ಯೆಹೋಶುವ 17:17 - ಪರಿಶುದ್ದ ಬೈಬಲ್17 ಆಗ ಯೆಹೋಶುವನು ಯೋಸೇಫನ ಮನೆತನದವರಾದ ಎಫ್ರಾಯೀಮನ ಮತ್ತು ಮನಸ್ಸೆಯ ಜನರಿಗೆ, “ನೀವು ಬಹಳಷ್ಟು ಜನರಿದ್ದೀರಿ. ನೀವು ಬಹಳ ಶಕ್ತಿಶಾಲಿಗಳಾಗಿದ್ದೀರಿ. ಆದ್ದರಿಂದ ನೀವು ದೇಶದ ಒಂದು ಪಾಲಿಗಿಂತಲೂ ಹೆಚ್ಚು ಪಡೆಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೋಶುವನು ಯೋಸೇಫರಾದ ಎಫ್ರಾಯೀಮ್ ಹಾಗೂ ಮನಸ್ಸೆ ಕುಲಗಳ ಜನರಿಗೆ, “ನೀವು ಮಹಾಜನಾಂಗವೂ ಬಹು ಬಲವುಳ್ಳವರೂ ಆಗಿರುವುದು ನಿಜ. ನೀವು ಒಂದು ಭಾಗಕ್ಕಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಯೆಹೋಶುವನು ಜೋಸೆಫ್ಯರಾದ ಎಫ್ರಯಿಮ್ - ಮನಸ್ಸೆಕುಲದ ಆ ಜನರಿಗೆ, “ನೀವು ಮಹಾಜನಾಂಗ ಹಾಗೂ ಶಕ್ತಿಶಾಲಿಗಳೆಂಬುದೇನೋ ನಿಜ. ನೀವು ಒಂದು ಪಾಲಿಗಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವನು ಯೋಸೇಫ್ಯರಾದ ಎಫ್ರಾಯೀಮ್ ಮನಸ್ಸೆ ಕುಲಗಳ ಜನರಿಗೆ - ನೀವು ಮಹಾಜನಾಂಗವೂ ಬಹುಬಲವುಳ್ಳವರೂ ಆಗಿರುವದು ನಿಜ; ನೀವು ಒಂದು ಭಾಗಕ್ಕಿಂತ ಹೆಚ್ಚು ತೆಗೆದುಕೊಳ್ಳಬಹುದಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಯೆಹೋಶುವನು ಯೋಸೇಫನ ಮಕ್ಕಳಾದ ಎಫ್ರಾಯೀಮನಿಗೂ ಮನಸ್ಸೆಗೂ, “ನೀವು ಮಹಾಜನಾಂಗವೂ ಬಹು ಬಲವುಳ್ಳವರೂ ಆಗಿರುವಿರಿ. ಒಂದೇ ಭಾಗ ನಿಮಗೆ ಇರಬಾರದು. ಆದರೆ ಪರ್ವತವು ನಿಮ್ಮದಾಗಿರುವುದು. ಅಧ್ಯಾಯವನ್ನು ನೋಡಿ |
ನೀವು ಬೆಟ್ಟಪ್ರದೇಶವನ್ನು ತೆಗೆದುಕೊಳ್ಳಿರಿ. ಅದೊಂದು ಕಾಡು. ಆದರೆ ನೀವು ಆ ಮರಗಳನ್ನು ಕಡಿದುಹಾಕಿ ಅದನ್ನು ವಾಸಿಸಲು ಒಳ್ಳೆಯ ಸ್ಥಳವನ್ನಾಗಿ ಮಾಡಿಕೊಳ್ಳಬಹುದು. ನೀವು ಆ ಪ್ರದೇಶವನ್ನೆಲ್ಲಾ ನಿಮ್ಮ ಸ್ವತ್ತನ್ನಾಗಿ ಮಾಡಿಕೊಳ್ಳಿರಿ. ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಕಾನಾನ್ಯರನ್ನು ಒತ್ತಾಯಿಸಿರಿ. ಅವರು ಶಕ್ತಿಯುತರಾಗಿದ್ದರೂ ಅವರ ಬಳಿ ಬಲವಾದ ಆಯುಧಗಳಿದ್ದರೂ ನೀವು ಅವರನ್ನು ಸೋಲಿಸುವಿರಿ” ಎಂದು ಹೇಳಿದನು.
ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”