ಯೆಹೋಶುವ 17:5 - ಪರಿಶುದ್ದ ಬೈಬಲ್5 ಮನಸ್ಸೆ ಕುಲದವರು ಜೋರ್ಡನ್ ನದಿಯ ಪಶ್ಚಿಮದಲ್ಲಿ ಹತ್ತು ಭೂಭಾಗಗಳನ್ನು ಮತ್ತು ಆ ನದಿಯ ಮತ್ತೊಂದು ದಿಕ್ಕಿನಲ್ಲಿ ಗಿಲ್ಯಾದ್ ಮತ್ತು ಬಾಷಾನ್ ಎಂಬ ಮತ್ತೆರಡು ಭೂಭಾಗಗಳನ್ನು ಪಡೆದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮನಸ್ಸೆ ಕುಲದ ಹೆಣ್ಣುಮಕ್ಕಳಿಗೆ ಗಂಡು ಮಕ್ಕಳ ಸಹಿತವಾಗಿ ಸ್ವಾಸ್ತ್ಯ ದೊರಕಿದ್ದರಿಂದ ಮನಸ್ಸೆಯವರಿಗೆ ಯೊರ್ದನಿನ ಆಚೆಯಲ್ಲಿ ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯಗಳ ಜೊತೆಗೆ ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮನಸ್ಸೆ ಕುಲದ ಹೆಣ್ಣುಮಕ್ಕಳಿಗೆ ಗಂಡುಮಕ್ಕಳ ಸಮೇತ ಸೊತ್ತು ದೊರಕಿದ್ದರಿಂದ ಮನಸ್ಸೆಯವರಿಗೆ ಜೋರ್ಡನಿನ ಆಚೆಯಿದ್ದ ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯಗಳ ಜೊತೆಗೆ ಈಚೆಯಲ್ಲೂ ಹತ್ತುಪಾಲು ಸಿಕ್ಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮನಸ್ಸೆಕುಲದ ಹೆಣ್ಣು ಮಕ್ಕಳಿಗೆ ಗಂಡು ಮಕ್ಕಳ ಸಂಗಡ ಸ್ವಾಸ್ತ್ಯದೊರಕಿದ್ದರಿಂದ ಮನಸ್ಸೆಯವರಿಗೆ ಯೊರ್ದನಿನ ಆಚೆಯಿದ್ದ ಬಾಷಾನ್ ಗಿಲ್ಯಾದ್ ಪ್ರಾಂತಗಳ ಹೊರತು ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೊರ್ದನ್ ನದಿ ಆಚೆಯಲ್ಲಿರುವ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳ ಜೊತೆಗೆ ಮನಸ್ಸೆಗೆ ಬಿದ್ದ ಚೀಟಿನಲ್ಲಿ ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು. ಅಧ್ಯಾಯವನ್ನು ನೋಡಿ |
ಆ ಹೆಣ್ಣುಮಕ್ಕಳು ಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ ಮತ್ತು ಇಸ್ರೇಲರ ನಾಯಕರ ಹತ್ತಿರ ಹೋಗಿ, “ಗಂಡುಮಕ್ಕಳಿಗೆ ಕೊಟ್ಟ ಹಾಗೆ ನಮಗೂ ಭೂಮಿಯನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಹೇಳಿದ್ದಾನೆ” ಅಂದರು. ಎಲ್ಲಾಜಾರನು ಯೆಹೋವನ ಆಜ್ಞೆಯನ್ನು ಪಾಲಿಸಿ ಆ ಹೆಣ್ಣುಮಕ್ಕಳಿಗೆ ಸ್ವಲ್ಪ ಭೂಮಿಯನ್ನು ಕೊಟ್ಟನು. ಹೀಗೆ ಈ ಹೆಣ್ಣುಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು.