ಯೆಹೋಶುವ 17:16 - ಪರಿಶುದ್ದ ಬೈಬಲ್16 ಯೋಸೇಫನ ಜನರು, “ಎಫ್ರಾಯೀಮ್ ಬೆಟ್ಟಪ್ರದೇಶವು ನಮಗೆ ಸಾಕಾಗುವುದಿಲ್ಲ ಎಂಬುದೇನೋ ನಿಜ. ಆದರೆ ಅಲ್ಲಿ ವಾಸಮಾಡುವ ಕಾನಾನ್ಯರಲ್ಲಿ ಬಲವಾದ ಆಯುಧಗಳಿವೆ; ಕಬ್ಬಿಣದ ರಥಗಳಿವೆ. ಇಜ್ರೇಲ್, ಬೇತ್‌ಷೆಯಾನ್ ಕಣಿವೆಗಳು ಮತ್ತು ಆ ಕ್ಷೇತ್ರದ ಎಲ್ಲ ಸಣ್ಣ ಹಳ್ಳಿಗಳು ಅವರ ಅಧೀನದಲ್ಲಿವೆ” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ತಿರುಗಿ ಯೆಹೋಶುವನಿಗೆ, “ನಮ್ಮ ಪರ್ವತ ಪ್ರದೇಶವು ನಮಗೆ ಸಾಲುವುದಿಲ್ಲ. ಬೇತಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರೂ ಕಬ್ಬಿಣದ ರಥವುಳ್ಳವರು” ಎಂದರು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವರು ಮತ್ತೆ ಯೆಹೋಶುವನಿಗೆ , “ನಮ್ಮ ಮಲೆನಾಡು ನಮಗೆ ಸಾಲುವುದಿಲ್ಲ. ಬೇತ್ ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರು ಕಬ್ಬಿಣದ ರಥವುಳ್ಳವರು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರು ತಿರಿಗಿ ಯೆಹೋಶುವನಿಗೆ - ನಮ್ಮ ಪರ್ವತಪ್ರದೇಶವು ನಮಗೆ ಸಾಲುವದಿಲ್ಲ; ಬೇತ್‍ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ತಗ್ಗಿನಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸುವ ಕಾನಾನ್ಯರೆಲ್ಲರಿಗೆ ಕಬ್ಬಿಣದ ರಥಗಳಿವೆ ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅದಕ್ಕೆ ಯೋಸೇಫನ ಸಂತತಿಯರು, “ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿರುವ ಬೇತ್ ಷೆಯಾನ್‌ನಲ್ಲಿಯೂ ಇಜ್ರೆಯೇಲ್ ಕಣಿವೆಯಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಇವೆ,” ಎಂದರು. ಅಧ್ಯಾಯವನ್ನು ನೋಡಿ |
ನೀವು ಬೆಟ್ಟಪ್ರದೇಶವನ್ನು ತೆಗೆದುಕೊಳ್ಳಿರಿ. ಅದೊಂದು ಕಾಡು. ಆದರೆ ನೀವು ಆ ಮರಗಳನ್ನು ಕಡಿದುಹಾಕಿ ಅದನ್ನು ವಾಸಿಸಲು ಒಳ್ಳೆಯ ಸ್ಥಳವನ್ನಾಗಿ ಮಾಡಿಕೊಳ್ಳಬಹುದು. ನೀವು ಆ ಪ್ರದೇಶವನ್ನೆಲ್ಲಾ ನಿಮ್ಮ ಸ್ವತ್ತನ್ನಾಗಿ ಮಾಡಿಕೊಳ್ಳಿರಿ. ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಕಾನಾನ್ಯರನ್ನು ಒತ್ತಾಯಿಸಿರಿ. ಅವರು ಶಕ್ತಿಯುತರಾಗಿದ್ದರೂ ಅವರ ಬಳಿ ಬಲವಾದ ಆಯುಧಗಳಿದ್ದರೂ ನೀವು ಅವರನ್ನು ಸೋಲಿಸುವಿರಿ” ಎಂದು ಹೇಳಿದನು.
ಮನಸ್ಸೆ ಕುಲದವರು ಇಸ್ಸಾಕಾರ್, ಆಶೇರ್ ಪ್ರಾಂತಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲೆಯಾಮ್ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನಕ್, ಮೆಗಿದ್ದೋ ಮತ್ತು ಆ ಪಟ್ಟಣಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು.
ಯೆಹೋವನು ಹೀಗೆನ್ನುತ್ತಾನೆ: “ಅಮ್ಮೋನಿನ ರಬ್ಬಾ ನಿವಾಸಿಗಳು ಯುದ್ಧದ ಧ್ವನಿಗಳನ್ನು ಕೇಳುವ ಕಾಲ ಬರಲಿದೆ. ಅಮ್ಮೋನಿನ ರಬ್ಬಾ ನಾಶವಾಗಿ ಹಾಳಾದ ಕಟ್ಟಡಗಳ ಗುಡ್ಡವಾಗುವುದು. ಅದರ ಸುತ್ತಮುತ್ತಲಿನ ಪಟ್ಟಣಗಳನ್ನು ಸುಟ್ಟುಹಾಕಲಾಗುವುದು. ಆ ಜನರು ಇಸ್ರೇಲರಿಗೆ ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಒತ್ತಾಯಿಸಿದರು. ಆದರೆ ಇಸ್ರೇಲರು ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಅವರನ್ನು ಒತ್ತಾಯಿಸುವರು.” ಯೆಹೋವನು ಹೀಗೆನ್ನುತ್ತಾನೆ: