ಯೆಹೋಶುವ 19:35 - ಪರಿಶುದ್ದ ಬೈಬಲ್35 ಈ ಸೀಮೆಯ ಒಳಗಡೆ ಕೆಲವು ಅತಿ ಭದ್ರವಾದ ಪಟ್ಟಣಗಳಿದ್ದವು. ಆ ಪಟ್ಟಣಗಳೆಂದರೆ: ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಚಿದ್ದೀಮ್, ಚೇರ್, ಹಮ್ಮತ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಇದರಲ್ಲಿರುವ ಕೋಟೆಗಳುಳ್ಳ ಪಟ್ಟಣಗಳು ಯಾವುವೆಂದರೆ: ಜಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್, ಅಧ್ಯಾಯವನ್ನು ನೋಡಿ |
ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!
ದೆಬೋರಳು ತನ್ನನ್ನು ಬಂದು ಕಾಣಬೇಕೆಂದು ಬಾರಾಕನೆಂಬ ವ್ಯಕ್ತಿಗೆ ಹೇಳಿ ಕಳುಹಿಸಿದಳು. ಬಾರಾಕನು ಅಬೀನೋವಮನ ಮಗ. ಬಾರಾಕನು ನಫ್ತಾಲಿ ಪ್ರದೇಶದ ಕೆದೆಷ್ ಎಂಬ ಊರಲ್ಲಿ ವಾಸಮಾಡುತ್ತಿದ್ದನು. ದೆಬೋರಳು ಬಾರಾಕನಿಗೆ, “ಇಸ್ರೇಲಿನ ದೇವರಾದ ಯೆಹೋವನು, ‘ನೀನು ಹೋಗಿ ನಫ್ತಾಲಿ ಮತ್ತು ಜೆಬುಲೂನ್ ಕುಲಗಳವರ ಹತ್ತು ಸಾವಿರ ಜನರನ್ನು ಸೇರಿಸಿ ಅವರನ್ನು ತಾಬೋರ್ ಬೆಟ್ಟಕ್ಕೆ ಕರೆದುಕೊಂಡು ಹೋಗು.
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.