22 ಅವರ ಭೂಮಿಯ ಮೇರೆಯು ತಾಬೋರ್, ಶಹಚೀಮಾ, ಬೇತ್ಷೆಮೆಷ್ ಎಂಬ ಊರುಗಳನ್ನು ತಲುಪಿತ್ತು. ಆ ಸೀಮೆಯು ಜೋರ್ಡನ್ ನದಿಗೆ ಮುಕ್ತಾಯಗೊಳ್ಳುತ್ತಿತ್ತು. ಒಟ್ಟಿನಲ್ಲಿ ಹದಿನಾರು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳು ಇದರಲ್ಲಿದ್ದವು.
22 ತಾಬೋರ್, ಶಹಚೀಮಾ, ಬೇತ್ಷೆಮೆಷ್ ಎಂಬ ಊರುಗಳು ಅದರ ಮೇರೆಯೊಳಗಿದ್ದವು. ಮೇರೆಯು ಯೊರ್ದನ್ ನದಿಯ ತೀರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಾರೆ ಹದಿನಾರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,
ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.
ಈ ಸಂದೇಶವು ರಾಜನಿಂದ ಬಂದದ್ದು. ಆ ರಾಜನೇ ಸರ್ವಶಕ್ತನಾದ ಯೆಹೋವನು. “ನನ್ನ ಜೀವದಾಣೆಯಾಗಿ ಹೇಳುತ್ತೇನೆ. ಬಲಿಷ್ಠನಾದ ನಾಯಕನು ಬರುವನು. ಅವನು ತಾಬೋರ್ ಬೆಟ್ಟದಂತೆಯೂ ಸಮುದ್ರದ ಸಮೀಪದ ಕರ್ಮೆಲ್ ಗುಡ್ಡದಂತೆಯೂ ಇರುವನು.
ಆಯಿನ್, ಯುಟ್ಟಾ ಮತ್ತು ಬೇತ್‌ಷೆಮೆಷ್ ಎಂಬ ಪಟ್ಟಣಗಳನ್ನು ಸಹ ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣಗಳ ಸಮೀಪದಲ್ಲಿದ್ದ ಭೂಮಿಯನ್ನು ಸಹ ಕೊಟ್ಟರು. ಈ ಎರಡು ಗುಂಪುಗಳಿಗೆ ಅವರು ಒಂಭತ್ತು ಪಟ್ಟಣಗಳನ್ನು ಕೊಟ್ಟರು.
ಗೇರ್ಷೋಮ್ಯನ ಸಂತತಿಯವರಿಗೆ ಹದಿಮೂರು ಪಟ್ಟಣಗಳು ದೊರಕಿದವು. ಇವು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನ್ ಪ್ರದೇಶದಲ್ಲಿ ವಾಸವಾಗಿದ್ದ ಅರ್ಧ ಮನಸ್ಸೆ ಕುಲದವರಿಂದ ಆ ಪಟ್ಟಣಗಳು ದೊರೆತವು.