು ಜನರಾಗಿದ್ದರೆ ಮತ್ತು ನಿಮಗೆ ಎಫ್ರಾಯೀಮ್ ಪರ್ವತವು ಸಾಲದಿದ್ದರೆ, ನೀವು ಪೆರಿಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡನ್ನು ಕಡಿದು ನಿಮಗೆ ಸ್ಥಳಮಾಡಿಕೊಳ್ಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:15
12 ತಿಳಿವುಗಳ ಹೋಲಿಕೆ  

ಆದ್ದರಿಂದ ಹದಿನಾಲ್ಕನೆಯ ವರ್ಷದಲ್ಲಿ, ರಾಜನಾದ ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅವರ ವಿರೋಧವಾಗಿ ಯುದ್ಧಮಾಡಲು ಬಂದರು. ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅಷ್ಟರೋತ್-ಕರ್ನಯಿಮಿನಲ್ಲಿದ್ದ ರೆಫಾಯರನ್ನೂ ಹಾಮಿನಲ್ಲಿದ್ದ ಜೂಜ್ಯರನ್ನೂ ಶಾವೆಕೆರ್ಯಾತಯಿಮಿನಲ್ಲಿದ್ದ ಏಮಿಯರನ್ನೂ ಸೋಲಿಸಿದರು.


ಅಬ್ರಾಮನ ಮಂದೆಕಾಯುವವರು ಮತ್ತು ಲೋಟನ ಮಂದೆಕಾಯುವವರು ವಾದ ಮಾಡಲಾರಂಭಿಸಿದರು. ಆ ಕಾಲದಲ್ಲಿ ಕಾನಾನ್ಯರು ಮತ್ತು ಪೆರಿಜೀಯರು ಸಹ ಆ ಸ್ಥಳದಲ್ಲಿ ವಾಸವಾಗಿದ್ದರು.


ಆದರೆ ತನ್ನ ಯಜಮಾನನ ಬಯಕೆಯನ್ನು ತಿಳಿದಿಲ್ಲದ ಸೇವಕನಿಗೆ ಏನಾಗುವುದು? ಇವನು ಸಹ ದಂಡನೆಗೆ ಅರ್ಹವಾದ ಕಾರ್ಯಗಳನ್ನು ಮಾಡುತ್ತಾನೆ. ಆದರೆ ತನ್ನ ಕರ್ತವ್ಯವನ್ನು ತಿಳಿದಿದ್ದರೂ ಮಾಡದೆಹೋದ ಸೇವಕನಿಗಿಂತ ಇವನಿಗೆ ಕಡಿಮೆ ದಂಡನೆ ಆಗುವುದು. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ಪಡೆದವನಿಂದ ಇನ್ನೂ ಹೆಚ್ಚಾಗಿ ನಿರೀಕ್ಷಿಸಲಾಗುವುದು.”


ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.


ಫಿಲಿಷ್ಟಿಯರು ಮತ್ತೆ ರೆಫಾಯೀಮ್ ಕಣಿವೆಗೆ ಬಂದು ಪಾಳೆಯವನ್ನು ಮಾಡಿದರು.


ಫಿಲಿಷ್ಟಿಯರು ಬಂದು ರೆಫಾಯೀಮ್ ಕಣಿವೆಯಲ್ಲಿ ಪಾಳೆಯವನ್ನು ಮಾಡಿದರು.


ನಿಮ್ಮ ಮುಂದೆ ಹೋಗುವುದಕ್ಕೆ ನಾನು ಒಬ್ಬ ದೂತನನ್ನು ಕಳುಹಿಸುವೆನು. ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಸೋಲಿಸುವೆನು. ನಿಮ್ಮ ದೇಶದಿಂದ ಅವರನ್ನು ಬಲವಂತದಿಂದ ಅಟ್ಟಿಬಿಡುವೆನು.


ಹಿತ್ತಿಯರ, ಪೆರಿಜೀಯರ, ರೆಷಾಯರ,


ಯೋಸೇಫನ ವಂಶಸ್ಥರು ಯೆಹೋಶುವನೊಂದಿಗೆ ಮಾತನಾಡಿ, “ನೀನು ನಮಗೆ ಸ್ವಾಸ್ತ್ಯದ ಒಂದು ಕ್ಷೇತ್ರವನ್ನು ಮಾತ್ರ ಕೊಟ್ಟಿರುವೆ. ಆದರೆ ನಾವು ಬಹಳ ಜನರಿದ್ದೇವೆ. ಯೆಹೋವನು ತನ್ನ ಜನರಿಗೆ ಕೊಟ್ಟ ಈ ದೇಶದಲ್ಲಿ ನೀನು ನಮಗೆ ಕೇವಲ ಒಂದು ಭಾಗವನ್ನು ಮಾತ್ರ ಏಕೆ ಕೊಟ್ಟೆ?” ಎಂದು ಕೇಳಿದರು.


ಯೋಸೇಫನ ಜನರು, “ಎಫ್ರಾಯೀಮ್ ಬೆಟ್ಟಪ್ರದೇಶವು ನಮಗೆ ಸಾಕಾಗುವುದಿಲ್ಲ ಎಂಬುದೇನೋ ನಿಜ. ಆದರೆ ಅಲ್ಲಿ ವಾಸಮಾಡುವ ಕಾನಾನ್ಯರಲ್ಲಿ ಬಲವಾದ ಆಯುಧಗಳಿವೆ; ಕಬ್ಬಿಣದ ರಥಗಳಿವೆ. ಇಜ್ರೇಲ್, ಬೇತ್‌ಷೆಯಾನ್ ಕಣಿವೆಗಳು ಮತ್ತು ಆ ಕ್ಷೇತ್ರದ ಎಲ್ಲ ಸಣ್ಣ ಹಳ್ಳಿಗಳು ಅವರ ಅಧೀನದಲ್ಲಿವೆ” ಎಂದರು.


ದಾವೀದನ ಸೈನ್ಯವು ಇಸ್ರೇಲರಾದ ಅಬ್ಷಾಲೋಮನ ವಿರುದ್ಧ ಎಫ್ರಾಯೀಮ್ ಕಾಡಿನಲ್ಲಿ ಯುದ್ಧಮಾಡಿತು.


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕ ಎಂಬ ಮನುಷ್ಯನಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು