Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:18 - ಪರಿಶುದ್ದ ಬೈಬಲ್‌

18 ನಮ್ಮನ್ನು ಇಳಿಸುವುದಕ್ಕಾಗಿ ನೀನು ಉಪಯೋಗಿಸಿದ ಈ ಕೆಂಪು ಹಗ್ಗವನ್ನು ನಾವು ಈ ದೇಶಕ್ಕೆ ಹಿಂತಿರುಗಿ ಬರುವಾಗ ನೀನು ಕಿಟಕಿಗೆ ಕಟ್ಟಿರಬೇಕು. ನಿನ್ನ ತಂದೆತಾಯಿಗಳು, ನಿನ್ನ ಸಹೋದರ ಸಹೋದರಿಯರು ಮತ್ತು ನಿನ್ನ ಕುಟುಂಬ ವರ್ಗದವರು ನಿನ್ನ ಸಂಗಡ ಈ ಮನೆಯಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾವು ಈ ದೇಶದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಿಕಿಗೆ ಈ ಕೆಂಪು ದಾರವನ್ನು ಕಟ್ಟಬೇಕು ಮತ್ತು ನಿನ್ನ ತಂದೆತಾಯಿಗಳನ್ನೂ ಅಣ್ಣತಮ್ಮಂದಿರನ್ನೂ ಎಲ್ಲಾ ಬಂಧುಬಳಗದವರನ್ನೂ ನಿನ್ನ ಮನೆಯಲ್ಲಿ ಸೇರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಾವು ಈ ನಾಡನ್ನು ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಕಿಗೆ ಈ ಕೆಂಪುದಾರವನ್ನು ಕಟ್ಟಬೇಕು ಮತ್ತು ನಿನ್ನ ತಂದೆತಾಯಿಗಳನ್ನು, ಅಣ್ಣತಮ್ಮಂದಿರನ್ನು, ಎಲ್ಲಾ ಬಂಧುಬಳಗದವರನ್ನು ನಿನ್ನ ಮನೆಯಲ್ಲೇ ಸೇರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಗೋ, ನಾವು ಈ ದೇಶದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಕಿಗೆ ಈ ಕೆಂಪು ದಾರವನ್ನು ಕಟ್ಟಬೇಕು. ಮತ್ತು ನಿನ್ನ ತಂದೆತಾಯಿಗಳನ್ನೂ ಅಣ್ಣ ತಮ್ಮಂದಿರನ್ನೂ ಎಲ್ಲಾ ಬಳಗದವರನ್ನೂ ನಿನ್ನ ಮನೆಯಲ್ಲಿ ಸೇರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇಗೋ, ನಾವು ಈ ದೇಶದಲ್ಲಿ ಪ್ರವೇಶಿಸುವಾಗ, ನೀನು ನಮ್ಮನ್ನು ಇಳಿಸಿದ ಕಿಟಿಕಿಗೆ ಈ ಕಡುಗೆಂಪು ಹಗ್ಗವನ್ನು ಕಟ್ಟಿ, ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ, ನಿನ್ನ ಸಹೋದರರನ್ನೂ, ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:18
19 ತಿಳಿವುಗಳ ಹೋಲಿಕೆ  

ಆ ಇಬ್ಬರು, ರಾಹಾಬಳ ಮನೆಗೆ ಹೋಗಿ ಅವಳನ್ನು ಹೊರಗೆ ಕರೆದುಕೊಂಡು ಬಂದರು. ಅವಳ ತಂದೆ, ತಾಯಿ, ಸಹೋದರರು ಮತ್ತು ಅವಳ ಎಲ್ಲ ಕುಟುಂಬದವರನ್ನು ಮತ್ತು ಅವಳ ಸಂಗಡ ಅಲ್ಲಿ ಇದ್ದ ಬೇರೆ ಎಲ್ಲ ಜನರನ್ನು ಸಹ ಅವರು ಹೊರಗೆ ಕರೆದುಕೊಂಡು ಬಂದರು. ಅವರೆಲ್ಲರನ್ನು ಇಸ್ರೇಲಿನ ಜನರ ಪಾಳೆಯದ ಹೊರಗಡೆ ಒಂದು ಸುರಕ್ಷಿತವಾದ ಸ್ಥಳದಲ್ಲಿ ಇರಿಸಿದರು.


ಅದಕ್ಕೆ ಅವಳು, “ಹಾಗೇ ಆಗಲಿ” ಎಂದು ಹೇಳಿ ಅವರನ್ನು ಕಳುಹಿಸಿಕೊಟ್ಟಳು. ಆ ಜನರು ಅವಳ ಮನೆಯಿಂದ ಹೊರಟರು. ಆಗ ಆ ಹೆಂಗಸು ಆ ಕೆಂಪು ಹಗ್ಗವನ್ನು ಕಿಟಿಕಿಗೆ ಕಟ್ಟಿದಳು.


