Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:12 - ಪರಿಶುದ್ದ ಬೈಬಲ್‌

12 ಈಗ ನೀವು ನನಗೊಂದು ಪ್ರಮಾಣ ಮಾಡಬೇಕು. ನಾನು ನಿಮಗೆ ದಯೆತೋರಿ ಸಹಾಯ ಮಾಡಿದೆ. ಆದ್ದರಿಂದ ನೀವು ಸಹ ನನ್ನ ಕುಟುಂಬದವರಿಗೆ ದಯೆತೋರುವಿರೆಂಬುದಕ್ಕೆ ಒಂದು ಗುರುತನ್ನು ಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆತೋರಿಸಿದಂತೆ ನೀವೂ ಸಹ ನನ್ನ ತಂದೆಯ ಮನೆಯವರಿಗೆ ದಯೆತೋರಿಸಬೇಕೆಂದು ಯೆಹೋವನ ಮೇಲೆ ವಾಗ್ದಾನ ನೀಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆ ತೋರಿದಂತೆ ನೀವೂ ನನ್ನ ತಂದೆಯ ಮನೆಯವರಿಗೆ ದಯೆ ತೋರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತು ಕೊಟ್ಟು ನಾನು ನಿಮಗೆ ದಯೆತೋರಿಸಿದಂತೆ ನೀವೂ ನನ್ನ ತಂದೆಯ ಮನೆಯವರಿಗೆ ದಯೆತೋರಿಸುವದಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಈಗ ನೀವು ನನಗೊಂದು ಪ್ರಮಾಣಮಾಡಬೇಕು. ನಾನು ನಿಮಗೆ ದಯೆ ತೋರಿಸಿದ್ದರಿಂದ ನೀವು ನನಗೂ ನನ್ನ ತಂದೆಯ ಮನೆಗೂ ದಯೆ ತೋರಿಸಬೇಕು. ನನಗೆ ನಿಶ್ಚಯವಾದ ಗುರುತನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:12
24 ತಿಳಿವುಗಳ ಹೋಲಿಕೆ  

ನಮ್ಮನ್ನು ಇಳಿಸುವುದಕ್ಕಾಗಿ ನೀನು ಉಪಯೋಗಿಸಿದ ಈ ಕೆಂಪು ಹಗ್ಗವನ್ನು ನಾವು ಈ ದೇಶಕ್ಕೆ ಹಿಂತಿರುಗಿ ಬರುವಾಗ ನೀನು ಕಿಟಕಿಗೆ ಕಟ್ಟಿರಬೇಕು. ನಿನ್ನ ತಂದೆತಾಯಿಗಳು, ನಿನ್ನ ಸಹೋದರ ಸಹೋದರಿಯರು ಮತ್ತು ನಿನ್ನ ಕುಟುಂಬ ವರ್ಗದವರು ನಿನ್ನ ಸಂಗಡ ಈ ಮನೆಯಲ್ಲಿರಬೇಕು.


ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.


ಯಾವನಾದರೂ ಸ್ವಂತ ಜನರನ್ನು ವಿಶೇಷವಾಗಿ ಸ್ವಂತ ಕುಟುಂಬದವರನ್ನು ಪರಿಪಾಲಿಸದೆ ಹೋದರೆ ಅವನು ಸತ್ಯಬೋಧನೆಯನ್ನು ತಿರಸ್ಕರಿಸುವವನಾಗಿದ್ದಾನೆ. ಅವನು ನಂಬದವನಿಗಿಂತ ತುಂಬಾ ಕೀಳಾದವನು.


ಅವರು ತಾವು ಕೊಟ್ಟ ಮಾತನ್ನು ನೆರವೇರಿಸದವರೂ ಬೇರೆಯವರಿಗೆ ಮಮತೆಯನ್ನಾಗಲಿ ಕರುಣೆಯನ್ನಾಗಲಿ ತೋರದವರೂ ಆಗಿದ್ದಾರೆ.


ಯೇಸು ಯಾರೆಂಬುದನ್ನು ಜನರಿಗೆ ತೋರಿಸಲು ಯೂದನು ಒಂದು ಉಪಾಯ ಮಾಡಿದನು. ಯೂದನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಯೇಸು. ಅವನನ್ನು ಸೆರೆಹಿಡಿದು ಎಚ್ಚರಿಕೆಯಿಂದ ಕಾಯುತ್ತಾ ಕರೆದುಕೊಂಡು ಹೋಗಿರಿ!” ಎಂದು ಹೇಳಿಕೊಟ್ಟಿದ್ದನು.


ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು.


ನನ್ನ ಜನರಿಗೆ ಭಯಂಕರವಾದ ಆ ಪರಿಸ್ಥತಿ ಉಂಟಾಗುವುದನ್ನಾಗಲಿ ನನ್ನ ಕುಟಂಬವು ಕೊಲ್ಲಲ್ಪಡುವುದನ್ನು ಕಣ್ಣಾರೆ ನೋಡುವುದಕ್ಕಾಗಲಿ ನನಗೆ ಸಾಧ್ಯವಿಲ್ಲದಿರುವುದರಿಂದ ರಾಜನಲ್ಲಿ ಬೇಡಿಕೊಳ್ಳುತ್ತಿದ್ದೇನೆ” ಎಂದಳು.


ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.


ದಾವೀದನು ಈಜಿಪ್ಟಿನವನನ್ನು, “ನಮ್ಮ ಕುಟುಂಬಗಳನ್ನು ಅಪಹರಿಸಿರುವ ಜನರ ಹತ್ತಿರಕ್ಕೆ ನಮ್ಮನ್ನು ಕರೆದುಕೊಂಡು ಹೋಗುವೆಯಾ?” ಎಂದು ಕೇಳಿದನು. ಈಜಿಪ್ಟಿನವನು, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಇಲ್ಲವೆ ನನ್ನ ಒಡೆಯನಿಗೆ ಮರಳಿ ಒಪ್ಪಿಸುವುದಿಲ್ಲವೆಂದು ದೇವರ ಮುಂದೆ ಪ್ರಮಾಣ ಮಾಡಿರಿ. ಆಗ ನಾನು ನಿಮ್ಮವರನ್ನು ಕಂಡು ಹಿಡಿಯಲು ಸಹಾಯ ಮಾಡುತ್ತೇನೆ” ಎಂದು ಹೇಳಿದನು.


ಯೆಹೋಶುವನು ಅವರೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಒಪ್ಪಿಕೊಂಡನು. ಅವರು ಜೀವಸಹಿತ ಇರಲು ಅವಕಾಶ ಮಾಡಿಕೊಟ್ಟನು. ಯೆಹೋಶುವನ ಈ ಒಪ್ಪಂದಕ್ಕೆ ಇಸ್ರೇಲಿನ ಜನನಾಯಕರು ಒಪ್ಪಿಕೊಂಡರು.


ನನ್ನ ಕುಟುಂಬದವರನ್ನು ಅಂದರೆ ನನ್ನ ತಂದೆತಾಯಿಗಳನ್ನು, ಸಹೋದರ ಸಹೋದರಿಯರನ್ನು ಮತ್ತು ಅವರೆಲ್ಲರ ಕುಟುಂಬ ವರ್ಗದವರನ್ನು ಜೀವಂತವಾಗಿ ಉಳಿಸುವುದಾಗಿ ಪ್ರಮಾಣ ಮಾಡಿರಿ” ಎಂದು ಬೇಡಿಕೊಂಡಳು.


ಆದರೆ ನಿಮ್ಮ ಮನೆಗಳಿಗೆ ಹಚ್ಚಿರುವ ರಕ್ತವು ಒಂದು ವಿಶೇಷ ಸೂಚನೆಯಾಗಿದೆ. ನಾನು ಆ ರಕ್ತವನ್ನು ನೋಡಿದಾಗ ನಿಮ್ಮ ಮನೆಯನ್ನು ದಾಟಿಹೋಗುವೆನು. ಈಜಿಪ್ಟಿನ ಜನರಿಗೆ ಕೇಡುಗಳಾಗುವಂತೆ ಮಾಡುವೆನು. ಆದರೆ ಆ ವ್ಯಾಧಿಗಳು ನಿಮಗೆ ಹಾನಿ ಮಾಡುವುದಿಲ್ಲ.


ಆಗ ಆ ಸೇವಕನು ತನ್ನ ಒಡೆಯನಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಿದನು.


ಕಾನಾನ್ ದೇಶದ ಕನ್ನಿಕೆಯನ್ನು ನನ್ನ ಮಗನು ಮದುವೆಯಾಗದಂತೆ ನೀನು ನೋಡಿಕೊಳ್ಳುವುದಾಗಿಯೂ


ಆದ್ದರಿಂದ ನೀನು ನನ್ನೊಡನೆ ಮತ್ತು ನನ್ನ ಮಕ್ಕಳೊಡನೆ ನ್ಯಾಯವಾಗಿ ನಡೆದುಕೊಳ್ಳುವುದಾಗಿ ದೇವರ ಮೇಲೆ ಪ್ರಮಾಣಮಾಡು. ನನಗೂ ಮತ್ತು ನೀನು ವಾಸಿಸುತ್ತಿರುವ ಈ ನಾಡಿಗೂ ದಯೆತೋರುವುದಾಗಿ ನೀನು ಪ್ರಮಾಣಮಾಡು. ನಾನು ನಿನಗೆ ದಯೆತೋರಿದಂತೆ ನೀನೂ ನನಗೆ ದಯೆತೋರುವುದಾಗಿ ಪ್ರಮಾಣಮಾಡು” ಎಂದು ಹೇಳಿದನು.


ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನ್ನ ವಿಷಯವಾಗಿ ಫರೋಹನಿಗೆ ತಿಳಿಸಿ ನನಗೆ ಸೆರೆಮನೆಯಿಂದ ಬಿಡುಗಡೆಯಾಗುವಂತೆ ಮಾಡು.


ಈ ಮನೆಯಲ್ಲಿರುವ ಪ್ರತಿಯೊಬ್ಬರನ್ನು ನಾವು ಕಾಪಾಡುತ್ತೇವೆ. ನಿನ್ನ ಮನೆಯಲ್ಲಿ ಯಾರಿಗಾದರೂ ಪೆಟ್ಟಾದರೆ ಅದಕ್ಕೆ ನಾವು ಹೊಣೆಗಾರರಾಗುವೆವು. ಆದರೆ ಯಾರಾದರೂ ನಿನ್ನ ಮನೆಯಿಂದ ಹೊರಗೆ ಹೋದಾಗ ಕೊಲ್ಲಲ್ಪಟ್ಟರೆ ಅದಕ್ಕೆ ನಾವು ಹೊಣೆಗಾರರಲ್ಲ; ಅದಕ್ಕೆ ಅವರೇ ಹೊಣೆಗಾರರು.


ಯೆಹೋಶುವನು ಆ ಇಬ್ಬರು ಗೂಢಚಾರರಿಗೆ, “ನೀವು ಪ್ರಮಾಣ ಮಾಡಿರುವುದರಿಂದ ಆ ವೇಶ್ಯೆಯ ಮನೆಗೆ ಹೋಗಿ ಅವಳನ್ನು ಹೊರಗೆ ಕರೆದುಕೊಂಡು ಬನ್ನಿ. ಅವಳ ಸಂಗಡ ಇರುವ ಎಲ್ಲಾ ಜನರನ್ನೂ ಕರೆದುಕೊಂಡು ಬನ್ನಿ” ಎಂದು ಹೇಳಿದನು.


ಆ ಗೂಢಚಾರರು ಬೇತೇಲ್ ನಗರದಲ್ಲಿ ಸಂಚರಿಸುತ್ತಿದ್ದಾಗ ಒಬ್ಬನು ನಗರದಿಂದ ಹೊರಬರುವುದನ್ನು ನೋಡಿದರು. ಗೂಢಚಾರರು ಅವನಿಗೆ, “ನಮಗೆ ಈ ನಗರದೊಳಗೆ ಹೋಗಲು ಮಾಡಿರುವ ಗುಪ್ತಮಾರ್ಗವನ್ನು ತೋರಿಸು. ನಾವು ಈ ಪಟ್ಟಣದ ಮೇಲೆ ಧಾಳಿ ಮಾಡಬೇಕೆಂದಿದ್ದೇವೆ. ನೀನು ನಮಗೆ ಸಹಾಯ ಮಾಡಿದರೆ ನಿನಗೆ ದಯೆತೋರುವೆವು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು