Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:19 - ಪರಿಶುದ್ದ ಬೈಬಲ್‌

19 ಈ ಮನೆಯಲ್ಲಿರುವ ಪ್ರತಿಯೊಬ್ಬರನ್ನು ನಾವು ಕಾಪಾಡುತ್ತೇವೆ. ನಿನ್ನ ಮನೆಯಲ್ಲಿ ಯಾರಿಗಾದರೂ ಪೆಟ್ಟಾದರೆ ಅದಕ್ಕೆ ನಾವು ಹೊಣೆಗಾರರಾಗುವೆವು. ಆದರೆ ಯಾರಾದರೂ ನಿನ್ನ ಮನೆಯಿಂದ ಹೊರಗೆ ಹೋದಾಗ ಕೊಲ್ಲಲ್ಪಟ್ಟರೆ ಅದಕ್ಕೆ ನಾವು ಹೊಣೆಗಾರರಲ್ಲ; ಅದಕ್ಕೆ ಅವರೇ ಹೊಣೆಗಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು; ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈ ಮಾಡಿದ್ದಾದರೆ ಆ ರಕ್ತಾಪರಾಧವು ನಮ್ಮ ತಲೆಯ ಮೇಲೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು ಆಗುವರು. ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈಮಾಡಿದ್ದಾದರೆ ಆ ರಕ್ತಾಪರಾಧ ನಮ್ಮ ತಲೆಯ ಮೇಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ರಕ್ತಾಪರಾಧವು ಅವರ ತಲೆಯ ಮೇಲೆಯೇ ಇರುವದು; ನಾವು ನಿರ್ದೋಷಿಗಳು. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಕೈ ಹಾಕುವದಾದರೆ ಆ ರಕ್ತಾಪರಾಧವು ನಮ್ಮ ತಲೆಯ ಮೇಲಿರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯಾವನಾದರೂ ನಿನ್ನ ಮನೆಯ ಬಾಗಿಲಿನಿಂದ ಹೊರಗೆ ಹೊರಟು ಬೀದಿಗೆ ಬಂದರೆ, ಅವನ ರಕ್ತವು ಅವನ ತಲೆಯ ಮೇಲೆ ಇರುವುದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಮಾಡಿದರೆ, ಅವನ ರಕ್ತ ಅಪರಾಧವು ನಮ್ಮ ತಲೆಯ ಮೇಲೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:19
23 ತಿಳಿವುಗಳ ಹೋಲಿಕೆ  

ಆದರೆ ಪೌಲನು ಸೇನಾಧಿಕಾರಿಗೆ ಮತ್ತು ಇತರ ಸೈನಿಕರಿಗೆ, “ಈ ನಾವಿಕರು ಹಡಗಿನಲ್ಲಿ ಇರದಿದ್ದರೆ ನಿಮ್ಮ ಪ್ರಾಣಗಳು ಉಳಿಯಲು ಸಾಧ್ಯವಿಲ್ಲ” ಎಂದು ಹೇಳಿದನು.


ಆದರೆ ಯೆಹೂದ್ಯರು ಪೌಲನ ಉಪದೇಶವನ್ನು ತಿರಸ್ಕರಿಸಿ ದೂಷಣೆ ಮಾಡಿದರು. ಆದ್ದರಿಂದ ಪೌಲನು ತನ್ನ ಬಟ್ಟೆಗಳ ಧೂಳನ್ನು ಝಾಡಿಸಿ ಯೆಹೂದ್ಯರಿಗೆ, “ನೀವು ರಕ್ಷಣೆ ಹೊಂದದಿದ್ದರೆ, ಅದು ನಿಮ್ಮ ಸ್ವಂತ ತಪ್ಪು. ನನ್ನಿಂದ ಸಾಧ್ಯವಾದದ್ದನ್ನೆಲ್ಲ ನಾನು ಮಾಡಿದ್ದೇನೆ. ಇನ್ನು ಮೇಲೆ ನಾನು ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇನೆ!” ಎಂದು ಹೇಳಿದನು.


ಆ ಸಮಯದಲ್ಲಿ ಚೊಚ್ಚಲಾದವುಗಳನ್ನು ಸಂಹರಿಸಲು ಯೆಹೋವನು ಈಜಿಪ್ಟಿನ ಮೂಲಕ ಹಾದುಹೋಗುವನು. ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿದ ರಕ್ತವನ್ನು ಯೆಹೋವನು ನೋಡಿ ಆ ಮನೆಯನ್ನು ಸಂರಕ್ಷಿಸುವನು. ಸಂಹಾರಕನು ನಿಮ್ಮ ಮನೆಯೊಳಗೆ ಬಂದು ಸಂಹರಿಸಲು ಯೆಹೋವನು ಬಿಡುವುದಿಲ್ಲ.


ಆದರೆ ನಿಮ್ಮ ಮನೆಗಳಿಗೆ ಹಚ್ಚಿರುವ ರಕ್ತವು ಒಂದು ವಿಶೇಷ ಸೂಚನೆಯಾಗಿದೆ. ನಾನು ಆ ರಕ್ತವನ್ನು ನೋಡಿದಾಗ ನಿಮ್ಮ ಮನೆಯನ್ನು ದಾಟಿಹೋಗುವೆನು. ಈಜಿಪ್ಟಿನ ಜನರಿಗೆ ಕೇಡುಗಳಾಗುವಂತೆ ಮಾಡುವೆನು. ಆದರೆ ಆ ವ್ಯಾಧಿಗಳು ನಿಮಗೆ ಹಾನಿ ಮಾಡುವುದಿಲ್ಲ.


ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.


ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು.


ಆದ್ದರಿಂದ ಇಂದು ನಾನು ನಿಮಗೆ ದೃಢವಾಗಿ ಹೇಳಬಹುದಾದ ಒಂದು ಸಂಗತಿಯೇನೆಂದರೆ, ನಿಮ್ಮಲ್ಲಿ ಯಾರಾದರೂ ರಕ್ಷಣೆ ಹೊಂದಿಲ್ಲದಿದ್ದರೆ ಅದಕ್ಕೆ ನಾನು ಹೊಣೆಯಲ್ಲ.


ಮಾಳಿಗೆಯ ಮೇಲಿರುವವನು ಇಳಿದು ತನ್ನ ವಸ್ತುಗಳನ್ನು ಮನೆಯಿಂದ ತೆಗೆದುಕೊಳ್ಳದೆ ಓಡಿಹೋಗಲಿ.


ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.


ದುಷ್ಟರಾದ ನೀವು ಇಂದು ಒಬ್ಬ ನೀತಿವಂತನನ್ನು ಅವನ ಸ್ವಂತ ಮನೆಯಲ್ಲಿ ಅವನ ಸ್ವಂತ ಹಾಸಿಗೆಯ ಮೇಲೆಯೇ ಕೊಂದಿರುವುದರಿಂದ ನಿಮ್ಮನ್ನೂ ನಾನು ಕೊಂದು ನಿರ್ಮೂಲ ಮಾಡಬೇಕು” ಎಂದನು.


ಅದಕ್ಕೆ ಅವರು, “ನಮ್ಮ ಪ್ರಾಣವನ್ನಾದರೂ ಕೊಟ್ಟು ನಿಮ್ಮ ಪ್ರಾಣ ಉಳಿಸುತ್ತೇವೆ. ಆದರೆ ನೀವು ಇದನ್ನು ಯಾರಿಗೂ ಹೇಳಬೇಡಿ. ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ನಿಮಗೆ ದಯೆ ತೋರುತ್ತೇವೆ. ನೀನು ನಮ್ಮನ್ನು ನಂಬಬಹುದು” ಎಂದರು.


ಒಬ್ಬನು ತನ್ನ ತಂದೆಯ ಹೆಂಡತಿಯೊಡನೆ ಲೈಂಗಿಕ ಸಂಬಂಧ ಬೆಳೆಸಿದರೆ, ಅವನಿಗೂ ಆಕೆಗೂ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆಗೆ ಅವಮಾನ ಮಾಡಿದ್ದಾನೆ. ಅವರು ತಮ್ಮ ಮರಣಕ್ಕೆ ತಾವೇ ಜವಾಬ್ದಾರರಾಗಿದ್ದಾರೆ.


“ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆತಾಯಿಗಳನ್ನು ಶಪಿಸಿದನು. ಅವನ ಮರಣಕ್ಕೆ ಅವನೇ ಜವಾಬ್ದಾರನಾಗಿದ್ದಾನೆ.


ಈಗ ನೀವು ನನಗೊಂದು ಪ್ರಮಾಣ ಮಾಡಬೇಕು. ನಾನು ನಿಮಗೆ ದಯೆತೋರಿ ಸಹಾಯ ಮಾಡಿದೆ. ಆದ್ದರಿಂದ ನೀವು ಸಹ ನನ್ನ ಕುಟುಂಬದವರಿಗೆ ದಯೆತೋರುವಿರೆಂಬುದಕ್ಕೆ ಒಂದು ಗುರುತನ್ನು ಕೊಡಿರಿ.


ನಾನು ನಿನಗೆ ಈ ಪ್ರಮಾಣವನ್ನು ಮಾಡಿದ್ದೇವೆ. ಆದರೆ ಇದನ್ನು ನೀನು ಯಾರಿಗೂ ಹೇಳಕೂಡದು; ಒಂದುವೇಳೆ ಹೇಳಿದರೆ, ನಾವು ಈ ಪ್ರಮಾಣದಿಂದ ಮುಕ್ತರಾಗುತ್ತೇವೆ” ಎಂದು ಹೇಳಿದರು.


ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ರಕ್ತ ತುಂಬಿರುವ ಪಾತ್ರೆಯಲ್ಲಿ ಅದ್ದಿರಿ. ರಕ್ತವನ್ನು ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿರಿ. ಮುಂಜಾನೆಯಾಗುವವರೆಗೆ ಯಾರೂ ತಮ್ಮ ಮನೆಯನ್ನು ಬಿಟ್ಟು ಹೊರಗೆ ಹೋಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು