ಯೆಹೋಶುವ 2:10 - ಪರಿಶುದ್ದ ಬೈಬಲ್10 ಯೆಹೋವನು ನಿಮಗೆ ಸಹಾಯ ಮಾಡಿದ ರೀತಿಯ ಬಗ್ಗೆ ನಾವು ಕೇಳಿ ಭಯಗೊಂಡಿದ್ದೇವೆ. ನೀವು ಈಜಿಪ್ಟಿನಿಂದ ಹೊರಬಂದ ಮೇಲೆ ಆತನು ಕೆಂಪುಸಮುದ್ರದ ನೀರನ್ನು ಬತ್ತಿಸಿದ್ದನ್ನು ನಾವು ಕೇಳಿದ್ದೇವೆ. ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನೀವು ಹೇಗೆ ನಾಶಮಾಡಿದಿರೆಂಬುದನ್ನೂ ಕೇಳಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀವು ಐಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟಿದ್ದನ್ನೂ, ನೀವು ಯೊರ್ದನಿನ ಆಚೆಯಲ್ಲಿರುವ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನಾಶಮಾಡಿದ್ದನ್ನೂ ಕೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೀವು ಈಜಿಪ್ಟಿನಿಂದ ಹೊರಟುಬಂದ ಮೇಲೆ ಸರ್ವೇಶ್ವರ ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟರೆಂದು ಕೇಳಿದ್ದೇವೆ. ಅಲ್ಲದೆ ಜೋರ್ಡನ್ನಿನ ಆಚೆ ಇರುವ ಅಮೋರಿಯರ ಅರಸರಿಬ್ಬರನ್ನು ಅಂದರೆ, ಸೀಹೋನ್ ಮತ್ತು ಓಗ್ ಎಂಬವರನ್ನು ನೀವು ನಾಶಮಾಡಿದಿರೆಂದು ಕೇಳಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀವು ಐಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪು ಸಮುದ್ರವನ್ನು ಬತ್ತಿಸಿಬಿಟ್ಟದ್ದನ್ನೂ ನೀವು ಯೊರ್ದನಿನ ಆಚೆಯಲ್ಲಿರುವ ಸೀಹೋನ್ ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನಿರ್ಮೂಲ ಮಾಡಿದ್ದನ್ನೂ ಕೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀವು ಈಜಿಪ್ಟಿನಿಂದ ಹೊರಡುವಾಗ ಯೆಹೋವ ದೇವರು ಹೇಗೆ ನಿಮಗೋಸ್ಕರ ಕೆಂಪುಸಮುದ್ರದ ನೀರನ್ನು ಬತ್ತಿಹೋಗಮಾಡಿದ್ದನ್ನೂ, ನೀವು ಸಂಪೂರ್ಣ ನಿರ್ಮೂಲ ಮಾಡಿದ ಯೊರ್ದನ್ ನದಿ ಆಚೆಯಲ್ಲಿದ್ದ ಅಮೋರಿಯರ ಇಬ್ಬರು ಅರಸುಗಳಾದ ಸೀಹೋನನಿಗೂ, ಓಗನಿಗೂ ಮಾಡಿದ್ದನ್ನೂ ನಾವು ಕೇಳಿದ್ದೇವೆ. ಅಧ್ಯಾಯವನ್ನು ನೋಡಿ |