ಆಸನು ಯೆಹೂದದ ರಾಜನಾದ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ಇಸ್ರೇಲಿನ ರಾಜನಾದನು. ಜಿಮ್ರಿಯು ತಿರ್ಚದಲ್ಲಿ ಏಳು ದಿನ ಆಳಿದನು. ಆಗ ಸಂಭವಿಸಿದ್ದೇನೆಂದರೆ: ಇಸ್ರೇಲಿನ ಸೈನ್ಯವು ಫಿಲಿಷ್ಟಿಯರಿಗೆ ಸೇರಿದ್ದ ಗಿಬ್ಬೆತೋನಿನ ವಿರುದ್ಧ ಮುತ್ತಿಗೆ ಹಾಕಿದ್ದರು. ಅವರು ಯುದ್ಧಕ್ಕೆ ಸಿದ್ಧರಾಗಿದ್ದರು.
ಬಾಷನು ಅಹೀಯನ ಮಗ. ಅವನು ಇಸ್ಸಾಕಾರನ ಕುಲದವನಾಗಿದ್ದನು. ರಾಜನಾದ ನಾದಾಬನನ್ನು ಕೊಲ್ಲಲು ಬಾಷನು ಸಂಚು ಮಾಡಿದನು. ನಾದಾಬನು ಇಸ್ರೇಲರೊಡನೆ ಗಿಬ್ಬೆತೋನ್ ಪಟ್ಟಣದ ವಿರುದ್ಧ ಹೋರಾಟ ಮಾಡುತ್ತಿದ್ದ ಸಂದರ್ಭವಿದು. ಇದು ಫಿಲಿಷ್ಟಿಯ ಪಟ್ಟಣ. ಆ ಸ್ಥಳದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿದನು.