ಯೆಹೋಶುವ 18:24 - ಪರಿಶುದ್ದ ಬೈಬಲ್24 ಅಮ್ಮೋನ್ಯ, ಕೆಫೆರ್, ಒಫ್ನೀ ಮತ್ತು ಗೆಬಾ ಎಂಬ ಹನ್ನೆರಡು ನಗರಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಕೆಫೆರ್ ಅಮ್ಮೋನಿ, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ ಆಗಿರುತ್ತವೆ. ಅಧ್ಯಾಯವನ್ನು ನೋಡಿ |
ಆಗ ರಾಜನಾದ ಆಸನು ಯೆಹೂದದ ಜನರಿಗೆಲ್ಲ ಒಂದು ಆಜ್ಞೆಯನ್ನು ಮಾಡಿದನು. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಸಹಾಯಮಾಡಬೇಕಾಯಿತು. ಬಾಷನು ರಾಮ ನಗರವನ್ನು ಬಲಪಡಿಸಲೆಂದು ಉಪಯೋಗಿಸುತ್ತಿದ್ದ ಎಲ್ಲಾ ಕಲ್ಲುಗಳನ್ನು ಮತ್ತು ಮರಗಳನ್ನು ಅವರು ರಾಮಕ್ಕೆ ಹೋಗಿ ತೆಗೆದುಕೊಂಡು ಬಂದರು. ಅವರು ಆ ವಸ್ತುಗಳನ್ನು ಬೆನ್ಯಾಮೀನ್ ದೇಶದ ಗೆಬಕ್ಕೆ ಮತ್ತು ಮಿಚ್ಛೆಗಳಿಗೆ ತೆಗೆದುಕೊಂಡು ಹೋದರು. ನಂತರ ರಾಜನಾದ ಆಸನು ಆ ಪಟ್ಟಣಗಳನ್ನು ಮತ್ತಷ್ಟು ಬಲಪಡಿಸಿದನು.
ಆ ಸಮಯದಲ್ಲಿ ಯಾಜಕರು ಯಜ್ಞಗಳನ್ನು ಜೆರುಸಲೇಮಿಗೆ ತರಲಿಲ್ಲ ಮತ್ತು ದೇವಾಲಯದಲ್ಲಿನ ಯಜ್ಞವೇದಿಕೆಯ ಮೇಲೆ ಅವುಗಳನ್ನು ಅರ್ಪಿಸಲಿಲ್ಲ. ಯಾಜಕರು ಯೆಹೂದದ ಎಲ್ಲಾ ನಗರಗಳಲ್ಲಿಯೂ ವಾಸಿಸುತ್ತಿದ್ದರು. ಅವರು ಆ ನಗರಗಳಲ್ಲಿನ ಉನ್ನತಸ್ಥಳಗಳಲ್ಲಿ ಧೂಪವನ್ನು ಸುಡುತ್ತಿದ್ದರು ಮತ್ತು ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆ ಉನ್ನತಸ್ಥಳಗಳು ಗೆಬದಿಂದ ಬೇರ್ಷೆಬದವರೆಗೆ ಎಲ್ಲಾ ಕಡೆಗಳಲ್ಲಿದ್ದವು. ಯಾಜಕರು ತಮ್ಮ ಹುಳಿಯಿಲ್ಲದ ರೊಟ್ಟಿಗಳನ್ನು ಜೆರುಸಲೇಮಿನ ದೇವಾಲಯದಲ್ಲಿ ಯಾಜಕರಾಗಿದ್ದ ವಿಶೇಷ ಸ್ಥಳಗಳಲ್ಲಿ ತಿನ್ನದೆ ಆ ಊರುಗಳಲ್ಲಿ ಸಾಮಾನ್ಯ ಜನರೊಂದಿಗೆ ತಿನ್ನುತ್ತಿದ್ದರು. ಆದರೆ ರಾಜನಾದ ಯೋಷೀಯನು ಆ ಉನ್ನತಸ್ಥಳಗಳನ್ನು ನಾಶಗೊಳಿಸಿ ಆ ಯಾಜಕರನ್ನು ಜೆರುಸಲೇಮಿಗೆ ಕರೆತಂದನು. ನಗರಾಧಿಕಾರಿಯಾದ ಯೆಹೋಶುವನ ದ್ವಾರದ ಎಡಗಡೆಯಲ್ಲಿದ್ದ ಉನ್ನತಸ್ಥಳಗಳನ್ನು ಯೋಷೀಯನು ನಾಶಗೊಳಿಸಿದನು.