ಯೆಹೋಶುವ 17:18 - ಪರಿಶುದ್ದ ಬೈಬಲ್18 ನೀವು ಬೆಟ್ಟಪ್ರದೇಶವನ್ನು ತೆಗೆದುಕೊಳ್ಳಿರಿ. ಅದೊಂದು ಕಾಡು. ಆದರೆ ನೀವು ಆ ಮರಗಳನ್ನು ಕಡಿದುಹಾಕಿ ಅದನ್ನು ವಾಸಿಸಲು ಒಳ್ಳೆಯ ಸ್ಥಳವನ್ನಾಗಿ ಮಾಡಿಕೊಳ್ಳಬಹುದು. ನೀವು ಆ ಪ್ರದೇಶವನ್ನೆಲ್ಲಾ ನಿಮ್ಮ ಸ್ವತ್ತನ್ನಾಗಿ ಮಾಡಿಕೊಳ್ಳಿರಿ. ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಕಾನಾನ್ಯರನ್ನು ಒತ್ತಾಯಿಸಿರಿ. ಅವರು ಶಕ್ತಿಯುತರಾಗಿದ್ದರೂ ಅವರ ಬಳಿ ಬಲವಾದ ಆಯುಧಗಳಿದ್ದರೂ ನೀವು ಅವರನ್ನು ಸೋಲಿಸುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದುಹಾಕಬಹುದು. ಅದಕ್ಕೆ ಸೇರಿರುವ ಬಯಲು ಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರದೂಡುವಿರಿ” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಮೇಲೆ ನಾಡನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬಯಲುಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರು ಹಾಗೂ ಕಬ್ಬಿಣದ ರಥಗಳುಳ್ಳವರು. ಆದರೂ ನೀವು ಅವರನ್ನು ಹೊರದೂಡಬಲ್ಲಿರಿ,” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬೈಲೂ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರಡಿಸುವಿರಿ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಏಕೆಂದರೆ ಅದು ಅಡವಿಯಾಗಿದೆ. ಅದನ್ನು ನೀವು ಕಡಿಯಬೇಕು. ಅದರ ಅಂತ್ಯಗಳವರೆಗೂ ನಿಮ್ಮದಾಗಿರುವುದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿಬಿಡಲು ನಿಮಗೆ ಸಾಧ್ಯ,” ಎಂದನು. ಅಧ್ಯಾಯವನ್ನು ನೋಡಿ |