ಮೊದಲನೆಯದಾಗಿ, ಮೋಶೆಯು ಧರ್ಮಶಾಸ್ತ್ರದ ಪ್ರತಿಯೊಂದು ಆಜ್ಞೆಯನ್ನೂ ಜನರಿಗೆಲ್ಲ ತಿಳಿಸಿದನು. ನಂತರ ಅವನು ಕರುಗಳ ರಕ್ತವನ್ನು ತೆಗೆದುಕೊಂಡು ಅದನ್ನು ನೀರಿನೊಂದಿಗೆ ಬೆರೆಸಿದನು. ಬಳಿಕ ನೀರು ಮತ್ತು ರಕ್ತವನ್ನು ಧರ್ಮಶಾಸ್ತ್ರದ ಮೇಲೆ ಮತ್ತು ಜನರೆಲ್ಲರ ಮೇಲೆ ಚಿಮುಕಿಸಲು ಕೆಂಪು ಉಣ್ಣೆಯನ್ನೂ ಹಿಸ್ಸೋಪ್ ಗಿಡದ ಕವಲನ್ನು ಉಪಯೋಗಿಸಿದನು.


ಆದ್ದರಿಂದ, ನಾನು ತಕ್ಷಣ ನಿನಗೆ ಕರೆಕಳುಹಿಸಿದೆ. ನೀನು ಇಲ್ಲಿಗೆ ಬಂದದ್ದು ಉಪಕಾರವಾಯಿತು. ನಮಗೆ ತಿಳಿಸಬೇಕೆಂದು ಪ್ರಭುವು ನಿನಗೆ ಆಜ್ಞಾಪಿಸಿರುವ ಪ್ರತಿಯೊಂದನ್ನು ಕೇಳಲು ನಾವೆಲ್ಲರು ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ” ಎಂದು ಹೇಳಿದನು.


ಆ ವ್ಯಕ್ತಿಯು ಆರೋಗ್ಯವಂತನಾಗಿದ್ದರೆ, ಆಗ ಯಾಜಕನು ಈ ಸಂಗತಿಗಳನ್ನು ಮಾಡುವುದಕ್ಕೆ ಅವನಿಗೆ ಹೇಳುವನು. ಆ ವ್ಯಕ್ತಿಯು ಎರಡು ಜೀವಂತವಾದ ಶುದ್ಧ ಪಕ್ಷಿಗಳನ್ನು ತರಬೇಕು. ಅಲ್ಲದೆ, ಅವನು ದೇವದಾರುಮರದ ತುಂಡನ್ನು, ಕೆಂಪು ಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕು.


ಪ್ರಭುವು ಒನೇಸಿಫ್ರೋರನ ಕುಟುಂಬಕ್ಕೆ ಕರುಣೆಯನ್ನು ತೋರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅವನು ಅನೇಕ ಸಂದರ್ಭಗಳಲ್ಲಿ ನನಗೆ ಸಹಾಯ ಮಾಡಿದ್ದಾನೆ. ನಾನು ಸೆರೆಮನೆಯಲ್ಲಿದ್ದರೂ ಅವನು ನಾಚಿಕೆಪಟ್ಟುಕೊಳ್ಳಲಿಲ್ಲ.


ಅವನು ನಿಮ್ಮೊಂದಿಗೆ ಮಾತಾಡುವನು. ಅವನು ಹೇಳುವ ಸಂಗತಿಗಳು ನಿನ್ನನ್ನೂ ನಿನ್ನ ಕುಟಂಬದವರನ್ನೂ ರಕ್ಷಿಸುತ್ತವೆ’ ಎಂದು ಹೇಳಿದನು.


ಪೇತ್ರನು ಕೊರ್ನೇಲಿಯನೊಂದಿಗೆ ಮಾತನ್ನು ಮುಂದುವರಿಸಿದನು. ಬಳಿಕ ಪೇತ್ರನು ಒಳಗೆ ಹೋದಾಗ, ಅಲ್ಲಿ ನೆರೆದು ಬಂದಿದ್ದ ಜನರ ದೊಡ್ಡ ಗುಂಪನ್ನು ಕಂಡನು.


ಯೇಸು, “ಈ ಮನುಷ್ಯನು ಒಳ್ಳೆಯವನೇ ಸರಿ. ಇವನು ನಿಜವಾಗಿಯೂ ಅಬ್ರಹಾಮನ ಕುಟುಂಬಕ್ಕೆ ಸೇರಿದ್ದಾನೆ. ಇಂದೇ ಈ ಮನೆಗೆ ರಕ್ಷಣೆ ಆಯಿತು.


ಯಾಜಕನು ದೇವದಾರು ಮರದ ಕಟ್ಟಿಗೆಯನ್ನೂ ಹಿಸ್ಸೋಪ್ ಗಿಡದ ಎಳೆಕೊಂಬೆಯನ್ನೂ ಕೆಂಪು ದಾರವನ್ನೂ ತೆಗೆದುಕೊಂಡು, ಉರಿಯುತ್ತಿರುವ ಆ ಹಸುವಿನ ಮೇಲೆ ಎಸೆಯಬೇಕು.


ಬಳಿಕ ಅವುಗಳ ಮೇಲೆ ಕೆಂಪುಬಟ್ಟೆಯನ್ನು ಹಾಸಿ, ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಅದಕ್ಕೆ ಹೊದಿಸಬೇಕು. ಬಳಿಕ ಹೊರುವ ಕೋಲುಗಳನ್ನು ಮೇಜಿನ ಬಳೆಗಳಲ್ಲಿ ಸೇರಿಸಬೇಕು.


ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.


ಆಮೇಲೆ ಯೆಹೋವನು ನೋಹನಿಗೆ, “ಈ ಕಾಲದವರಲ್ಲಿ ನೀನೊಬ್ಬನೇ ನೀತಿವಂತನಾಗಿರುವೆ. ಆದ್ದರಿಂದ ನಿನ್ನ ಕುಟುಂಬದವರೆಲ್ಲರನ್ನು ಕರೆದುಕೊಂಡು ನಾವೆಯೊಳಗೆ ಹೋಗು.


ನನ್ನ ಜನರಿಗೆ ಭಯಂಕರವಾದ ಆ ಪರಿಸ್ಥತಿ ಉಂಟಾಗುವುದನ್ನಾಗಲಿ ನನ್ನ ಕುಟಂಬವು ಕೊಲ್ಲಲ್ಪಡುವುದನ್ನು ಕಣ್ಣಾರೆ ನೋಡುವುದಕ್ಕಾಗಲಿ ನನಗೆ ಸಾಧ್ಯವಿಲ್ಲದಿರುವುದರಿಂದ ರಾಜನಲ್ಲಿ ಬೇಡಿಕೊಳ್ಳುತ್ತಿದ್ದೇನೆ” ಎಂದಳು.


ನಿನ್ನ ತುಟಿಗಳು ರೇಷ್ಮೆಯ ಕೆಂಪುದಾರದಂತಿವೆ. ನಿನ್ನ ಬಾಯಿ ಸುಂದರವಾಗಿದೆ. ಮುಸುಕಿನೊಳಗಿರುವ ನಿನ್ನ ಕೆನ್ನೆಗಳು ದಾಳಿಂಬೆ ಹಣ್ಣಿನ ಎರಡು ಹೋಳುಗಳಂತಿವೆ.


ಆದರೆ ನಿಮ್ಮ ಮನೆಗಳಿಗೆ ಹಚ್ಚಿರುವ ರಕ್ತವು ಒಂದು ವಿಶೇಷ ಸೂಚನೆಯಾಗಿದೆ. ನಾನು ಆ ರಕ್ತವನ್ನು ನೋಡಿದಾಗ ನಿಮ್ಮ ಮನೆಯನ್ನು ದಾಟಿಹೋಗುವೆನು. ಈಜಿಪ್ಟಿನ ಜನರಿಗೆ ಕೇಡುಗಳಾಗುವಂತೆ ಮಾಡುವೆನು. ಆದರೆ ಆ ವ್ಯಾಧಿಗಳು ನಿಮಗೆ ಹಾನಿ ಮಾಡುವುದಿಲ್ಲ.


ಯೆಹೋಶುವನು ವೇಶ್ಯೆಯಾದ ರಾಹಾಬಳನ್ನೂ ಅವಳ ಕುಟುಂಬವನ್ನೂ ಅವಳ ಸಂಗಡ ಇದ್ದ ಬೇರೆ ಜನರನ್ನೂ ಉಳಿಸಿದನು. ಯೆಹೋಶುವನು ಜೆರಿಕೊವಿಗೆ ಕಳಿಸಿಕೊಟ್ಟ ಗೂಢಚಾರರಿಗೆ ರಾಹಾಬಳು ಸಹಾಯ ಮಾಡಿದ್ದಕ್ಕಾಗಿ ಯೆಹೋಶುವನು ಅವರೆಲ್ಲರನ್ನು ಉಳಿಸಿದನು. ರಾಹಾಬಳು ಇಂದಿಗೂ ಸಹ ಇಸ್ರೇಲಿನ ಜನರೊಂದಿಗೆ ವಾಸವಾಗಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು