ಯೆಹೋಶುವ 18:7 - ಪರಿಶುದ್ದ ಬೈಬಲ್7 ಲೇವಿಯ ಕುಲದವರಿಗೆ ಭೂಮಿಯಲ್ಲಿ ಪಾಲು ದೊರೆಯುವುದಿಲ್ಲ. ಯಾಜಕರಾಗಿ ಯೆಹೋವನ ಸೇವೆ ಮಾಡುವುದೇ ಅವರ ಪಾಲು. ಗಾದ್ಯರು, ರೂಬೇನ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ವಾಗ್ದಾನ ಮಾಡಲಾದ ಭೂಮಿಯನ್ನು ಈಗಾಗಲೇ ಪಡೆದುಕೊಂಡಿದ್ದಾರೆ. ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದಾರೆ. ಯೆಹೋವನ ಸೇವಕನಾದ ಮೋಶೆಯು ಈಗಾಗಲೇ ಆ ಭೂಮಿಯನ್ನು ಅವರಿಗೆ ಕೊಟ್ಟಿದ್ದಾನೆ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಲೇವಿಯರಿಗೆ ನಿಮ್ಮ ಸಂಗಡ ಪಾಲು ಇರುವುದಿಲ್ಲ. ಯೆಹೋವನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸ್ವತ್ತಾಗಿದೆ. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧ ಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದಲೇ ಸ್ವತ್ತು ಸಿಕ್ಕಿದೆ,” ಎಂದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಲೇವಿಯರಿಗೆ ನಿಮ್ಮ ಹಾಗೆ ಪಾಲು ಸಿಕ್ಕುವುದಿಲ್ಲ. ಸರ್ವೇಶ್ವರನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸೊತ್ತು. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಜೋರ್ಡನಿನ ಪೂರ್ವದಿಕ್ಕಿನಲ್ಲಿ ಸರ್ವೇಶ್ವರನ ದಾಸ ಮೋಶೆಯಿಂದಲೇ ಸೊತ್ತು ಸಿಕ್ಕಿದೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಲೇವಿಯರಿಗೆ ನಿಮ್ಮ ಸಂಗಡ ಪಾಲು ಸಿಕ್ಕುವದಿಲ್ಲ; ಯೆಹೋವನ ಯಾಜಕ ಸೇವೆಯೇ ಅವರ ಸ್ವಾಸ್ತ್ಯವಾಗಿದೆ. ಗಾದ್ ರೂಬೇನ್ ಕುಲಗಳಿಗೂ ಮನಸ್ಸೆಕುಲದ ಅರ್ಧಜನರಿಗೂ ಯೊರ್ದನಿನ ಪೂರ್ವ ದಿಕ್ಕಿನಲ್ಲಿ ಯೆಹೋವನ ಸೇವಕನಾದ ಮೋಶೆಯಿಂದ ಸ್ವಾಸ್ತ್ಯವು ಸಿಕ್ಕಿತು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಲೇವಿಯರಿಗೆ ನಿಮ್ಮೊಳಗೆ ಪಾಲಿಲ್ಲ. ಏಕೆಂದರೆ ಅವರಿಗೆ ಯೆಹೋವ ದೇವರ ಯಾಜಕತ್ವವೇ ಅವರ ಸೊತ್ತು. ಇದಲ್ಲದೆ ಗಾದನೂ ರೂಬೇನನೂ ಮನಸ್ಸೆಯ ಅರ್ಧ ಗೋತ್ರವೂ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಯೆಹೋವ ದೇವರ ಸೇವಕನಾದ ಮೋಶೆಯಿಂದಲೇ ತಮಗೆ ಸೊತ್ತನ್ನು ತೆಗೆದುಕೊಂಡಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |
ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”