ಯೆಹೋಶುವ 19:51 - ಪರಿಶುದ್ದ ಬೈಬಲ್51 ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರೇಲಿನ ಕುಲಪ್ರಧಾನರೂ ಶೀಲೋವಿನಲ್ಲಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟುಹಾಕಿ ಹಂಚಿಕೊಟ್ಟ ಪ್ರಾಂತ್ಯಗಳೇ ಇವು. ಹೀಗೆ ದೇಶ ವಿಭಾಗ ಕಾರ್ಯವು ಪೂರ್ಣಗೊಂಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ, ಇಸ್ರಾಯೇಲ್ಯರ ಕುಲಮುಖ್ಯಸ್ಥರೂ ಸೇರಿ ಇಸ್ರಾಯೇಲ್ಯರಿಗೆ ಶೀಲೋವಿನಲ್ಲಿದ್ದ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟು ಹಾಕಿ ಹಂಚಿಕೊಟ್ಟ ಪ್ರಾಂತ್ಯಗಳು ಇವೇ. ಹೀಗೆ ದೇಶ ವಿಭಜನೆಯ ಕಾರ್ಯವು ಪೂರ್ಣಗೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಹೀಗೆ ಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವ ಮತ್ತು ಇಸ್ರಯೇಲ್ ಕುಲ ಮುಖ್ಯಸ್ಥರೂ ಶೀಲೋವಿನಲ್ಲಿದ್ದ ದೇವದರ್ಶನದ ಗುಡಾರದ ದ್ವಾರದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಚೀಟುಹಾಕಿ ಪ್ರಾಂತ್ಯಗಳನ್ನು ಹಂಚಿಕೊಟ್ಟರು; ನಾಡಿನ ವಿಭಜನಾಕಾರ್ಯ ಮುಗಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಮಹಾಯಾಜಕ ಎಲ್ಲಾಜಾರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲ್ ಕುಲಪ್ರಧಾನರೂ ಶೀಲೋವಿನಲ್ಲಿದ್ದ ದೇವದರ್ಶನದ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟುಹಾಕಿ ಹಂಚಿಕೊಟ್ಟ ಪ್ರಾಂತಗಳು ಇವೇ. ಹೀಗೆ ದೇಶ ವಿಭಾಗಕಾರ್ಯವು ಪೂರೈಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಯಾಜಕನಾದ ಎಲಿಯಾಜರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಚೀಟುಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಹಂಚಿಕೊಳ್ಳುವ ಕೆಲಸವನ್ನು ಪೂರೈಸಿದರು. ಅಧ್ಯಾಯವನ್ನು ನೋಡಿ |