Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:33 - ಪರಿಶುದ್ದ ಬೈಬಲ್‌

33 ಅವರ ಭೂಮಿಯ ಮೇರೆಯು ಚಾನನ್ನೀಮಿನ ಹತ್ತಿರ ಇರುವ ದೊಡ್ಡ ಮರದಿಂದ ಆರಂಭವಾಗುತ್ತದೆ. ಇದು ಹೇಲೆಫಿನ ಹತ್ತಿರ ಇದೆ. ಬಳಿಕ ಆ ಮೇರೆಯು ಅದಾಮೀನೆಕೆಬ್ ಮತ್ತು ಯಬ್ನೆಯೇಲ್ ಇವುಗಳ ಮೂಲಕ ಲಕ್ಕೂಮಿಗೆ ಹೋಗಿ, ಜೋರ್ಡನ್ ನದಿಯ ತೀರದಲ್ಲಿ ಮುಕ್ತಾಯಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಚಾನನ್ನೀಮಿನಲ್ಲಿರುವ ಹೆಲೇಫಿನ ಅಲ್ಲೋನ ಮರದಿಂದ ಆದಾಮಿನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಲಕ್ಕೂಮಿಗೆ ಹೋಗಿ ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಚಾನನ್ನೀಮಿನಲ್ಲಿರುವ ಹೇಲೆಫಿನ ಅಲ್ಲೋನ್ ಮರದಿಂದ ತೊಡಗಿ ಅದಾಮೀನೆಕೆಬ್, ಯೆಬ್ನೆಯೇಲ್ ಇವುಗಳ ಮೇಲೆ ಲಕ್ಕೂಮಿಗೆ ಹೋಗಿ ಜೋರ್ಡನ್ ನದಿಯ ತೀರದಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಚಾನನ್ನೀವಿುನಲ್ಲಿರುವ ಹೇಲೆಫಿನ ಅಲ್ಲೋನ್ ಮರದಿಂದ ತೊಡಗಿ ಅದಾಮೀನೆಕೆಬ್; ಯಬ್ನೆಯೇಲ್ ಇವುಗಳ ಮೇಲೆ ಲಕ್ಕೂವಿುಗೆ ಹೋಗಿ ಯೊರ್ದನ್ ಹೊಳೆಯ ತೀರದಲ್ಲಿ ಮುಗಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರ ಮೇರೆಯು ಹೆಲೇಫ್ ಮತ್ತು ಚಾನನ್ನೀಮ್ ಎಂಬ ಕಡೆಯಲ್ಲಿ ಇರುವ ಅಲ್ಲೋನ್ ಮರದಿಂದ, ಆದಾಮಿ ನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಹಾದು ಲಕ್ಕೂಮ್ ತನಕ ಹೋಗಿ ಯೊರ್ದನ್ ನದಿಯ ತೀರದಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:33
3 ತಿಳಿವುಗಳ ಹೋಲಿಕೆ  

ಹೆಬೆರನೆಂಬ ಒಬ್ಬ ಮನುಷ್ಯನಿದ್ದನು. ಅವನು ಕೇನ್ಯರ ಕುಲದವನಾಗಿದ್ದನು. ಅವನು ಉಳಿದ ಕೇನ್ಯರನ್ನು ಬಿಟ್ಟು ಚಾನನ್ನೀಮ್ ಎಂಬ ಊರಲ್ಲಿ ಓಕ್ ವೃಕ್ಷದ ಬಳಿ ಮನೆ ಮಾಡಿಕೊಂಡಿದ್ದನು. (ಕೇನ್ಯರು ಹೋಬಾಬನ ಸಂತತಿಯವರಾಗಿದ್ದರು. ಹೋಬಾಬನು ಮೋಶೆಯ ಮಾವನಾಗಿದ್ದನು.) ಚಾನನ್ನೀಮ್ ಕೆದೆಷ್ ನಗರದ ಸಮೀಪದಲ್ಲಿತ್ತು.


ಭೂಮಿಯ ಆರನೆಯ ಭಾಗವನ್ನು ನಫ್ತಾಲಿ ಕುಲದವರಿಗೆ ಕೊಡಲಾಯಿತು. ಆ ಕುಲದ ಪ್ರತಿಯೊಂದು ಗೋತ್ರವು ತನ್ನ ಭೂಭಾಗವನ್ನು ಪಡೆಯಿತು.


ಅಲ್ಲಿಂದ ಆ ಮೇರೆಯು ಆಜ್ನೋತ್‌ತಾಬೋರಿನ ಮೂಲಕ ಹುಕ್ಕೋಕಿಗೆ ಹೋಗಿ ನಿಲ್ಲುತ್ತದೆ. ಅದರ ದಕ್ಷಿಣದ ಮೇರೆ ಜೆಬುಲೂನ್ಯರ ಮೇರೆಗೂ ಪಶ್ಚಿಮದ ಮೇರೆ ಆಶೇರ್ಯರ ಮೇರೆಗೂ ಹೊಂದಿಕೊಂಡಿದೆ. ಆ ಮೇರೆಯು ಪೂರ್ವದಿಕ್ಕಿನಲ್ಲಿ ಜೋರ್ಡನ್ ನದಿಯ ಬಳಿಯಿದ್ದ ಯೆಹೂದಕ್ಕೂ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು