Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:15 - ಪರಿಶುದ್ದ ಬೈಬಲ್‌

15 ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲ್ಲಾ, ಬೆತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು ಈ ಸೀಮೆಯಲ್ಲಿ ಸೇರಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕಟ್ಟಾತ್, ನಹಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳಿಗೆ ಸೇರಿದ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೆತ್ಲೆಹೇಮ್ ಇವೇ ಮೊದಲಾದ ಹನ್ನೆರಡು ನಗರಗಳೂ ಅವುಗಳಿಗೆ ಸೇರಿದ ಗ್ರಾಮಗಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈ ಮೇರೆಯಲ್ಲಿರುವ ಕಟ್ಟಾತ್, ನಹಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳ ಗ್ರಾಮಗಳು ಸಹ ಒಳಪಟ್ಟಿರುತ್ತದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:15
11 ತಿಳಿವುಗಳ ಹೋಲಿಕೆ  

ಹಾಚೋರಿನ ಅರಸನಾದ ಯಾಬೀನನು ನಡೆದ ಎಲ್ಲ ಸಂಗತಿಗಳ ಬಗ್ಗೆ ಕೇಳಿದನು. ಅದಕ್ಕಾಗಿ ಅವನು ಅನೇಕ ಅರಸರ ಸೈನ್ಯಗಳನ್ನು ಒಟ್ಟಿಗೆ ಸೇರಿಸುವ ನಿರ್ಧಾರವನ್ನು ಮಾಡಿದನು. ಮಾದೋನಿನ ಅರಸನಾದ ಯೋಬಾಬನಿಗೆ, ಶಿಮ್ರೋನಿನ ಅರಸನಿಗೆ, ಅಕ್ಷಾಫಿನ ಅರಸನಿಗೆ ಯಾಬೀನನು ಸಂದೇಶವನ್ನು ಕಳುಹಿಸಿದನು.


ದಾವೀದನಿಗೆ ತನ್ನ ಸ್ವಸ್ಥಳದ ನೀರನ್ನು ಕುಡಿಯಲು ಅತಿಯಾಸೆಯಾಯಿತು. ದಾವೀದನು, “ಬೆತ್ಲೆಹೇಮ್ ನಗರದ್ವಾರದ ಬಾವಿಯಿಂದ ಯಾರಾದರೂ ನೀರನ್ನು ನನಗೆ ತಂದುಕೊಟ್ಟರೆ ಎಷ್ಟು ಚೆನ್ನಾಗಿರುವುದು” ಎಂದು ಹೇಳಿದನು.


ಅವರಿಬ್ಬರೂ ಪ್ರಯಾಣ ಮಾಡಿ ಬೆತ್ಲೆಹೇಮ್ ಊರಿಗೆ ತಲುಪಿದರು. ಅವರಿಬ್ಬರನ್ನು ಕಂಡಾಗ ಬೆತ್ಲೆಹೇಮ್ ಪಟ್ಟಣದ ಜನರಿಗೆ ಆಶ್ಚರ್ಯವಾಯಿತು. “ಇವಳು ನೊವೊಮಿಯೇ?” ಎಂದು ಅವರು ಕೇಳಿದರು.


ಜೆಬುಲೂನ್ಯರ ಸಂಗಡವೂ ಹೀಗೆಯೇ ಆಯಿತು. ಕಿಟ್ರೋನ್ ಮತ್ತು ನಹಲೋಲ್ ನಗರಗಳಲ್ಲಿ ಕೆಲವು ಕಾನಾನ್ಯರು ವಾಸಮಾಡಿಕೊಂಡಿದ್ದರು. ಜೆಬುಲೂನ್ಯರು ಅವರನ್ನು ಆ ಪ್ರದೇಶದಿಂದ ಹೊರದೂಡಲಿಲ್ಲ. ಆ ಕಾನಾನ್ಯರು ಅಲ್ಲಿಯೇ ಉಳಿದುಕೊಂಡು ಜೆಬುಲೂನ್ಯರೊಂದಿಗೆ ವಾಸಮಾಡಿದರು. ಆದರೆ ಜೆಬುಲೂನ್ಯರು ಅವರನ್ನು ತಮ್ಮ ಗುಲಾಮರಂತೆ ಕೆಲಸಮಾಡಲು ಹಚ್ಚಿದರು.


ಶಿಮ್ರೋನ್ಮೆರೋನಿನ ಅರಸ ಅಕ್ಷಾಫಿನ ಅರಸ


“ನೇಯ”ದಿಂದ ಅದು ತಿರುಗಿಕೊಂಡು ಉತ್ತರದಿಕ್ಕಿನ ಹನ್ನಾತೋನಿನ ಮೇಲಿಂದ ಇಫ್ತಹೇಲಿನ ಕಣಿವೆಗೆ ಹೋಗುತ್ತದೆ.


ಈ ಪಟ್ಟಣಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ಜೆಬುಲೂನ್ಯರಿಗೆ ಕೊಡಲಾಯಿತು. ಜೆಬುಲೂನ್ಯರ ಪ್ರತಿಯೊಂದು ಗೋತ್ರದವರು ತಮ್ಮ ಪಾಲಿನ ಭೂಮಿಯನ್ನು ಪಡೆದರು.


ಯೆಫ್ತಾಹನ ತರುವಾಯ ಇಬ್ಜಾನ ಎಂಬವನು ಇಸ್ರೇಲರ ನ್ಯಾಯಾಧೀಶನಾಗಿದ್ದನು. ಇಬ್ಜಾನನು ಬೆತ್ಲೆಹೇಮ್ ನಗರದವನು.


ಲೇವಿಯ ಕುಲದ ಒಬ್ಬ ತರುಣನಿದ್ದನು. ಅವನು ಯೆಹೂದದ ಬೆತ್ಲೆಹೇಮಿನವನಾಗಿದ್ದು ಯೆಹೂದ್ಯರ ಸಂಗಡ ವಾಸಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು