Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:29 - ಪರಿಶುದ್ದ ಬೈಬಲ್‌

29 ಅಲ್ಲಿಂದ ಆ ಸೀಮೆಯು ದಕ್ಷಿಣದಿಕ್ಕಿಗೆ ಹಿಂತಿರುಗಿ ರಾಮಾವನ್ನು ತಲುಪಿ, ಅಲ್ಲಿಂದ ಸುಭದ್ರ ನಗರವಾದ ತೂರ್‌ಗೆ ಮುಂದುವರೆದು ಅಲ್ಲಿಂದ ತಿರುಗಿಕೊಂಡು ಹೋಸಾಕ್ಕೆ ತಲುಪುತ್ತದೆ. ಅಲ್ಲಿಂದ ಅಕ್ಜೀಬ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಲ್ಲಿಂದ ಅದು ತಿರುಗಿಕೊಂಡು ರಾಮ, ತೂರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರ ತೀರದಲ್ಲಿ ಕೊನೆಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅಲ್ಲಿಂದ ಅದು ತಿರುಗಿಕೊಂಡು ರಾಮಾ, ಟೈರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರತೀರದಲ್ಲಿ ಕೊನೆಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅಲ್ಲಿಂದ ಅದು ತಿರುಗಿಕೊಂಡು ರಾಮಾ, ತೂರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತಕ್ಕೆ ಹೋಗಿ ಸಮುದ್ರತೀರದಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅಲ್ಲಿಂದ ರಾಮಾ, ಟೈರ್ ಎಂಬ ಕೋಟೆಪಟ್ಟಣದವರೆಗೂ ಹೋಗುತ್ತದೆ. ಅಲ್ಲಿಂದ ಹೋಸಾ ಕಡೆ ಹೊರಟು ಮೆಡಿಟೆರಿಯನ್ ಸಮುದ್ರದ ಬಳಿ ಅಕ್ಜೀಬ್ ಮೇರೆಯ ಅಂಚಿಗೆ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:29
12 ತಿಳಿವುಗಳ ಹೋಲಿಕೆ  

ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ನಗರಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಲಿಲ್ಲ.


ತೂರಿನ ರಾಜನಾದ ಹೀರಾಮನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಹೀರಾಮನು ದೇವದಾರು ಮರಗಳನ್ನು, ಬಡಗಿಗಳನ್ನು ಮತ್ತು ಕಲ್ಲಿನಲ್ಲಿ ಕೆತ್ತನೆ ಮಾಡುವ ಶಿಲ್ಪಿಗಳನ್ನೂ ಸಹ ಕಳುಹಿಸಿದನು. ಅವರು ದಾವೀದನಿಗಾಗಿ ಒಂದು ಮನೆಯನ್ನು ಕಟ್ಟಿದರು.


ಆದ್ದರಿಂದ ಗತ್‌ನಲ್ಲಿರುವ ಮೋರೆಷತ್‌ಗೆ ಬೀಳ್ಕೊಡುವ ಕಾಣಿಕೆಗಳನ್ನು ಕೊಡು. ಅಕ್ಜೀಬಿನ ಕುಟುಂಬಗಳು ಇಸ್ರೇಲ್ ಅರಸರನ್ನು ಮೋಸಪಡಿಸುವವು.


ಆಕೆಗೆ ಮೂರನೆಯ ಮಗನು ಹುಟ್ಟಿದಾಗ ಆಕೆ ಅದಕ್ಕೆ ಶೇಲಹ ಎಂದು ಹೆಸರಿಟ್ಟಳು. ಆ ಮಗು ಹುಟ್ಟಿದಾಗ ಯೆಹೂದನು ಕಜೀಬೂರಿನಲ್ಲಿ ವಾಸಿಸುತ್ತಿದ್ದನು.


ಉಮ್ಮಾ, ಅಫೇಕ್ ಮತ್ತು ರೆಹೋಬ್ ಹತ್ತಿರ ಸಮುದ್ರದಲ್ಲಿ ಕೊನೆಗೊಳ್ಳುತ್ತದೆ. ಒಟ್ಟಿನಲ್ಲಿ ಇಪ್ಪತ್ತೆರಡು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು ಇದರಲ್ಲಿ ಸೇರಿದ್ದವು.


ಅವರು ತೂರ್ ಕೋಟೆಗೂ ಹಿವ್ವಿಯರ ಮತ್ತು ಕಾನಾನ್ಯರ ಎಲ್ಲಾ ನಗರಗಳಿಗೂ ಯೆಹೂದದ ದಕ್ಷಿಣಕ್ಕಿರುವ ಬೇರ್ಷೆಬಕ್ಕೂ ಹೋದರು.


ತೂರ್ ಒಂದು ಕೋಟೆಯಂತೆ ಕಟ್ಟಲ್ಪಟ್ಟಿದೆ. ಅಲ್ಲಿರುವ ಜನರು ಬೆಳ್ಳಿಯನ್ನು ಧೂಳಿನಂತೆ ಸಂಗ್ರಹಿಸಿರುತ್ತಾರೆ. ಬಂಗಾರವಂತೂ ಮಣ್ಣಿನ ತರಹ ಸಾಮಾನ್ಯವಾಗಿರುತ್ತದೆ.


ಬೆನ್ಯಾಮೀನ್ ಗೋತ್ರದವರು ಹದಿನಾಲ್ಕು ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳನ್ನು ಪಡೆದುಕೊಂಡರು. ಆ ಊರುಗಳು ಇಂತಿವೆ: ಗಿಬ್ಯೋನ್, ರಾಮಾ, ಬೇರೋತ್,


ಸೊಲೊಮೋನನು ಎಂಭತ್ತು ಸಾವಿರ ಜನರನ್ನು ಬಲಾತ್ಕಾರದಿಂದ ಬೆಟ್ಟಪ್ರದೇಶದಲ್ಲಿ ಕೆಲಸ ಮಾಡಲು ನೇಮಿಸಿದನು. ಈ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಎಪ್ಪತ್ತು ಸಾವಿರ ಜನರು ಕಲ್ಲುಗಳನ್ನು ಹೊರುತ್ತಿದ್ದರು.


“ನರಪುತ್ರನೇ, ಚೀದೋನಿನ ಕಡೆಗೆ ನೋಡಿ ನನ್ನ ಪರವಾಗಿ ನೀನೇ ಅದರ ವಿರುದ್ಧವಾಗಿ ಮಾತನಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು