Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:9 - ಪರಿಶುದ್ದ ಬೈಬಲ್‌

9 ಸಿಮೆಯೋನ್ಯರ ಭೂಮಿಯು ಯೆಹೂದದ ಭೂಮಿಯ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ಅವರ ಅವಶ್ಯಕತೆಗಿಂತ ಹೆಚ್ಚು ಭೂಮಿ ಇದ್ದಕಾರಣ ಸಿಮೆಯೋನ್ಯರು ಅದರಲ್ಲಿ ಒಂದು ಭಾಗವನ್ನು ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಿಮೆಯೋನ್ಯರ ಈ ಸ್ವತ್ತು ಯೆಹೂದ್ಯರ ಸ್ವತ್ತಿನ ಒಂದು ಭಾಗವಾಗಿತ್ತು. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೂ ಅದರಲ್ಲೇ ಪಾಲು ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಆಸ್ತಿ ಯೂದವಂಶದ ಆಸ್ತಿಯಲ್ಲಿ ಒಂದು ಭಾಗ. ಯೂದವಂಶದವರಿಗೆ ದೊರಕಿದ ಪ್ರದೇಶ ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೆ ಅದರಲ್ಲೆ ಪಾಲು ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ಸ್ವಾಸ್ತ್ಯವು ಯೆಹೂದ್ಯರ ಸ್ವಾಸ್ತ್ಯದ ಒಂದು ಭಾಗ. ಯೆಹೂದ್ಯರಿಗೆ ದೊರಕಿದ ಪ್ರದೇಶವು ಹೆಚ್ಚಾಗಿದ್ದದರಿಂದ ಸಿಮೆಯೋನ್ಯರಿಗೂ ಅದರಲ್ಲೇ ಪಾಲುಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಿಮೆಯೋನನ ಗೋತ್ರದವರಿಗೆ ಬಾಧ್ಯತೆ ಯೆಹೂದ ಗೋತ್ರದವರ ಭಾಗದಿಂದ ಸಿಕ್ಕಿತು. ಏಕೆಂದರೆ ಯೆಹೂದ ಗೋತ್ರದ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ, ಸಿಮೆಯೋನನ ಗೋತ್ರದವರು ಯೆಹೂದ ಗೋತ್ರದವರ ಎಲ್ಲೆಯ ಒಳಗಿಂದಲೇ ತಮ್ಮ ಪಾಲನ್ನು ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:9
7 ತಿಳಿವುಗಳ ಹೋಲಿಕೆ  

ಅವರು ತಮ್ಮ ಕುಟುಂಬದಲ್ಲಿದ್ದ ಪ್ರತಿಯೊಬ್ಬರ ಆಹಾರವನ್ನು ಒಟ್ಟಾಗಿ ಸೇರಿಸಿ ಅಳತೆಮಾಡಿದಾಗ ಅಲ್ಲಿ ಯಾವಾಗಲೂ ಪ್ರತಿಯೊಬ್ಬನಿಗೆ ಬೇಕಾದಷ್ಟು ಮಾತ್ರ ಆಹಾರವಿರುತ್ತಿತ್ತು. ಅದು ಹೆಚ್ಚಾಗಿಯೂ ಇರುತ್ತಿರಲಿಲ್ಲ; ಕಡಿಮೆಯಾಗಿಯೂ ಇರುತ್ತಿರಲಿಲ್ಲ. ಹೀಗೆ ಪ್ರತಿಯೊಬ್ಬನು ತನಗೆ ಮತ್ತು ತನ್ನ ಕುಟುಂಬಕ್ಕೆ ಬೇಕಾದಷ್ಟನ್ನು ಮಾತ್ರ ಕೂಡಿಸಿಕೊಂಡನು.


ಅವರ ಕೋಪವೇ ಅವರಿಗೆ ಶಾಪ. ಅದು ತುಂಬಾ ಶಕ್ತಿಶಾಲಿಯಾದದ್ದು. ಅವರು ಹುಚ್ಚರಾದಾಗ ತುಂಬಾ ಕ್ರೂರಿಗಳು. ಅವರು ಯಾಕೋಬನ ನಾಡಿನಲ್ಲಿ ತಮ್ಮದೇ ಆದ ನಾಡನ್ನು ಹೊಂದಿಕೊಳ್ಳುವುದಿಲ್ಲ. ಅವರು ಇಸ್ರೇಲಿನಲ್ಲೆಲ್ಲಾ ಹರಡಿಕೊಳ್ಳುವರು.”


ಬಾಲತ್‌ಬೇರನ (ನೆಗೇವದಲ್ಲಿದ್ದ ರಾಮ)ವರೆಗೆ ಹಬ್ಬಿದ ಎಲ್ಲ ಪಟ್ಟಣಗಳ ಸುತ್ತಲಿನ ಹೊಲಗದ್ದೆಗಳನ್ನು ಸಹ ಅವರು ಪಡೆದುಕೊಂಡರು. ಇದೇ ಸಿಮೆಯೋನ್ ಕುಲದವರಿಗೆ ದೊರೆತ ಭಾಗವಾಗಿತ್ತು. ಪ್ರತಿಯೊಂದು ಗೋತ್ರದವರು ತಮ್ಮ ಭೂಮಿಯನ್ನು ಪಡೆದುಕೊಂಡರು.


ತರುವಾಯ ತಮ್ಮ ಪಾಲಿನ ಭೂಮಿಯನ್ನು ಪಡೆದವರು ಜೆಬುಲೂನ್ ಕುಲದವರು. ಜೆಬುಲೂನ್ ಕುಲದ ಪ್ರತಿಯೊಂದು ಗೋತ್ರಕ್ಕೆ ವಾಗ್ದಾನದ ಪ್ರಕಾರ ಭೂಮಿಯನ್ನು ಕೊಡಲಾಯಿತು. ಜೆಬುಲೂನ್ಯರ ಪ್ರದೇಶವು ಸಾರೀದಿನವರೆಗೂ ವಿಸ್ತರಿಸಿತ್ತು.


ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು