Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:1 - ಪರಿಶುದ್ದ ಬೈಬಲ್‌

1 ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇಶವೆಲ್ಲಾ ವಶವಾದ ಮೇಲೆ ಇಸ್ರಾಯೇಲ್ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರ ಸಮೂಹವೆಲ್ಲಾ ಶೀಲೋವಿನಲ್ಲಿ ಒಟ್ಟು ಕೂಡಿ ಅಲ್ಲಿ ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:1
26 ತಿಳಿವುಗಳ ಹೋಲಿಕೆ  

ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರೇಲಿನ ಕುಲಪ್ರಧಾನರೂ ಶೀಲೋವಿನಲ್ಲಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟುಹಾಕಿ ಹಂಚಿಕೊಟ್ಟ ಪ್ರಾಂತ್ಯಗಳೇ ಇವು. ಹೀಗೆ ದೇಶ ವಿಭಾಗ ಕಾರ್ಯವು ಪೂರ್ಣಗೊಂಡಿತು.


ಎಲ್ಕಾನನು ಪ್ರತಿ ವರ್ಷವೂ ತನ್ನ ಪಟ್ಟಣವಾದ ರಾಮಾತಯಿಮ್ ಬಿಟ್ಟು ಶೀಲೋವಿಗೆ ಹೋಗುತ್ತಿದ್ದನು. ಅವನು ಶೀಲೋವಿನಲ್ಲಿ ಸರ್ವಶಕ್ತನಾದ ಯೆಹೋವನನ್ನು ಆರಾಧಿಸಿ ಆತನಿಗೆ ಯಜ್ಞವನ್ನು ಅರ್ಪಿಸುತ್ತಿದ್ದನು. ಹೊಫ್ನಿ ಮತ್ತು ಫೀನೆಹಾಸರೆಂಬ ಯಾಜಕರು ಯೆಹೋವನ ಸೇವೆಮಾಡುವ ಸ್ಥಳವೇ ಶೀಲೋವ. ಹೊಫ್ನಿ ಮತ್ತು ಫೀನೆಹಾಸರು ಏಲಿಯನ ಮಕ್ಕಳು.


ಇದು ಕಾನಾನ್ ದೇಶದ ಶೀಲೋವಿನಲ್ಲಿ ನಡೆಯಿತು. ಲೇವಿ ಕುಲಾಧಿಪತಿಗಳು ಅವರಿಗೆ, “ಯೆಹೋವನು ಮೋಶೆಗೆ ಆಜ್ಞಾಪಿಸಿರುವಂತೆ ನೀವು ನಮಗೆ ವಾಸಮಾಡುವುದಕ್ಕೆ ಪಟ್ಟಣಗಳನ್ನೂ ನಮ್ಮ ಪಶುಗಳು ಮೇಯುವುದಕ್ಕಾಗಿ ಹೊಲಗಳನ್ನೂ ಕೊಡಬೇಕು” ಎಂದು ಹೇಳಿದರು.


ನೀವು ನನ್ನ ಆಜ್ಞಾಪಾಲನೆ ಮಾಡದಿದ್ದರೆ ಜೆರುಸಲೇಮಿನ ನನ್ನ ಈ ಆಲಯಕ್ಕೆ ಶಿಲೋವಿನ ನನ್ನ ಪವಿತ್ರವಾದ ಗುಡಾರದ ಗತಿಯನ್ನು ತರುತ್ತೇನೆ. ಜಗತ್ತಿನ ಜನರು ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಕೇಳಿಕೊಳ್ಳುವಾಗ ಜೆರುಸಲೇಮನ್ನು ಜ್ಞಾಪಿಸಿಕೊಳ್ಳುವರು.’”


ಆದ್ದರಿಂದ ರೂಬೇನ್ ಕುಲದವರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇಸ್ರೇಲಿನ ಬೇರೆ ಕುಲದ ಜನರನ್ನು ಬಿಟ್ಟು ಹೊರಟರು. ಅವರು ಕಾನಾನಿನ ಶೀಲೋವಿನಲ್ಲಿದ್ದರು. ಅವರು ಆ ಸ್ಥಳವನ್ನು ಬಿಟ್ಟು ಗಿಲ್ಯಾದ್‌ಗೆ ಹಿಂದಿರುಗಿ ಹೋದರು. ಮೋಶೆಯು ಅವರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದ ತಮ್ಮ ಪ್ರದೇಶಕ್ಕೆ ಅವರು ಹೋದರು. ಅವರಿಗೆ ಈ ಪ್ರದೇಶವನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನು.


ಆತನು ತನ್ನ ಶತ್ರುಗಳನ್ನು ಸದೆಬಡಿದು ಸೋಲಿಸಿದನು. ಆತನು ತನ್ನ ಶತ್ರುಗಳನ್ನು ಸೋಲಿಸಿ ಅವರನ್ನು ನಿತ್ಯನಿಂದೆಗೆ ಗುರಿಮಾಡಿದನು.


ಯಾರೊಬ್ಬಾಮನು ತನ್ನ ಪತ್ನಿಗೆ, “ಶೀಲೋವಿಗೆ ಹೋಗು. ಅಲ್ಲಿಗೆ ಹೋಗಿ ಪ್ರವಾದಿಯಾದ ಅಹೀಯನನ್ನು ನೋಡು. ನಾನು ಇಸ್ರೇಲಿನ ರಾಜನಾಗುವೆನೆಂದು ತಿಳಿಸಿದ ಮನುಷ್ಯನೇ ಅಹೀಯನು. ನೀನು ನನ್ನ ಪತ್ನಿಯೆಂದು ಜನರಿಗೆ ತಿಳಿಯದ ರೀತಿಯಲ್ಲಿ ವಸ್ತ್ರಗಳನ್ನು ಧರಿಸಿಕೊ.


ಸೊಲೊಮೋನನು ಎಬ್ಯಾತಾರನಿಗೆ, “ನಾನು ನಿನ್ನನ್ನು ಯೆಹೋವನ ಯಾಜಕನಾಗಿ ಸೇವೆಯಲ್ಲಿ ಮುಂದುವರಿಸುವುದಿಲ್ಲ” ಎಂದು ಹೇಳಿದನು. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು. ಇದು ಶೀಲೋವಿನಲ್ಲಿ ದೇವರು ಯಾಜಕನಾದ ಏಲಿಗೂ ಅವನ ಕುಟುಂಬದವರಿಗೂ ಹೇಳಿದಂತೆಯೇ ಆಯಿತು. ಎಬ್ಯಾತಾರನು ಏಲಿಯ ಗೋತ್ರದವನು.


ಮಗುವು ಗಟ್ಟಿಯಾದ ಊಟ ಮಾಡುವಂತಾದಾಗ ಹನ್ನಳು ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವನನ್ನು ಕರೆದುಕೊಂಡು ಹೋದಳು. ಹನ್ನಳು ಮೂರು ವರ್ಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋದಳು.


ಮೀಕನು ಮಾಡಿದ್ದ ಆ ವಿಗ್ರಹಗಳನ್ನು ದಾನ್ಯರು ಪೂಜಿಸಿದರು. ಶೀಲೋವಿನಲ್ಲಿ ದೇವಸ್ಥಾನವಿದ್ದ ಕಾಲದಲ್ಲೆಲ್ಲಾ ಅವರು ಆ ವಿಗ್ರಹಗಳನ್ನು ಪೂಜಿಸಿದರು.


ರಾಜನ ಪತ್ನಿಯು ಅವನು ಹೇಳಿದಂತೆ ಮಾಡಿದಳು. ಅವಳು ಶೀಲೋವಿಗೆ ಹೋದಳು. ಅವಳು ಪ್ರವಾದಿಯಾದ ಅಹೀಯನ ಮನೆಗೆ ಹೋದಳು. ಅಹೀಯನಿಗೆ ಬಹಳ ವಯಸ್ಸಾಗಿತ್ತು; ಅವನು ಕುರುಡನಾಗಿದ್ದನು.


ನಮಗೊಂದು ವಿಚಾರಹೊಳೆದಿದೆ. ಇದು ಶೀಲೋವಿನಲ್ಲಿ ಯೆಹೋವನ ಉತ್ಸವ ನಡೆಯುವ ಕಾಲ. ಈ ಉತ್ಸವವನ್ನು ಅಲ್ಲಿ ಪ್ರತಿವರ್ಷ ಆಚರಿಸಲಾಗುತ್ತದೆ.” (ಶೀಲೋವ್ ನಗರವು ಬೇತೇಲ್ ನಗರದ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ದಾರಿಯ ಪೂರ್ವಕ್ಕೂ ಲೆಬೋನಿನ ದಕ್ಷಿಣಕ್ಕೂ ಇದೆ.)


ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.


ಆದರೂ ದೇವರು ವಾಗ್ದಾನ ಮಾಡಿದ ಭೂಮಿಯನ್ನು ಇಸ್ರೇಲರ ಏಳು ಕುಲಗಳು ಇನ್ನೂ ಪಡೆದಿರಲಿಲ್ಲ.


ಆದ್ದರಿಂದ ಭೂಮಿಯನ್ನು ಪರಿಶೀಲಿಸಲು ಆರಿಸಲ್ಪಟ್ಟ ಜನರಿಗೆ ಯೆಹೋಶುವನು, “ಹೋಗಿ, ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿರಿ; ಅದರ ನಕ್ಷೆಗಳನ್ನು ತೆಗೆಯಿರಿ. ಆಮೇಲೆ ಶೀಲೋವಿನಲ್ಲಿ ನಾನಿರುವ ಸ್ಥಳಕ್ಕೆ ಬನ್ನಿ. ಆಗ ನಾನು ಚೀಟುಹಾಕುತ್ತೇನೆ. ಯೆಹೋವನು ನಿಮ್ಮ ಪಾಲುಗಳನ್ನು ಕೊಡಲಿ” ಅಂದನು.


ಇಸ್ರೇಲರೆಲ್ಲರು ಈ ಮೂರು ಕುಲಗಳ ಮೇಲೆ ತುಂಬ ಕೋಪಗೊಂಡರು. ಅವರು ಒಟ್ಟಿಗೆ ಮೂರು ಕುಲಗಳ ವಿರುದ್ಧ ಯುದ್ಧಮಾಡಲು ನಿರ್ಧರಿಸಿದರು.


ಈಜಿಪ್ಟಿನಿಂದ ಇಸ್ರೇಲರನ್ನು ಹೊರತಂದ ಸಮಯದಲ್ಲಿ ನಾನು ಆಲಯದಲ್ಲಿ ವಾಸಮಾಡಲಿಲ್ಲ. ನಾನು ಗುಡಾರದಲ್ಲಿ ವಾಸಮಾಡುತ್ತಾ ಸಂಚರಿಸಿದೆನು. ಗುಡಾರವೇ ನನ್ನ ಆಲಯವಾಗಿತ್ತು.


ಆ ಮಕ್ಕಳು ದೇಶವನ್ನು ಸ್ವಾಧೀನಪಡಿಸಿಕೊಂಡರು; ಅಲ್ಲಿ ವಾಸಿಸಿದ್ದ ಕಾನಾನ್ಯರನ್ನು ಓಡಿಸಿದರು. ಅವರನ್ನು ಸೋಲಿಸುವಂತೆ ನೀನೇ ಮಾಡಿದೆ. ಆ ರಾಜ್ಯಗಳಿಗೆ, ರಾಜರುಗಳಿಗೆ ಅವರು ಮಾಡಬೇಕೆಂದಿದ್ದನ್ನು ಮಾಡುವಂತೆ ಅವರಿಗೇ ಅವಕಾಶಮಾಡಿಕೊಟ್ಟೆ.


ಶೀಲೋವಿನಲ್ಲಿದ್ದ ತನ್ನ ಪವಿತ್ರ ಗುಡಾರವನ್ನು ಆತನು ತೊರೆದುಬಿಟ್ಟನು. ಅವರ ಮಧ್ಯದಲ್ಲಿ ಆತನು ವಾಸಮಾಡಿದ್ದು ಆ ಗುಡಾರದಲ್ಲಿಯೇ.


ಯೆಹೋವನ ಹೆಸರಿನಲ್ಲಿ ಹಾಗೆ ಪ್ರವಾದಿಸಲು ನಿನಗೆ ಹೇಗೆ ಧೈರ್ಯ ಬಂದಿತು? ಶಿಲೋವಿನಂತೆ ಯೆಹೋವನ ಈ ಆಲಯವು ಹಾಳಾಗುವದೆಂದು ಹೇಳಲು ನಿನಗೆ ಹೇಗೆ ಧೈರ್ಯ ಬಂದಿತು? ಜೆರುಸಲೇಮು ಜನರಿಲ್ಲದ ಒಂದು ಮರುಭೂಮಿಯಾಗುವುದೆಂದು ಹೇಳಲು ನಿನಗೆ ಹೇಗೆ ಧೈರ್ಯ ಬಂದಿತು?” ಎಂದು ಕೇಳಿದರು. ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನನ್ನು ಮುತ್ತಿದರು.


“‘ನಿಮ್ಮ ಪ್ರದೇಶವು ದೇವಾರಾಧನೆ ಮಾಡಲು ಅಶುದ್ಧವಾಗಿದ್ದರೆ ನಮ್ಮ ಪ್ರದೇಶಕ್ಕೆ ಬಂದುಬಿಡಿ. ಯೆಹೋವನ ಗುಡಾರವು ನಮ್ಮ ಪ್ರದೇಶದಲ್ಲಿದೆ. ನೀವು ನಮ್ಮ ಸ್ವಲ್ಪ ಭೂಮಿಯನ್ನು ತೆಗೆದುಕೊಂಡು ಅಲ್ಲಿ ವಾಸವಾಗಿರಬಹುದು. ಆದರೆ ಯೆಹೋವನಿಗೆ ವಿರುದ್ಧವಾಗಿ ಹೋಗಬೇಡಿ. ಬೇರೊಂದು ಯಜ್ಞವೇದಿಕೆಯನ್ನು ಕಟ್ಟಬೇಡಿ. ದೇವದರ್ಶನಗುಡಾರದಲ್ಲಿ ನಾವು ಈಗಾಗಲೇ ಯೆಹೋವನಾದ ನಮ್ಮ ದೇವರ ಯಜ್ಞವೇದಿಕೆಯನ್ನು ಹೊಂದಿದ್ದೇವೆ.


ಆ ಹನ್ನೆರಡು ಸಾವಿರ ಸೈನಿಕರು ಯಾಬೇಷ್ ಗಿಲ್ಯಾದಿನಲ್ಲಿ ಗಂಡಸಿನೊಂದಿಗೆ ಎಂದೂ ಲೈಂಗಿಕ ಸಂಪರ್ಕ ಹೊಂದದ ನಾನೂರು ಜನ ಯುವತಿಯರನ್ನು ಗುರುತಿಸಿದರು. ಆ ಯುವತಿಯರನ್ನು ಸೈನಿಕರು ಶೀಲೋವಿನಲ್ಲಿದ್ದ ಪಾಳೆಯಕ್ಕೆ ಕರೆತಂದರು. ಶೀಲೋವ್ ಕಾನಾನ್ ಪ್ರದೇಶದಲ್ಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು