ಯೆಹೋಶುವ 19:26 - ಪರಿಶುದ್ದ ಬೈಬಲ್26 ಅಲಮ್ಮೆಲೆಕ್, ಅಮಾದ್ ಮತ್ತು ಮಿಷಾಲ್. ಇದರ ಪಶ್ಚಿಮ ಮೇರೆಯು ಕರ್ಮೆಲ್ ಬೆಟ್ಟ ಮತ್ತು ಶೀಹೋರ್‌ಲಿಬ್ನತ್‌ವರೆಗೆ ಚಾಚಿಕೊಂಡಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಲಮ್ಮೆಲೆಕ್, ಅಮಾದ್, ಮಿಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ, ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ ಅಲ್ಲಿಂದ ಪೂರ್ವಕ್ಕೆ ತಿರುಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಲಮ್ಮೆಲೆಕ್, ಅಮಾದ್, ಮಿಷಾಲ್. ಇವರ ನಾಡಿನ ಎಲ್ಲೆ ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅಲಮ್ಮೆಲೆಕ್, ಅಮಾದ್, ವಿುಷಾಲ್ ಇವುಗಳೇ. ಇವರ ದೇಶದ ಮೇರೆಯು ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಗುಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲ್, ಶೀಹೋರ್ ಲಿಬ್ನತ್ ಕಡೆ ಹೋಗಿ, ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರಗಳನ್ನು ನಾನು ಏರಿದೆನು. ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿನೊಳಗೂ ಹೋಗಿದ್ದೇನೆ.
ಸಮುವೇಲನು ಮಾರನೆಯ ದಿನ ಬೆಳಿಗ್ಗೆ ಮೇಲೆದ್ದು, ಸೌಲನನ್ನು ಭೇಟಿಮಾಡಲು ಹೋದನು. ಆದರೆ ಜನರೆಲ್ಲ ಸಮುವೇಲನಿಗೆ, “ಸೌಲನು ತನ್ನ ಗೌರವಾರ್ಥವಾಗಿ ಜ್ಞಾಪಕಸ್ತಂಭವನ್ನು ನಿರ್ಮಿಸಲು ಕರ್ಮೆಲ್ ಎಂಬ ಪಟ್ಟಣಕ್ಕೆ ಹೋದನು. ನಂತರ ಸೌಲನು ಕೆಲವು ಪ್ರದೇಶಗಳನ್ನು ಸುತ್ತಿಕೊಂಡು ಗಿಲ್ಗಾಲಿಗೆ ಹೋದನು” ಎಂದು ಹೇಳಿದರು. ಸಮುವೇಲನು ಸೌಲನಿದ್ದ ಸ್ಥಳಕ್ಕೆ ಹೋದನು. ಸೌಲನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳನ್ನು ಪ್ರಥಮ ಸರ್ವಾಂಗಹೋಮವಾಗಿ ಯೆಹೋವನಿಗೆ ಅರ್ಪಿಸುತ್ತಿದ್ದನು.