Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:3 - ಪರಿಶುದ್ದ ಬೈಬಲ್‌

3 ಚಲ್ಪಹಾದನು ಹೇಫೆರನ ಮಗನು, ಹೇಫೆರನು ಗಿಲ್ಯಾದನ ಮಗನು, ಗಿಲ್ಯಾದನು ಮಾಕೀರನ ಮಗನು. ಮಾಕೀರನು ಮನಸ್ಸೆಯ ಮಗನು. ಚಲ್ಪಹಾದನಿಗೆ ಗಂಡುಮಕ್ಕಳಿರಲಿಲ್ಲ. ಆದರೆ ಅವನಿಗೆ ಐದು ಜನ ಹೆಣ್ಣುಮಕ್ಕಳಿದ್ದರು. ಅವರ ಹೆಸರುಗಳು: ಮಹ್ಲಾ, ನೋಹಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣು ಮಕ್ಕಳ ಹೊರತು ಗಂಡು ಮಕ್ಕಳು ಇರಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಅವನ ಹೆಣ್ಣು ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡು ಮಕ್ಕಳು ಆಗಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬವರು ಅವನ ಹೆಣ್ಣುಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣುಮಕ್ಕಳು ಹುಟ್ಟಿದರೇ ಹೊರತು ಗಂಡು ಮಕ್ಕಳು ಹುಟ್ಟಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ವಿುಲ್ಕಾ, ತಿರ್ಚಾ ಎಂಬವರು ಅವನ ಹೆಣ್ಣುಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ, ಗಿಲ್ಯಾದನ ಮೊಮ್ಮಗನೂ, ಹೇಫೆರನ ಮಗನೂ ಆದ ಚಲ್ಪಹಾದನಿಗೆ ಪುತ್ರರಿರಲಿಲ್ಲ. ಆದರೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಪುತ್ರಿಯರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:3
5 ತಿಳಿವುಗಳ ಹೋಲಿಕೆ  

ಚಲ್ಪಹಾದನು ಹೇಫೆರನ ಮಗನು. ಹೇಫೆರನು ಗಿಲ್ಯಾದನ ಮಗನು. ಗಿಲ್ಯಾದನು ಮಾಕೀರನ ಮಗನು. ಮಾಕೀರನು ಮನಸ್ಸೆಯ ಮಗನು. ಮನಸ್ಸೆಯು ಯೋಸೇಫನ ಮಗನು. ಚಲ್ಪಹಾದನಿಗೆ ಐದುಮಂದಿ ಹೆಣ್ಣುಮಕ್ಕಳಿದ್ದರು. ಅವರು ಯಾರೆಂದರೆ: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ.


ಹೇಫೆರನ ಮಗನಾದ ಚಲ್ಫಹಾದನಿಗೆ ಹೆಣ್ಣುಮಕ್ಕಳು ಮಾತ್ರ ಹುಟ್ಟಿದರು. ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳ ಹೆಸರು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.


ಯೋಸೇಫನು ಜೀವದಿಂದಿದ್ದ ಕಾಲದಲ್ಲಿ, ಎಫ್ರಾಯೀಮನು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆದನು. ಅವನ ಮಗನಾದ ಮನಸ್ಸೆಗೆ ಮಾಕೀರನೆಂಬ ಗಂಡುಮಗನು ಹುಟ್ಟಿದನು. ಯೋಸೇಫನು ಮಾಕೀರನ ಮಕ್ಕಳನ್ನೂ ನೋಡಿದನು.


ಮನಸ್ಸೆ ಕುಲದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೇರ್, ಶೆಮೀದಾ ಎಂಬವರ ವಂಶದವರಿಗೂ ಭೂಮಿಯನ್ನು ಕೊಡಲಾಯಿತು. ಇವರೆಲ್ಲರು ಯೋಸೇಫನ ಮಗನಾದ ಮನಸ್ಸೆಯ ಉಳಿದ ಗಂಡುಮಕ್ಕಳು. ಈ ಜನರ ವಂಶದವರೂ ತಮ್ಮ ಪಾಲಿನ ಭೂಮಿಯನ್ನು ಪಡೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು