ಯೆಹೋಶುವ 18:21 - ಪರಿಶುದ್ದ ಬೈಬಲ್21 ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಪಟ್ಟಣಗಳು: ಜೆರಿಕೊ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ನಗರಗಳು ಯಾವುವೆಂದರೆ: ಜೆರಿಕೊ, ಬೇತ್ ಹೊಗ್ಲಾ, ಏಮೆಕ್ಕೆಚ್ಚೀಚ್, ಬೇತ್ ಅರಾಬಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಪಟ್ಟಣಗಳಾವವಂದರೆ - ಯೆರಿಕೋ, ಬೇತ್‍ಹೊಗ್ಲಾ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಬೆನ್ಯಾಮೀನನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರಕಿರುವ ಪಟ್ಟಣಗಳ ವಿವರ: ಯೆರಿಕೋ, ಬೇತ್ ಹೊಗ್ಲಾ, ಏಮೆಕ್ ಕೆಚ್ಚೀಚ್ ತಗ್ಗು, ಅಧ್ಯಾಯವನ್ನು ನೋಡಿ |
ಆಗ ಯೇಸು ಅವನಿಗೆ ಹೇಳಿದ್ದೇನೆಂದರೆ: “ಒಬ್ಬ ಮನುಷ್ಯನು ಜೆರುಸಲೇಮಿನಿಂದ ಇಳಿದು ಜೆರಿಕೊವಿನ ಮಾರ್ಗವಾಗಿ ಹೋಗುತ್ತಿದ್ದನು. ಕೆಲವು ದರೋಡೆಗಾರರು ಅವನನ್ನು ಸುತ್ತುಗಟ್ಟಿದರು. ಅವರು ಅವನ ಬಟ್ಟೆಯನ್ನು ಹರಿದುಹಾಕಿ ಅವನನ್ನು ಹೊಡೆದರು. ಅವನು ಮೇಲೇಳಲಾರದೆ ನೆಲದಮೇಲೆ ಬಿದ್ದುಕೊಂಡನು. ದರೋಡೆಗಾರರು ಅವನನ್ನು ನೆಲದ ಮೇಲೆಯೇ ಬಿಟ್ಟುಹೋದರು. ಅವನು ಸಾಯುವ ಸ್ಥಿತಿಯಲ್ಲಿದ್ದನು.
ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”
“ಈ ವಿಶೇಷ ಜಾಗದ ದಕ್ಷಿಣದ ಸ್ಥಳವು ಜೋರ್ಡನ್ ಹೊಳೆಯ ಪೂರ್ವದಲ್ಲಿ ವಾಸಿಸಿದ್ದ ಇಸ್ರೇಲರ ಕುಲದವರಿಗಾಗಿ. ಈ ಗೋತ್ರದ ಪ್ರತಿ ಒಂದೊಂದು ಕುಲದವರಿಗೆ ಪೂರ್ವದ ಮೇರೆಯಿಂದ ಹಿಡಿದು ಭೂಮಧ್ಯ ಸಮುದ್ರದವರೆಗಿನ ದೇಶದ ಭಾಗದಲ್ಲಿ ಒಂದು ತುಂಡು ಅವರಿಗೆ ದೊರೆಯುವದು. ಉತ್ತರದಿಂದ ದಕ್ಷಿಣದ ತನಕ ಇಲ್ಲಿ ಜಾಗ ದೊರೆಯುವ ಕುಲದವರು ಯಾರೆಂದರೆ, ಬೆನ್ಯಾಮೀನ್, ಸಿಮೆಯೋನ್, ಇಸ್ಸಾಕಾರ್, ಜೆಬೂಲೂನ್ ಮತ್ತು ಗಾದ್ ವಂಶದವರು.