Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:34 - ಪರಿಶುದ್ದ ಬೈಬಲ್‌

34 ಅಲ್ಲಿಂದ ಆ ಮೇರೆಯು ಆಜ್ನೋತ್‌ತಾಬೋರಿನ ಮೂಲಕ ಹುಕ್ಕೋಕಿಗೆ ಹೋಗಿ ನಿಲ್ಲುತ್ತದೆ. ಅದರ ದಕ್ಷಿಣದ ಮೇರೆ ಜೆಬುಲೂನ್ಯರ ಮೇರೆಗೂ ಪಶ್ಚಿಮದ ಮೇರೆ ಆಶೇರ್ಯರ ಮೇರೆಗೂ ಹೊಂದಿಕೊಂಡಿದೆ. ಆ ಮೇರೆಯು ಪೂರ್ವದಿಕ್ಕಿನಲ್ಲಿ ಜೋರ್ಡನ್ ನದಿಯ ಬಳಿಯಿದ್ದ ಯೆಹೂದಕ್ಕೂ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಇದಲ್ಲದೆ ಮೇರೆಯು ತಿರುಗಿ ಅದೇ ಸ್ಥಳದಿಂದ ಅಜ್ನೊತ್-ತಾಬೋರಿನ ಮೇಲೆ ಹುಕ್ಕೋಕಿಗೆ ಹೋಗುತ್ತದೆ, ದಕ್ಷಿಣದಲ್ಲಿ ಜೆಬುಲೂನ್ಯರ ಮೇರೆಗೂ, ಪಶ್ಚಿಮದಲ್ಲಿ ಆಶೇರರ ಮತ್ತು ಯೆಹೂದ್ಯರ ಮೇರೆಗೂ ಪೂರ್ವದಲ್ಲಿ ಯೊರ್ದನ್ ಹೊಳೆಗೂ ಹೊಂದಿಕೊಂಡಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಮತ್ತೆ ಅದೇ ಸ್ಥಳದಿಂದ ತೊಡಗಿ ಅಜ್ನೋತ್ ತಾಬೋರಿನ ಮೇಲೆ ಹುಕ್ಕೋಕಿಗೆ ಹೋಗುತ್ತದೆ. ದಕ್ಷಿಣದಲ್ಲಿ ಜೆಬುಲೂನ್ಯರ ಎಲ್ಲೆಗೂ ಪಶ್ಚಿಮದಲ್ಲಿ ಆಶೇರ್ಯರ ಮತ್ತು ಯೂದವಂಶದವರ ಎಲ್ಲೆಗೂ ಪೂರ್ವದಲ್ಲಿ ಜೋರ್ಡನ್ ನದಿಗೂ ಹೊಂದಿಕೊಂಡಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಇದಲ್ಲದೆ ಮೇರೆಯು ತಿರಿಗಿ ಅದೇ ಸ್ಥಳದಿಂದ ತೊಡಗಿ ಅಜ್ನೋತ್ ತಾಬೋರಿನ ಮೇಲೆ ಹುಕ್ಕೋಕಿಗೆ ಹೋಗುತ್ತದೆ. ದಕ್ಷಿಣದಲ್ಲಿ ಜೆಬುಲೂನ್ಯರ ಮೇರೆಗೂ ಪಶ್ಚಿಮದಲ್ಲಿ ಆಶೇರ್ಯರ ಮತ್ತು ಯೆಹೂದ್ಯರ ಮೇರೆಗೂ ಪೂರ್ವದಲ್ಲಿ ಯೊರ್ದನ್ ಹೊಳೆಗೂ ಹೊಂದಿಕೊಂಡಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆ ಮೇರೆಯು ಪಶ್ಚಿಮಕ್ಕೆ ಅಜ್ನೋತ್ ತಾಬೋರ್ ಕಡೆಗೆ ತಿರುಗಿ, ಅಲ್ಲಿಂದ ಹುಕ್ಕೋಕ್ ಹೊರಟು, ದಕ್ಷಿಣಕ್ಕೆ ಜೆಬುಲೂನನನ್ನೂ ಪಶ್ಚಿಮಕ್ಕೆ ಆಶೇರನ್ನೂ ಮತ್ತು ಯೆಹೂದಿಯರ ಮೇರೆಗೂ ಪೂರ್ವದಿಕ್ಕಿನಲ್ಲಿ ಯೊರ್ದನ್ ನದಿಯನ್ನು ಮುಟ್ಟಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:34
5 ತಿಳಿವುಗಳ ಹೋಲಿಕೆ  

ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ ಮಾತುಗಳು: “ನಫ್ತಾಲಿಯೇ, ನಿನಗೆ ಉತ್ತಮವಾದ ವಸ್ತುಗಳು ಅಧಿಕವಾಗಿ ದೊರೆಯುತ್ತವೆ. ಯೆಹೋವನು ನಿನ್ನನ್ನು ನಿಜವಾಗಿಯೂ ಆಶೀರ್ವದಿಸುವನು. ಗಲಿಲಾಯದ ಬಳಿಯಲ್ಲಿರುವ ಪ್ರಾಂತ್ಯವು ನಿನಗೆ ದೊರಕುವದು.”


ಅವರ ಭೂಮಿಯ ಮೇರೆಯು ತಾಬೋರ್, ಶಹಚೀಮಾ, ಬೇತ್‌ಷೆಮೆಷ್ ಎಂಬ ಊರುಗಳನ್ನು ತಲುಪಿತ್ತು. ಆ ಸೀಮೆಯು ಜೋರ್ಡನ್ ನದಿಗೆ ಮುಕ್ತಾಯಗೊಳ್ಳುತ್ತಿತ್ತು. ಒಟ್ಟಿನಲ್ಲಿ ಹದಿನಾರು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳು ಇದರಲ್ಲಿದ್ದವು.


ಅಲ್ಲಿಂದ ಅದು ಪೂರ್ವಕ್ಕೆ ತಿರುಗಿಕೊಂಡು ಸಾರೀದಿನಿಂದ ಕಿಸ್ಲೋತ್ ತಾಬೋರಿಗೆ ಹೋಗುತ್ತದೆ. ಅಲ್ಲಿಂದ ಅದು ದಾಬೆರತ್ ಮತ್ತು ಯಾಫೀಯಕ್ಕೆ ಹೋಗುತ್ತದೆ.


ಅವರ ಭೂಮಿಯ ಮೇರೆಯು ಚಾನನ್ನೀಮಿನ ಹತ್ತಿರ ಇರುವ ದೊಡ್ಡ ಮರದಿಂದ ಆರಂಭವಾಗುತ್ತದೆ. ಇದು ಹೇಲೆಫಿನ ಹತ್ತಿರ ಇದೆ. ಬಳಿಕ ಆ ಮೇರೆಯು ಅದಾಮೀನೆಕೆಬ್ ಮತ್ತು ಯಬ್ನೆಯೇಲ್ ಇವುಗಳ ಮೂಲಕ ಲಕ್ಕೂಮಿಗೆ ಹೋಗಿ, ಜೋರ್ಡನ್ ನದಿಯ ತೀರದಲ್ಲಿ ಮುಕ್ತಾಯಗೊಂಡಿತು.


ಈ ಸೀಮೆಯ ಒಳಗಡೆ ಕೆಲವು ಅತಿ ಭದ್ರವಾದ ಪಟ್ಟಣಗಳಿದ್ದವು. ಆ ಪಟ್ಟಣಗಳೆಂದರೆ: ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು