ಯೆಹೋಶುವ 2:6 - ಪರಿಶುದ್ದ ಬೈಬಲ್6 ಆದರೆ ಅವಳು ನಿಜವಾಗಿ ಆ ಗೂಢಚಾರರನ್ನು ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಒಟ್ಟಿದ ಹುಲ್ಲಿನಲ್ಲಿ ಅವರನ್ನು ಅಡಗಿಸಿಟ್ಟಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಅವಳು ಆ ಮನುಷ್ಯರನ್ನು ಮಾಳಿಗೆಯ ಮೇಲೆ ಹತ್ತಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನ ಹೊರೆಗಳ ಮಧ್ಯದಲ್ಲಿ ಬಚ್ಚಿಟ್ಟಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೆ ಅವಳು ಆ ವ್ಯಕ್ತಿಗಳನ್ನು ಮಾಳಿಗೆಯ ಮೇಲೆ ಹತ್ತಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನ ಹೊರೆಗಳೊಳಗೆ ಬಚ್ಚಿಟ್ಟಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ಅವಳು ಆ ಮನುಷ್ಯರನ್ನು ಮಾಳಿಗೆಯ ಮೇಲೆ ಹತ್ತಿಸಿ ಅಲ್ಲಿ ಸಾಲಾಗಿ ಇಟ್ಟಿದ್ದ ಪುಂಡಿಯ ಹೊರೆಗಳಲ್ಲಿ ಅಡಗಿಸಿಟ್ಟಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಆಕೆಯು ಅವರನ್ನು ಮಾಳಿಗೆಯ ಮೇಲೆ ಏರಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನೊಳಗೆ ಬಚ್ಚಿಟ್ಟಿದ್ದಳು. ಅಧ್ಯಾಯವನ್ನು ನೋಡಿ |
ಯೆಹೋಷೆಬಳು ರಾಜನಾದ ಯೋರಾಮನ ಮಗಳಾಗಿದ್ದಳು ಮತ್ತು ಅಹಜ್ಯನ ಸೋದರಿಯಾಗಿದ್ದಳು. ಯೆಹೋವಾಷನು ರಾಜನ ಮಕ್ಕಳಲ್ಲಿ ಒಬ್ಬನಾಗಿದ್ದನು. ಅತಲ್ಯಳು ಇತರ ಮಕ್ಕಳನ್ನು ಕೊಲ್ಲುವಾಗ ಯೆಹೋಷೆಬಳು ಯೆಹೋವಾಷನನ್ನು ತೆಗೆದುಕೊಂಡು ಹೋದಳು. ಅವಳು ಯೆಹೋವಾಷನನ್ನು ಮತ್ತು ಅವನ ದಾದಿಯನ್ನು ತನ್ನ ಮಲಗುವ ಕೊಠಡಿಯಲ್ಲಿ ಅಡಗಿಸಿದಳು. ಯೆಹೋವಾಷನನ್ನು ಅವನ ದಾದಿಯು ಮತ್ತು ಯೆಹೋಷೆಬಳು ಅತಲ್ಯಳಿಂದ ತಪ್ಪಿಸಿ ಅಡಗಿಸಿಟ್ಟರು. ಈ ರೀತಿ ಯೆಹೋವಾಷನನ್ನು ಕೊಲ್ಲಲಾಗಲಿಲ್ಲ.
ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.)