ಯೆಹೋಶುವ 2:13 - ಪರಿಶುದ್ದ ಬೈಬಲ್13 ನನ್ನ ಕುಟುಂಬದವರನ್ನು ಅಂದರೆ ನನ್ನ ತಂದೆತಾಯಿಗಳನ್ನು, ಸಹೋದರ ಸಹೋದರಿಯರನ್ನು ಮತ್ತು ಅವರೆಲ್ಲರ ಕುಟುಂಬ ವರ್ಗದವರನ್ನು ಜೀವಂತವಾಗಿ ಉಳಿಸುವುದಾಗಿ ಪ್ರಮಾಣ ಮಾಡಿರಿ” ಎಂದು ಬೇಡಿಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನ ತಂದೆ ತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗಿರುವುದೆಲ್ಲವನ್ನು ನಾಶಮಾಡದೆ ಉಳಿಸುವುದಾಗಿ ಯೆಹೋವನ ಹೆಸರಿನಲ್ಲಿ ವಾಗ್ದಾನ ಮಾಡಬೇಕು ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನನ್ನ ತಂದೆ ತಾಯಿಗಳನ್ನೂ ಸಹೋದರ ಸಹೋದರಿಯರನ್ನೂ ಅವರಿಗಿರುವುದೆಲ್ಲವನ್ನೂ ನಾಶಮಾಡದೆ ಉಳಿಸುವುದಾಗಿ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದಳು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನ ತಂದೆತಾಯಿಗಳನ್ನೂ ಸಹೋದರ ಸಹೋದರಿಯರನ್ನೂ ಅವರಿಗಿರುವದೆಲ್ಲವನ್ನೂ ನಾಶಮಾಡದೆ ಉಳಿಸುವದಾಗಿಯೂ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಬೇಕೆಂದು ಬೇಡಿಕೊಳ್ಳುತ್ತೇನೆ ಎಂಬದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನ್ನ ತಂದೆಯನ್ನೂ ನನ್ನ ತಾಯಿಯನ್ನೂ, ನನ್ನ ಸಹೋದರರನ್ನೂ ನನ್ನ ಸಹೋದರಿಯರನ್ನೂ, ಅವರಲ್ಲಿರುವ ಎಲ್ಲರನ್ನೂ ಜೀವದಿಂದಿರಿಸಿ, ನಮ್ಮ ಪ್ರಾಣವನ್ನು ಸಾವಿನಿಂದ ತಪ್ಪಿಸಬೇಕು ಎಂದು ಯೆಹೋವ ದೇವರ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದಳು. ಅಧ್ಯಾಯವನ್ನು ನೋಡಿ |