ಯೆಹೋಶುವ 2:16 - ಪರಿಶುದ್ದ ಬೈಬಲ್16 ಆಕೆ ಅವರಿಗೆ, “ನೀವು ಪಶ್ಚಿಮದಿಕ್ಕಿನ ಕಡೆಗೆ ಹೋಗಿ ಬೆಟ್ಟಗಳಲ್ಲಿ ಅಡಗಿಕೊಳ್ಳಿರಿ; ಆಗ ರಾಜಭಟರು ನಿಮ್ಮನ್ನು ಕಂಡುಹಿಡಿಯಲಾರರು; ಅಲ್ಲಿ ಮೂರು ದಿನಗಳವರೆಗೆ ಅಡಗಿಕೊಂಡಿದ್ದು ರಾಜಭಟರು ಹಿಂದಿರುಗಿದ ಮೇಲೆ ನೀವು ನಿಮ್ಮ ಸ್ಥಳಕ್ಕೆ ಹೋಗಬಹುದು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ನಿಮ್ಮನ್ನು ಹಿಂದಟ್ಟುವವರಿಗೆ ನೀವು ಸಿಕ್ಕದಂತೆ ಆ ಬೆಟ್ಟಕ್ಕೆ ಓಡಿ ಹೋಗಿ ಅಲ್ಲಿ ಮೂರು ದಿನ ಅಡಗಿಕೊಂಡಿದ್ದು, ತರುವಾಯ ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿರಿ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಲ್ಲದೆ ಅವರಿಗೆ, “ನಿಮ್ಮನ್ನು ಹಿಂದಟ್ಟುವವರಿಗೆ ನೀವು ಸಿಕ್ಕದಂತೆ ಆ ಬೆಟ್ಟಕ್ಕೆ ಓಡಿಹೋಗಿ, ಮೂರು ದಿನ ಅವಿತುಕೊಂಡಿರಿ. ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿ,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ಪರ್ವತಕ್ಕೆ ಓಡಿಹೋಗಿ ಅಲ್ಲಿ ಮೂರು ದಿವಸ ಅಡಗಿಕೊಂಡಿದ್ದು ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿರಿ ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಕೆಯು ಅವರಿಗೆ, “ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ, ಅವರು ತಿರುಗಿ ಬರುವವರೆಗೂ ಅಲ್ಲಿ ಮೂರು ದಿವಸ ಅಡಗಿಕೊಂಡಿದ್ದು, ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ,” ಎಂದಳು. ಅಧ್ಯಾಯವನ್ನು ನೋಡಿ |