Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:1 - ಪರಿಶುದ್ದ ಬೈಬಲ್‌

1 ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಗುಪ್ತವಾಗಿ ಯೆರಿಕೋ ಪಟ್ಟಣವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಕಳುಹಿಸಿದನು. ಅವರಿಗೆ “ನೀವು ಹೊರಟು ಹೋಗಿ ಕಾನಾನ್ ದೇಶದ ಯೆರಿಕೋ ಪಟ್ಟಣವನ್ನು ನೋಡಿರಿ” ಎಂದನು. ಆಗ ಅವರು ಹೊರಟು ಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನೂನನ ಮಗನಾದ ಯೆಹೋಶುವನು ಕಾನಾನ್ ನಾಡನ್ನೂ ಜೆರಿಕೋ ನಗರವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟುಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೂನನ ಮಗನಾದ ಯೆಹೋಶುವನು [ಕಾನಾನ್] ದೇಶವನ್ನೂ ಯೆರಿಕೋ ಪಟ್ಟಣವನ್ನೂ ನೋಡುವದಕ್ಕೋಸ್ಕರ ಶಿಟ್ಟೀವಿುನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟು ಹೋಗಿ ರಾಹಾಬಳೆಂಬ ಸೂಳೆಯ ಮನೆಯಲ್ಲಿ ಇಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಶಿಟ್ಟೀಮಿನಿಂದ ಗುಪ್ತವಾಗಿ ಕಳುಹಿಸಿ, ಅವರಿಗೆ, “ನೀವು ಹೋಗಿ ದೇಶವನ್ನೂ, ವಿಶೇಷವಾಗಿ ಯೆರಿಕೋ ಪಟ್ಟಣವನ್ನೂ ಸುತ್ತಿ ನೋಡಿರಿ,” ಎಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದು ಅಲ್ಲಿಯೇ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:1
23 ತಿಳಿವುಗಳ ಹೋಲಿಕೆ  

ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ.


ರಹಾಬಳು ಮತ್ತೊಬ್ಬ ಉದಾಹರಣೆಯಾಗಿದ್ದಾಳೆ. ಆಕೆ ಒಬ್ಬ ವೇಶ್ಯೆ. ಆದರೆ ಅವಳು ತನ್ನ ಕ್ರಿಯೆಗಳಿಂದಲೇ ನೀತಿವಂತಳಾದಳು. ಅವಳು ದೇವರ ಜನರಿಗೋಸ್ಕರ ಗೂಢಚಾರರನ್ನು ತನ್ನ ಮನೆಗೆ ಬರಮಾಡಿಕೊಂಡು, ಬೇರೊಂದು ರಸ್ತೆಯಲ್ಲಿ ತಪ್ಪಿಸಿಕೊಂಡು ಹೋಗಲು ಅವರಿಗೆ ಸಹಾಯ ಮಾಡಿದಳು.


ಸಲ್ಮೋನನು ಬೋವಜನ ತಂದೆ. (ಬೋವಜನ ತಾಯಿ ರಹಾಬಳು.) ಬೋವಜನು ಓಬೇದನ ತಂದೆ. (ಓಬೇದನ ತಾಯಿ ರೂತಳು.) ಓಬೇದನು ಇಷಯನ ತಂದೆ.


ಇಸ್ರೇಲರು ಅಖಾಸಿಯದ ಸಮೀಪದಲ್ಲಿ ಇಳಿದುಕೊಂಡಿದ್ದರು. ಅವರು ಅಲ್ಲಿದ್ದಾಗ ಮೋವಾಬ್ ಸ್ತ್ರೀಯರೊಡನೆ ಲೈಂಗಿಕ ಪಾಪಗಳನ್ನು ಮಾಡತೊಡಗಿದರು.


ಇದು ನಿಮಗೆ ಚೆನ್ನಾಗಿ ತಿಳಿದಿರಲಿ: ಲೈಂಗಿಕ ಪಾಪಮಾಡುವವರಿಗೆ, ದುಷ್ಕೃತ್ಯಗಳನ್ನು ಮಾಡುವವರಿಗೆ, ಸ್ವಾರ್ಥಿಗಳಿಗೆ, ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಸ್ಥಳವೇ ಇಲ್ಲ. ಸ್ವಾರ್ಥತೆಯು ವಿಗ್ರಹಾರಾಧನೆಗೆ ಸಮಾನವಾಗಿದೆ.


“ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.


ಮರುದಿನ, ಬೆಳಗಿನ ಜಾವದಲ್ಲಿ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಎದ್ದು ಆಕಾಶಿಯದಿಂದ ಹೊರಟು ಜೋರ್ಡನ್ ನದಿಯವರೆಗೆ ಬಂದರು. ಅವರು ಜೋರ್ಡನ್ ನದಿಯನ್ನು ದಾಟುವ ಮೊದಲು ಅಲ್ಲಿ ಪಾಳೆಯ ಮಾಡಿಕೊಂಡರು.


“ಕಾನಾನ್ ದೇಶದ ಬಗ್ಗೆ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಗೂಢಚಾರರನ್ನು ಕಳುಹಿಸು. ನಾನು ಇಸ್ರೇಲರಿಗೆ ಕೊಡುವ ದೇಶ ಇದಾಗಿದೆ. ಹನ್ನೆರಡು ಕುಲಗಳಿಂದ ಒಬ್ಬೊಬ್ಬ ನಾಯಕನನ್ನು ಕಳುಹಿಸು” ಎಂದು ಹೇಳಿದನು.


ಆ ಐದು ಜನ ಗೂಢಚಾರರು ಮನೆಯೊಳಗೆ ಪ್ರವೇಶ ಮಾಡಿದರು. ಯಾಜಕನು ಹೊರಗೆ ಬಾಗಿಲ ಬಳಿಯಲ್ಲಿ ಯುದ್ಧ ಸನ್ನದ್ಧರಾದ ಆರುನೂರು ಜನರ ಸಂಗಡ ನಿಂತಿದ್ದನು. ಆಗ ಆ ಐದು ಮಂದಿ ಮನೆಯೊಳಗೆ ಹೋಗಿ ಕೆತ್ತನೆಯ ವಿಗ್ರಹವನ್ನೂ ಏಫೋದನ್ನೂ ಬೆಳ್ಳಿವಿಗ್ರಹಗಳನ್ನೂ ಗೃಹದೇವತೆಗಳ ವಿಗ್ರಹಗಳನ್ನೂ ತೆಗೆದುಕೊಂಡರು. ಅವರನ್ನು ಕಂಡ ತರುಣ ಲೇವಿಯು, “ನೀವು ಏನು ಮಾಡುತ್ತಿದ್ದೀರಿ?” ಎಂದು ಕೇಳಿದನು.


ದಾನ್ ಕುಲದವರು ತಮಗೆ ಭೂಮಿಯನ್ನು ಹುಡುಕುವುದಕ್ಕಾಗಿ ಐದು ಮಂದಿ ಸೈನಿಕರನ್ನು ಕಳುಹಿಸಿದರು. ಅವರು ತಮ್ಮ ವಾಸಕ್ಕಾಗಿ ಒಳ್ಳೆಯ ಸ್ಥಳವನ್ನು ಹುಡುಕಲು ಹೋದರು. ಆ ಐದು ಮಂದಿ ಚೊರ್ಗಾ ಮತ್ತು ಎಷ್ಟಾವೋಲ್ ನಗರದವರಾಗಿದ್ದರು. ಅವರು ದಾನ್ ಕುಲದವರ ಮನೆತನಕ್ಕೆ ಸೇರಿದವರಾದ ಕಾರಣ “ಭೂಮಿಯನ್ನು ಹುಡುಕಲು” ಅವರನ್ನು ಕಳುಹಿಸಲಾಗಿತ್ತು. ಆ ಐದು ಜನರು ಎಫ್ರಾಯೀಮ್ ಬೆಟ್ಟದ ಸೀಮೆಗೆ ಬಂದು ಮೀಕನ ಮನೆಯಲ್ಲಿ ಇಳಿದುಕೊಂಡರು.


ಇಸ್ರೇಲರು ಇನ್ನೂ ಗಿಲ್ಗಾಲಿನಲ್ಲಿಯೇ ಇಳಿದುಕೊಂಡಿದ್ದಾಗ ಜೆರಿಕೊವಿನ ಮೈದಾನಗಳಲ್ಲಿ ಅವರು ಆ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಪಸ್ಕಹಬ್ಬವನ್ನು ಆಚರಿಸಿದರು.


ಅವರು ಮೋವಾಬ್ಯರ ಮೈದಾನದಲ್ಲಿ ಬೇತ್‌ಯೆಷೀಮೋತಿನಿಂದ ಅಬೇಲ್ ಶಿಟ್ಟೀಮಿನವರೆಗೂ ಜೋರ್ಡನ್ ನದಿಯ ತೀರದಲ್ಲಿ ಇಳಿದುಕೊಂಡರು.


ಹೆಲ್ಕಾತ್, ರೆಹೋಬ್‌ಗಳನ್ನು ಕೊಟ್ಟರು. ಒಟ್ಟಿನಲ್ಲಿ ಆಶೇರರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.


ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡಲು ಹೋಗಿದ್ದ ಐದು ಜನರು ತಮ್ಮ ಬಂಧುಗಳಿಗೆ, “ಇಲ್ಲಿಯ ಒಂದು ಮನೆಯಲ್ಲಿ ಏಫೋದ್ ಇದೆ; ಮನೆದೇವರುಗಳೂ ಇವೆ. ಕೆತ್ತಿ ಮಾಡಿರುವ ಒಂದು ವಿಗ್ರಹವೂ ಇದೆ. ಈಗ ನೀವು ಹೋಗಿ ಅವುಗಳನ್ನು ತೆಗೆದುಕೊಂಡು ಬನ್ನಿರಿ” ಎಂದು ಹೇಳಿದರು.


ಯಾರಾದರೂ ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದರೆ ಅಥವಾ ಯಾರಾದರೂ ನಿನ್ನನ್ನು ವಿರೋಧಿಸಿದರೆ ಅವನನ್ನು ಕೊಲ್ಲಲಾಗುವುದು. ನೀನು ಮಾತ್ರ ಸ್ಥಿರಚಿತ್ತನಾಗಿರು; ಧೈರ್ಯಶಾಲಿಯಾಗಿರು” ಎಂದು ಹೇಳಿದರು.


ಆಗ ಯಾರೋ ಒಬ್ಬರು ಜೆರಿಕೊ ನಗರದ ರಾಜನಿಗೆ, “ನಿನ್ನೆ ರಾತ್ರಿ ಇಸ್ರೇಲರ ಕಡೆಯ ಕೆಲವರು ನಮ್ಮ ದೇಶದ ದೌರ್ಬಲ್ಯಗಳನ್ನು ಕಂಡುಹಿಡಿಯುವುದಕ್ಕಾಗಿ ಬಂದಿದ್ದಾರೆ” ಎಂದು ಹೇಳಿದರು.


ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”


ಆಗ ಯೋಸೇಫನು ತನ್ನ ಅಣ್ಣಂದಿರ ಬಗ್ಗೆ ತಾನು ಕಂಡಿದ್ದ ಕನಸುಗಳ ಬಗ್ಗೆ ಜ್ಞಾಪಿಸಿಕೊಂಡು ಅವರಿಗೆ, “ನೀವು ಆಹಾರವನ್ನು ಕೊಂಡುಕೊಳ್ಳಲು ಬಂದಿಲ್ಲ; ನೀವು ಗೂಢಚಾರರು. ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದುಕೊಳ್ಳಲು ಬಂದಿರುವಿರಿ” ಎಂದು ಹೇಳಿದನು.


ಆದ್ದರಿಂದ ನಿಮ್ಮಲ್ಲೊಬ್ಬನು ಹಿಂತಿರುಗಿ ಹೋಗಿ ನಿಮ್ಮ ಚಿಕ್ಕ ತಮ್ಮನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು. ಅಲ್ಲಿಯವರೆಗೆ ಉಳಿದವರೆಲ್ಲರೂ ಇಲ್ಲಿ ಸೆರೆಮನೆಯಲ್ಲಿರಬೇಕು. ನೀವು ಹೇಳುತ್ತಿರುವುದು ಸತ್ಯವೋ ಸುಳ್ಳೋ ಆಗ ನನಗೆ ಗೊತ್ತಾಗುವುದು. ಆದರೆ ನೀವಂತೂ ಗೂಢಚಾರರೆಂದು ತಿಳಿದುಕೊಂಡಿದ್ದೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು