Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:16 - ಪರಿಶುದ್ದ ಬೈಬಲ್‌

16 ಅಲ್ಲಿಂದ ಆ ಮೇರೆಯು ರೆಫಾಯಿಮ್ ತಗ್ಗಿನ ಉತ್ತರದಲ್ಲಿರುವ ಬೆನ್‌ಹಿನ್ನೋಮ್ ತಗ್ಗಿನ ಹತ್ತಿರ ಆ ಬೆಟ್ಟದ ಬುಡಕ್ಕೆ ಇಳಿಯುತ್ತದೆ. ಆ ಮೇರೆಯು ಹಿನ್ನೋಮ್ ತಗ್ಗಿನಿಂದ ಯೆಬೂಸಿಯ ಪಟ್ಟಣದ ದಕ್ಷಿಣದವರೆಗೆ ಮುಂದುವರೆಯುತ್ತದೆ. ಅಲ್ಲಿಂದ ಅದು ಏನ್‌ರೋಗೆಲಿಗೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ಕಣಿವೆಯ ಈಚೆಗೂ ರೆಫಾಯೀಮ್ ಕಣಿವೆಯ ಉತ್ತರದಲ್ಲಿಯೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್ ಹಿನ್ನೋಮ್ ಕಣಿವೆಯ ಮಾರ್ಗವಾಗಿ ಏನರೋಗೆಲಿಗೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ಕಣಿವೆಯ ಉತ್ತರದಲ್ಲೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್ ಹಿನ್ನೋಮ್ ಕಣಿವೆಯ ಮಾರ್ಗವಾಗಿ ಏನ್ ರೋಗೆಲಿಗೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೆಫ್ತೋಹ ಬುಗ್ಗೆಯ ಮೇಲೆ ಬೆನ್‍ಹಿನ್ನೋಮ್ ತಗ್ಗಿನ ಈಚೆಗೂ ರೆಫಾಯಿಮ್ ತಗ್ಗಿನ ಉತ್ತರದಲ್ಲಿಯೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್‍ಹಿನ್ನೋಮ್ ತಗ್ಗಿನ ಮಾರ್ಗವಾಗಿ ಏನ್‍ರೋಗೆಲಿಗೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ತಗ್ಗಿನ ಈಚೆಗೂ ರೆಫಾಯಿಮ್ ತಗ್ಗಿನ ಉತ್ತರದಲ್ಲಿಯೂ ಇರುವ ಬೆಟ್ಟದ ಅಂಚಿಗೆ ಹೋಗಿ, ಅಲ್ಲಿಂದ ದಕ್ಷಿಣದಲ್ಲಿ ಯೆಬೂಸಿಯರ ಮೇರೆಯಾದ ಬೆನ್ ಹಿನ್ನೋಮಿನ ಹಳ್ಳದ ಕಣಿವೆ ಮಾರ್ಗವಾಗಿ ಏನ್ ರೋಗೆಲಿಗೆ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:16
19 ತಿಳಿವುಗಳ ಹೋಲಿಕೆ  

ತೋಫೆತ್ ಎನ್ನುವುದು ಬೆನ್‌ಹಿನ್ನೋಮ್‌ನ ಮಗನಿಗೆ ಸೇರಿದ ಒಂದು ಕಣಿವೆ. ಅಲ್ಲಿ ಸುಳ್ಳುದೇವರಾದ ಮೋಲೆಕನ ಗೌರವಾರ್ಥವಾಗಿ ಜನರು ತಮ್ಮ ಮಕ್ಕಳನ್ನು ಆಹುತಿ ಕೊಡುತ್ತಿದ್ದರು ಮತ್ತು ಯಜ್ಞವೇದಿಕೆಯ ಮೇಲೆ ಸುಡುತ್ತಿದ್ದರು. ಯೋಷೀಯನು, ಜನರು ಮತ್ತೆ ಆ ಸ್ಥಳವನ್ನು ಉಪಯೋಗಿಸದಂತೆ ನಾಶಗೊಳಿಸಿದನು.


ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.


“ಬೆನ್‌ಹಿನ್ನೊಮ್ ಕಣಿವೆಯಲ್ಲಿ ಅವರು ಸುಳ್ಳುದೇವರಾದ ಬಾಳನಿಗಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿದ್ದಾರೆ. ತಮ್ಮ ಮಕ್ಕಳನ್ನು ಆಹುತಿಕೊಡುವದಕ್ಕಾಗಿ ಈ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಇಂಥಾ ಭಯಂಕರವಾದ ಕೆಲಸವನ್ನು ಮಾಡಲು ನಾನು ಅವರಿಗೆ ಆಜ್ಞಾಪಿಸಿಲ್ಲ. ಯೆಹೂದದ ಜನರು ಇಂಥಾ ಭಯಂಕರವಾದ ಕಾರ್ಯವನ್ನು ಮಾಡುವರೆಂದು ನಾನೆಂದೂ ಊಹಿಸಿರಲಿಲ್ಲ.


ಹೀಗೆ ಹೇಳು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ಈ ಮಣ್ಣಿನ ಕೊಡವನ್ನು ಒಡೆದುಹಾಕಿದಂತೆ ನಾನು ಯೆಹೂದ ಜನಾಂಗವನ್ನು ಮತ್ತು ಜೆರುಸಲೇಮ್ ನಗರವನ್ನು ಒಡೆದುಹಾಕುವೆನು. ಈ ಕೊಡವನ್ನು ಪುನಃ ಜೋಡಿಸಲು ಸಾಧ್ಯವಿಲ್ಲ. ಯೆಹೂದ ಜನಾಂಗದ ಸ್ಥಿತಿಯೂ ಹೀಗೆಯೇ ಆಗುವುದು. ತೋಫೆತಿನಲ್ಲಿ ಸ್ಥಳವಿಲ್ಲದಂತಾಗುವವರೆಗೂ ಸತ್ತವರನ್ನು ಅಲ್ಲಿ ಹೂಳಲಾಗುವುದು.


ಈಗ, ಬೆನ್‌ಹಿನ್ನೊಮೀನ ಕಣಿವೆಯಲ್ಲಿದ್ದ ಈ ಸ್ಥಳವನ್ನು ಜನರು “ತೋಫೆತ್” ಎಂದು ಕರೆಯುತ್ತಾರೆ. ಆದರೆ ಜನರು ಇದನ್ನು “ಕೊಲೆಯ ಕಣಿವೆ” ಎಂದು ಕರೆಯುವ ದಿನಗಳು ಬರುತ್ತಿವೆ ಎಂದು ನಾನು ನಿಮಗೆ ಮುನ್ನೆಚ್ಚರಿಕೆಯನ್ನು ಕೊಡುತ್ತೇನೆ. ಇದು ಯೆಹೋವನ ನುಡಿ.


ಬೋಕಿಯ ದ್ವಾರದ ಸಮೀಪದಲ್ಲಿರುವ ಬೆನ್‌ಹಿನ್ನೊಮ್ ತಗ್ಗಿಗೆ ಹೋಗು. ನಿನ್ನ ಸಂಗಡ ಜನರ ಹಿರಿಯರಲ್ಲಿ ಕೆಲವರನ್ನೂ ಯಾಜಕರ ಹಿರಿಯರಲ್ಲಿ ಕೆಲವರನ್ನೂ ಕರೆದುಕೊಂಡು ಹೋಗು. ನಾನು ನಿನಗೆ ಹೇಳುವುದನ್ನು ನೀನು ಅಲ್ಲಿ ಅವರಿಗೆ ಹೇಳು.


ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.


ಬೆನ್‌ಹಿನ್ನೋಮ್ ಕಣಿವೆಯಲ್ಲಿ ಧೂಪಹಾಕಿದನು. ತನ್ನ ಸ್ವಂತ ಮಕ್ಕಳನ್ನು ಬೆಂಕಿಯಲ್ಲಿ ಸುಟ್ಟು ವಿಗ್ರಹಗಳಿಗೆ ಆಹುತಿಕೊಟ್ಟನು. ಆ ದೇಶದ ಜನರು ಮಾಡಿದ ಭಯಂಕರ ಪಾಪಗಳನ್ನು ತಾನೂ ಮಾಡಿದನು. ಇಸ್ರೇಲ್ ಜನರು ಆ ದೇಶವನ್ನು ಪ್ರವೇಶಿಸಿದಾಗ ದೇವರು ಅವರನ್ನು ಹೊರಗೆ ಹೊರಡಿಸಿದ್ದನು.


ಫಿಲಿಷ್ಟಿಯರು ರೆಫಾಯೀಮ್ ತಗ್ಗಿನಲ್ಲಿ ವಾಸಿಸುತ್ತಿದ್ದ ಇಸ್ರೇಲರ ಮೇಲೆ ದಾಳಿಮಾಡಿ ಅವರದನ್ನೆಲ್ಲಾ ದೋಚಿಕೊಂಡರು.


ಒಂದು ದಿನ, ಅದೋನೀಯನು ಎನ್‌ರೋಗೆಲಿನ ಹತ್ತಿರದ ಚೋಹೆಲೆತ್ ಎಂಬ ಬಂಡೆಯ ಬಳಿ ಕೆಲವು ಕುರಿಗಳನ್ನು, ಹಸುಗಳನ್ನು ಮತ್ತು ಕೊಬ್ಬಿದ ಕರುಗಳನ್ನು ಸಮಾಧಾನಯಜ್ಞವಾಗಿ ಅರ್ಪಿಸಿದನು. ಅದೋನೀಯನು ತನ್ನ ಸಹೋದರರನ್ನು (ರಾಜನ ಇತರ ಗಂಡುಮಕ್ಕಳನ್ನು) ಮತ್ತು ಯೆಹೂದದ ಅಧಿಕಾರಿಗಳನ್ನು ಆಹ್ವಾನಿಸಿದನು.


ಯಾಜಕರ ಮಕ್ಕಳಾದ ಯೋನಾತಾನನು ಮತ್ತು ಅಹೀಮಾಚನು ಎನ್-ರೋಗೆಲಿನ ಬುಗ್ಗೆಯ ಹತ್ತಿರ ಕಾದಿದ್ದರು. ತಾವು ನಗರದೊಳಕ್ಕೆ ಹೋಗುವುದನ್ನು ಯಾರೂ ನೋಡಬಾರದೆಂದು ಅವರು ಅಲ್ಲಿ ಅಡಗಿಕೊಂಡಿದ್ದರು. ಆದ್ದರಿಂದ ಕೆಲಸದ ಹುಡುಗಿಯೊಬ್ಬಳು ಹೊರಗೆ ಬಂದು ಅವರಿಗೆ ಆ ಸಂದೇಶವನ್ನು ತಿಳಿಸಿದಳು. ಬಳಿಕ ಯೋನಾತಾನನು ಮತ್ತು ಅಹೀಮಾಚನು ದಾವೀದ ರಾಜನ ಬಳಿಗೆ ಹೋಗಿ ಅದನ್ನು ತಿಳಿಸಿದರು.


ಆದರೆ ಆ ಲೇವಿಯು ಇನ್ನೊಂದು ರಾತ್ರಿ ಅಲ್ಲಿ ಇರಲು ಇಷ್ಟಪಡಲಿಲ್ಲ. ಅವನು ತನ್ನ ಎರಡು ಕತ್ತೆಗಳನ್ನು ತೆಗೆದುಕೊಂಡು ಮತ್ತು ತನ್ನ ಉಪಪತ್ನಿಯನ್ನು ಕರೆದುಕೊಂಡು ಹೊರಟನು. ಅವನು ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸ್ ನಗರದವರೆಗೆ ಪ್ರಯಾಣ ಮಾಡಿದನು.


ಬೆನ್ಯಾಮೀನನ ಕುಲದವರಿಗೆ ಯೆಬೂಸಿಯರನ್ನು ಜೆರುಸಲೇಮಿನಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿನವರೆಗೂ ಅವರು ಬೆನ್ಯಾಮೀನರೊಡನೆ ಜೆರುಸಲೇಮಿನಲ್ಲಿಯೇ ವಾಸವಾಗಿದ್ದಾರೆ.


ಯೆಹೂದ್ಯರು ಜೆರುಸಲೇಮಿನ ವಿರುದ್ಧ ಯುದ್ಧಮಾಡಿ ಅದನ್ನು ಗೆದ್ದುಕೊಂಡರು. ಯೆಹೂದ್ಯರು ಜೆರುಸಲೇಮಿನ ಜನರನ್ನು ಖಡ್ಗಗಳಿಂದ ಕೊಂದು ನಗರವನ್ನು ಸುಟ್ಟುಹಾಕಿದರು.


ಚೇಲ, ಎಲೆಫ್, ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸಿಯರ ಪಟ್ಟಣ, ಗಿಬೆಯತ್ ಮತ್ತು ಕಿರ್ಯತ್. ಬೆನ್ಯಾಮೀನ್ ಗೋತ್ರಗಳವರು ಈ ಪ್ರದೇಶಗಳನ್ನೆಲ್ಲ ಪಡೆದುಕೊಂಡರು.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಹಾಕಲು ಯೆಹೂದ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಯೆಬೂಸಿಯರು ಇಂದಿನವರೆಗೂ ಜೆರುಸಲೇಮಿನಲ್ಲಿ ಯೆಹೂದ ಕುಲದವರೊಡನೆ ವಾಸವಾಗಿದ್ದಾರೆ.


ಫಿಲಿಷ್ಟಿಯರು ಬಂದು ರೆಫಾಯೀಮ್ ಕಣಿವೆಯಲ್ಲಿ ಪಾಳೆಯವನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು