ಯೆಹೋಶುವ 2:2 - ಪರಿಶುದ್ದ ಬೈಬಲ್2 ಆಗ ಯಾರೋ ಒಬ್ಬರು ಜೆರಿಕೊ ನಗರದ ರಾಜನಿಗೆ, “ನಿನ್ನೆ ರಾತ್ರಿ ಇಸ್ರೇಲರ ಕಡೆಯ ಕೆಲವರು ನಮ್ಮ ದೇಶದ ದೌರ್ಬಲ್ಯಗಳನ್ನು ಕಂಡುಹಿಡಿಯುವುದಕ್ಕಾಗಿ ಬಂದಿದ್ದಾರೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಜನರು ಯೆರಿಕೋವಿನ ಅರಸನಿಗೆ “ಇಗೋ, ಈ ರಾತ್ರಿ ಇಸ್ರಾಯೇಲ್ಯರ ಕಡೆಯವರು ನಮ್ಮ ದೇಶವನ್ನು ಸಂಚರಿಸಿ ಹೊಂಚುಹಾಕುವುದಕ್ಕೆ ಬಂದಿದ್ದಾರೆ” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಸ್ರಯೇಲಿನ ಕೆಲವು ಜನರು ನಮ್ಮ ನಾಡಿನಲ್ಲಿ ಸಂಚರಿಸಿ ನೋಡಲು ಈ ರಾತ್ರಿ ನಗರಕ್ಕೆ ಬಂದಿದ್ದಾರೆಂದು ಜೆರಿಕೋವಿನ ಅರಸನಿಗೆ ತಿಳಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಜನರು ಯೆರಿಕೋವಿನ ಅರಸನಿಗೆ - ಇಗೋ, ಈ ರಾತ್ರಿ ಇಸ್ರಾಯೇಲ್ಯರ ಕಡೆಯವರು ನಮ್ಮ ದೇಶವನ್ನು ಸಂಚರಿಸಿ ನೋಡುವದಕ್ಕೆ ಬಂದಿದ್ದಾರೆಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆರಿಕೋವಿನ ಅರಸನಿಗೆ, “ಇಗೋ, ಇಸ್ರಾಯೇಲರಲ್ಲಿ ಕೆಲವರು ದೇಶವನ್ನು ಗೂಢಚಾರ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾರೆ,” ಎಂದು ತಿಳಿಸಲಾಯಿತು. ಅಧ್ಯಾಯವನ್ನು ನೋಡಿ |
ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”
ದಾನ್ ಕುಲದವರು ತಮಗೆ ಭೂಮಿಯನ್ನು ಹುಡುಕುವುದಕ್ಕಾಗಿ ಐದು ಮಂದಿ ಸೈನಿಕರನ್ನು ಕಳುಹಿಸಿದರು. ಅವರು ತಮ್ಮ ವಾಸಕ್ಕಾಗಿ ಒಳ್ಳೆಯ ಸ್ಥಳವನ್ನು ಹುಡುಕಲು ಹೋದರು. ಆ ಐದು ಮಂದಿ ಚೊರ್ಗಾ ಮತ್ತು ಎಷ್ಟಾವೋಲ್ ನಗರದವರಾಗಿದ್ದರು. ಅವರು ದಾನ್ ಕುಲದವರ ಮನೆತನಕ್ಕೆ ಸೇರಿದವರಾದ ಕಾರಣ “ಭೂಮಿಯನ್ನು ಹುಡುಕಲು” ಅವರನ್ನು ಕಳುಹಿಸಲಾಗಿತ್ತು. ಆ ಐದು ಜನರು ಎಫ್ರಾಯೀಮ್ ಬೆಟ್ಟದ ಸೀಮೆಗೆ ಬಂದು ಮೀಕನ ಮನೆಯಲ್ಲಿ ಇಳಿದುಕೊಂಡರು.