ಯೆಹೋಶುವ 18:3 - ಪರಿಶುದ್ದ ಬೈಬಲ್3 ಆದ್ದರಿಂದ ಯೆಹೋಶುವನು ಇಸ್ರೇಲರಿಗೆ, “ನೀವು ನಿಮ್ಮ ಭೂಮಿಯನ್ನು ಪಡೆದುಕೊಳ್ಳಲು ಅಷ್ಟು ದೀರ್ಘಕಾಲದವರೆಗೆ ಏಕೆ ಕಾಯುತ್ತೀರಿ? ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಈ ಭೂಮಿಯನ್ನು ನಿಮಗೆ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದರಲ್ಲಿ ಇನ್ನೆಷ್ಟು ತಡಮಾಡುತ್ತೀರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದುದರಿಂದ ಯೆಹೋಶುವ ಅವರಿಗೆ, “ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ನಾಡನ್ನು ಸ್ವಾಧೀನ ಮಾಡಿಕೊಳ್ಳಲು ಇನ್ನೆಷ್ಟು ತಡ ಮಾಡುತ್ತಿರುವಿರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಗ ಯೆಹೋಶುವನು ಇಸ್ರಾಯೇಲ್ಯರಿಗೆ - ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವದರಲ್ಲಿ ಇನ್ನೆಷ್ಟು ತಡಮಾಡುತ್ತೀರಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋಶುವನು ಇಸ್ರಾಯೇಲರಿಗೆ, “ನಿಮ್ಮ ತಂದೆಗಳ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಎಷ್ಟರವರೆಗೆ ಆಲಸ್ಯ ಮಾಡುವಿರಿ? ಅಧ್ಯಾಯವನ್ನು ನೋಡಿ |
ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.