ಯೆಹೋಶುವ 18:11 - ಪರಿಶುದ್ದ ಬೈಬಲ್11 ಬೆನ್ಯಾಮೀನ್ ಕುಲದವರಿಗೆ ಯೆಹೂದ್ಯರ ಮತ್ತು ಯೋಸೇಫ್ಯರ ಪ್ರಾಂತ್ಯಗಳ ಮಧ್ಯದಲ್ಲಿರುವ ಭೂಮಿಯನ್ನು ಕೊಡಲಾಯಿತು. ಬೆನ್ಯಾಮೀನ್ ಕುಲದ ಪ್ರತಿಯೊಂದು ಗೋತ್ರವು ತಮ್ಮ ಭೂಮಿಯನ್ನು ಪಡೆದುಕೊಂಡಿತು. ಇದು ಬೆನ್ಯಾಮೀನ್ ಕುಲದವರಿಗೆ ಆರಿಸಲ್ಪಟ್ಟ ಭೂಮಿಯಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಚೀಟು ಮೊದಲು ಬೆನ್ಯಾಮೀನ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಯೆಹೂದ್ಯರ ಮತ್ತು ಯೋಸೇಫರ ಪ್ರಾಂತ್ಯಗಳ ಮಧ್ಯದಲ್ಲಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಚೀಟು ಮೊದಲು ಬೆನ್ಯಾಮೀನ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸೊತ್ತು ಯೆಹೂದಾ ಮತ್ತು ಜೋಸೆಫ್ ವಂಶಸ್ಥರ ಪ್ರಾಂತ್ಯಗಳಿಗೆ ಮಧ್ಯೆಯಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಚೀಟು ಮೊದಲು ಬೆನ್ಯಾಮೀನ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯವು ಯೆಹೂದ್ಯರ ಮತ್ತು ಯೋಸೇಫ್ಯರ ಪ್ರಾಂತಗಳ ಮಧ್ಯದಲ್ಲಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಬೆನ್ಯಾಮೀನನ ಸಂತತಿಯವರಿಗೆ ಅವರ ಕುಟುಂಬಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಸೊತ್ತು ಯೆಹೂದ ಮತ್ತು ಯೋಸೇಫನ ಗೋತ್ರದವರ ಪ್ರಾಂತಗಳಿಗೆ ನಡುವೆಯಿತ್ತು. ಅಧ್ಯಾಯವನ್ನು ನೋಡಿ |
“ಈ ವಿಶೇಷ ಜಾಗದ ದಕ್ಷಿಣದ ಸ್ಥಳವು ಜೋರ್ಡನ್ ಹೊಳೆಯ ಪೂರ್ವದಲ್ಲಿ ವಾಸಿಸಿದ್ದ ಇಸ್ರೇಲರ ಕುಲದವರಿಗಾಗಿ. ಈ ಗೋತ್ರದ ಪ್ರತಿ ಒಂದೊಂದು ಕುಲದವರಿಗೆ ಪೂರ್ವದ ಮೇರೆಯಿಂದ ಹಿಡಿದು ಭೂಮಧ್ಯ ಸಮುದ್ರದವರೆಗಿನ ದೇಶದ ಭಾಗದಲ್ಲಿ ಒಂದು ತುಂಡು ಅವರಿಗೆ ದೊರೆಯುವದು. ಉತ್ತರದಿಂದ ದಕ್ಷಿಣದ ತನಕ ಇಲ್ಲಿ ಜಾಗ ದೊರೆಯುವ ಕುಲದವರು ಯಾರೆಂದರೆ, ಬೆನ್ಯಾಮೀನ್, ಸಿಮೆಯೋನ್, ಇಸ್ಸಾಕಾರ್, ಜೆಬೂಲೂನ್ ಮತ್ತು ಗಾದ್ ವಂಶದವರು.