Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:17 - ಪರಿಶುದ್ದ ಬೈಬಲ್‌

17 ಅವರು ಅವಳಿಗೆ, “ನಾವು ನಿನಗೊಂದು ಪ್ರಮಾಣ ಮಾಡಿದ್ದೇವೆ; ಆದರೆ ನೀನು ಒಂದು ಕೆಲಸ ಮಾಡಬೇಕು. ಇಲ್ಲವಾದರೆ ನಾವು ನಮ್ಮ ಪ್ರಮಾಣಕ್ಕೆ ಹೊಣೆಗಾರರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಅವರಲ್ಲಿ ಒಬ್ಬನು ಆಕೆಗೆ “ನಾವು ಹೇಳುವ ಮಾತಿನಂತೆ ನೀನು ನಡೆಯದಿದ್ದರೆ, ನೀನು ನಮ್ಮಿಂದ ಮಾಡಿಸಿದ ವಾಗ್ದಾನಕ್ಕೆ ನಾವು ಹೊಣೆಗಾರರಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ಅವರು ಆಕೆಗೆ, “ನೀನು ನಮ್ಮಿಂದ ಮಾಡಿಸಿದ ಪ್ರಮಾಣದಂತೆ ನಡೆದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಅವರು - [ನಾವು ಹೇಳುವ ಮಾತಿನಂತೆ ನೀನು ನಡೆಯದಿದ್ದರೆ] ನೀನು ನಮ್ಮಿಂದ ಮಾಡಿಸಿದ ಪ್ರಮಾಣದಿಂದ ಬಿಡುಗಡೆಯಾಗಿರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಆ ಮನುಷ್ಯರು ಆಕೆಗೆ, “ನೀನು ನಮ್ಮಿಂದ ಮಾಡಿಸಿದ ಈ ನಿನ್ನ ಪ್ರಮಾಣದಿಂದ ಬಿಡುಗಡೆಯಾಗಿರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:17
8 ತಿಳಿವುಗಳ ಹೋಲಿಕೆ  

ಆದರೆ ಯೋನಾತಾನನ ಮಗನಾದ ಮೆಫೀಬೋಶೆತನನ್ನು ರಾಜನು ರಕ್ಷಿಸಿದನು. (ಯೋನಾತಾನನು ಸೌಲನ ಮಗ.) ದಾವೀದನು ಯೆಹೋವನ ಹೆಸರಿನಲ್ಲಿ ಯೋನಾತಾನನಿಗೆ ವಾಗ್ದಾನ ಮಾಡಿದ್ದನು. ಆದ್ದರಿಂದ ಮೆಫೀಬೋಶೆತನಿಗೆ ಅವರಿಂದ ತೊಂದರೆಯಾಗದಂತೆ ನೋಡಿಕೊಂಡನು.


“ಯಾವನಾದರೂ ಯೆಹೋವನಿಗೆ ಇಂಥದ್ದನ್ನು ಕೊಡುತ್ತೇನೆಂದು ಹರಕೆ ಮಾಡಿದರೆ ಅಥವಾ ತಾನು ಇಂಥದ್ದನ್ನು ಮಾಡುವುದಿಲ್ಲ ಎಂದು ಆಣೆಯಿಟ್ಟುಕೊಂಡರೆ, ಅವನು ತನ್ನ ಮಾತನ್ನು ಮೀರದೆ ತಾನು ಹೇಳಿದಂತೆಯೇ ನೆರವೇರಿಸಬೇಕು.


ನಾನು ನಿನಗೆ ಈ ಪ್ರಮಾಣವನ್ನು ಮಾಡಿದ್ದೇವೆ. ಆದರೆ ಇದನ್ನು ನೀನು ಯಾರಿಗೂ ಹೇಳಕೂಡದು; ಒಂದುವೇಳೆ ಹೇಳಿದರೆ, ನಾವು ಈ ಪ್ರಮಾಣದಿಂದ ಮುಕ್ತರಾಗುತ್ತೇವೆ” ಎಂದು ಹೇಳಿದರು.


“ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನಮ್ಮನ್ನು ಇಳಿಸುವುದಕ್ಕಾಗಿ ನೀನು ಉಪಯೋಗಿಸಿದ ಈ ಕೆಂಪು ಹಗ್ಗವನ್ನು ನಾವು ಈ ದೇಶಕ್ಕೆ ಹಿಂತಿರುಗಿ ಬರುವಾಗ ನೀನು ಕಿಟಕಿಗೆ ಕಟ್ಟಿರಬೇಕು. ನಿನ್ನ ತಂದೆತಾಯಿಗಳು, ನಿನ್ನ ಸಹೋದರ ಸಹೋದರಿಯರು ಮತ್ತು ನಿನ್ನ ಕುಟುಂಬ ವರ್ಗದವರು ನಿನ್ನ ಸಂಗಡ ಈ ಮನೆಯಲ್ಲಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು