Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:9 - ಪರಿಶುದ್ದ ಬೈಬಲ್‌

9 “ಯೆಹೋವನು ಈ ದೇಶವನ್ನು ನಿಮ್ಮ ಜನರಿಗೆ ಕೊಟ್ಟಿದ್ದಾನೆಂದು ನಾನು ಬಲ್ಲೆ. ನಿಮ್ಮ ವಿಷಯ ಕೇಳಿ ನಮಗೆ ಭಯ ಉಂಟಾಗಿದೆ. ಈ ದೇಶದಲ್ಲಿರುವ ಎಲ್ಲಾ ಜನರು ನಿಮ್ಮಿಂದ ಭಯಭೀತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟಿದ್ದಾರೆಂದು ನಾನು ಬಲ್ಲೆ; ನಿಮ್ಮ ವಿಷಯದಲ್ಲಿ ನಮಗೆ ಮಹಾಭೀತಿ ಉಂಟಾಗಿದೆ. ನಾಡಿನ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಕೆಯು ಮಾಳಿಗೆಹತ್ತಿ ಅವರ ಬಳಿಗೆ ಬಂದು ಹೇಳಿದ್ದೇನಂದರೆ - ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿರುವದನ್ನು ಬಲ್ಲೆನು. ನಿಮ್ಮ ನಿವಿುತ್ತ ನಮಗೆ ಮಹಾಭೀತಿಯುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಯೆಹೋವ ದೇವರು ನಿಮಗೆ ದೇಶವನ್ನು ಕೊಟ್ಟಿದ್ದಾರೆಂದೂ, ನಿಮ್ಮ ನಿಮಿತ್ತ ನಮಗೆ ಮಹಾ ಭೀತಿಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:9
39 ತಿಳಿವುಗಳ ಹೋಲಿಕೆ  

“ನೀವು ನಿಮ್ಮ ವೈರಿಗಳ ವಿರುದ್ಧ ಯುದ್ಧ ಮಾಡುವಾಗ, ನಿಮ್ಮ ವೈರಿಗಳನ್ನೆಲ್ಲಾ ಸೋಲಿಸುವಂತೆ ನಾನು ನಿಮಗೆ ನನ್ನ ಮಹಾಶಕ್ತಿಯಿಂದ ಸಹಾಯ ಮಾಡುವೆನು. ನಿಮ್ಮ ವೈರಿಗಳು ಯುದ್ಧದಲ್ಲಿ ಭಯದಿಂದಲೂ ಗಲಿಬಿಲಿಯಿಂದಲೂ ಓಡಿಹೋಗುವರು.


ಸುತ್ತಲಿರುವ ಜನಾಂಗಗಳು ನಿಮಗೆ ಹೆದರಿ ನಡುಗುವಂತೆ ನಾನು ಮಾಡುತ್ತಿದ್ದೇನೆ. ಅವರು ನಿಮ್ಮ ಬಗ್ಗೆ ಸುದ್ದಿಯನ್ನು ಕೇಳಿ ಹೆದರಿಕೊಳ್ಳುವರು ಮತ್ತು ಭಯದಿಂದ ನಡುಗುವರು.’


ನಾನು ಭೂಮಿಯನ್ನೂ ಮತ್ತು ಅದರ ಮೇಲಿರುವ ಎಲ್ಲಾ ಜನರನ್ನೂ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನ್ನು ಸೃಷ್ಟಿಸಿದೆ. ನಾನು ಇದನ್ನು ನನ್ನ ಮಹಾಶಕ್ತಿಯಿಂದಲೂ ಬಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಆ ಭೂಮಿಯನ್ನು ನನ್ನ ಮನಸ್ಸಿಗೆ ಬಂದವರಿಗೆ ಕೊಡಬಹುದು.


ಒಬ್ಬ ಪಾಪಿಯು ನೂರು ದುಷ್ಕೃತ್ಯಗಳನ್ನು ಮಾಡಿ ಬಹುಕಾಲ ಬದುಕಬಹುದು. ಆದರೆ ದೇವರಲ್ಲಿ ಭಯಭಕ್ತಿಯುಳ್ಳವರಿಗೆ ಅದಕ್ಕಿಂತಲೂ ಮೇಲೇ ಆಗುವುದು.


ಪರಲೋಕವು ಯೆಹೋವನದು. ಆತನು ಭೂಲೋಕವನ್ನು ಮನುಷ್ಯರಿಗೆ ಕೊಟ್ಟನು.


ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು. ಅವರ ದುರಾಶೆಯು ಈಡೇರದು.


ಜೀವಸ್ವರೂಪನಾದ ಒಬ್ಬನು ನನ್ನ ಪರವಾಗಿ ವಾದಿಸುತ್ತಾನೆಂದು ನನಗೆ ಗೊತ್ತಿದೆ; ಕೊನೆಯಲ್ಲಿ, ಆತನು ಭೂಮಿಯ ಮೇಲೆ ನಿಂತುಕೊಂಡು ನನಗೋಸ್ಕರ ವಾದಿಸುವನು.


ಇವೆಲ್ಲವುಗಳ ಬಗ್ಗೆ ಕೇಳಿ ನಮಗೆ ಅತೀವ ಭಯವಾಗಿದೆ; ನಮ್ಮಲ್ಲಿ ಯಾರಿಗೂ ನಿಮ್ಮೊಂದಿಗೆ ಯುದ್ಧ ಮಾಡಲು ಧೈರ್ಯವಿಲ್ಲ. ಏಕೆಂದರೆ ನಿಮ್ಮ ದೇವರಾದ ಯೆಹೋವನು, ಭೂಪರಲೋಕಗಳನ್ನು ಆಳುವವನಾಗಿದ್ದಾನೆ.


ಯಾಕೋಬನು ಮತ್ತು ಅವನ ಗಂಡುಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ.


ನನ್ನ ಸ್ವಂತ ಹಣವನ್ನು ನನಗೆ ಇಷ್ಟಬಂದ ಹಾಗೆ ನಾನು ಕೊಡಬಹುದಲ್ಲವೇ? ನಾನು ಅವರಿಗೆ ಒಳ್ಳೆಯದನ್ನು ಮಾಡಿದ್ದಕ್ಕಾಗಿ ನೀನು ಹೊಟ್ಟೆಕಿಚ್ಚುಪಡುವೆಯಾ?’ ಎಂದನು.


ಈಗ ನಿನೆವೆಯು ಖಾಲಿಯಾಯಿತು. ಎಲ್ಲಾ ದೋಚಲ್ಪಟ್ಟಿತು. ನಗರವು ನಾಶವಾಯಿತು. ಜನರು ತಮ್ಮ ಧೈರ್ಯ ಕಳೆದುಕೊಂಡಿದ್ದಾರೆ. ಭಯದಿಂದ ಅವರ ಹೃದಯವು ಕರಗುತ್ತಿದೆ. ಮೊಣಕಾಲುಗಳು ನಡುಗುತ್ತಿದೆ. ಅವರ ದೇಹವು ಅಲ್ಲಾಡುತ್ತಿದೆ. ಭಯದಿಂದ ಅವರ ಮುಖವು ರಕ್ತಹೀನವಾಗಿದೆ.


ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.


ಅರಾಮ್ಯರ ಸೇನೆಯು ರಥಗಳ, ಕುದುರೆಗಳ ಮತ್ತು ಮಹಾಸೇನೆಯ ರಣಘೋಷವನ್ನು ಕೇಳುವಂತೆ ಯೆಹೋವನು ಮಾಡಿದ್ದನು. ಅರಾಮ್ಯ ಸೈನಿಕರು, “ಇಸ್ರೇಲಿನ ರಾಜನು, ಹಿತ್ತೀಯರಿಗೆ ಮತ್ತು ಈಜಿಪ್ಟಿನವರಿಗೆ ಹಣಕೊಟ್ಟು ನಮ್ಮ ವಿರುದ್ಧ ಹೋರಾಟಕ್ಕೆ ಬರುವಂತೆ ಮಾಡಿದ್ದಾನೆ” ಎಂದು ಮಾತನಾಡಿಕೊಂಡು,


ನಾಮಾನನು ತನ್ನ ಗುಂಪಿನೊಂದಿಗೆ ದೇವಮನುಷ್ಯನ ಹತ್ತಿರಕ್ಕೆ ಹಿಂದಿರುಗಿ ಬಂದನು. ಅವನು ಎಲೀಷನ ಮುಂದೆ ನಿಂತು, “ನೋಡಿ, ಇಸ್ರೇಲಿನಲ್ಲಿಯೇ ಹೊರತು ಭೂಮಂಡಲದ ಬೇರೆಲ್ಲಿಯೂ ದೇವರು ಇಲ್ಲವೇ ಇಲ್ಲ ಎಂಬುದು ಈಗ ತಾನೇ ನನಗೆ ತಿಳಿಯಿತು! ಈಗ ದಯಮಾಡಿ ನನ್ನ ಕಾಣಿಕೆಯನ್ನು ಸ್ವೀಕರಿಸಿ!” ಎಂದು ಹೇಳಿದನು.


ಆಗ ಸಿಂಹದಂತೆ ಶೂರರಾದ ಜನರು ಸಹ ಹೆದರಿಕೊಳ್ಳುತ್ತಾರೆ. ಏಕೆಂದರೆ ನಿನ್ನ ತಂದೆಯು ರಣವೀರನೆಂದು ಮತ್ತು ಅವನ ಜನರು ಧೈರ್ಯಶಾಲಿಗಳೆಂದು ತಿಳಿದಿದೆ.


ಆ ಮನುಷ್ಯನ ಸ್ನೇಹಿತನು ಕನಸಿನ ಅರ್ಥವನ್ನು ತಿಳಿದುಕೊಂಡು ಅವನಿಗೆ, “ನಿನ್ನ ಕನಸು ಇಸ್ರೇಲಿನ ಯೋವಾಷನ ಮಗನಾದ ಗಿದ್ಯೋನನ ಕುರಿತಾಗಿದೆ. ಗಿದ್ಯೋನನು ಮಿದ್ಯಾನ್ಯರ ಇಡೀ ಸೈನ್ಯವನ್ನು ಸೋಲಿಸುವಂತೆ ದೇವರು ಮಾಡುತ್ತಾನೆ” ಎಂದನು.


ಪರಲೋಕದಲ್ಲಿರುವ ದೇವರು ಭೂಮಿಯ ಮೇಲಿದ್ದ ಜನರನ್ನು ಪ್ರತ್ಯೇಕಿಸಿದನು. ಪ್ರತಿಯೊಂದು ಜನಾಂಗಕ್ಕೆ ಅದರದೇ ಆದ ದೇಶವನ್ನು ಕೊಟ್ಟನು. ಅದಕ್ಕೆ ಮೇರೆಯನ್ನು ಆತನು ಮಾಡಿಕೊಟ್ಟನು. ಇಸ್ರೇಲರಲ್ಲಿ ಎಷ್ಟು ಜನರು ಇದ್ದಾರೋ ಅಷ್ಟು ಜನಾಂಗಗಳಿವೆ.


ಆಗ ನಿಮ್ಮ ದೇಶದಲ್ಲಿ ವಾಸಿಸುವವರೆಲ್ಲರೂ ನೀವು ದೇವರ ಹೆಸರಿನಿಂದ ಕರೆಯಲ್ಪಟ್ಟವರೆಂಬುದನ್ನು ನೋಡುವಾಗ ನಿಮಗೆ ಭಯಪಡುವರು.


ನಿಮ್ಮ ವಿರುದ್ಧವಾಗಿ ಯಾರೂ ನಿಂತುಕೊಳ್ಳಲಾರರು. ನೀವು ಆಕ್ರಮಿಸಿಕೊಳ್ಳುವ ಪ್ರದೇಶದಲ್ಲೆಲ್ಲಾ ಯೆಹೋವನು ಅಲ್ಲಿಯ ಜನರು ನಿಮಗೆ ಭಯಪಡುವಂತೆ ಮಾಡುವನು. ಯೆಹೋವನು ಈ ವಾಗ್ದಾನವನ್ನು ನಿಮಗೆ ಮೊದಲೇ ಕೊಟ್ಟಿದ್ದಾನೆ.


ಈಜಿಪ್ಟಿನವರು ತಾವು ಇಸ್ರೇಲರಿಗಿಂತಲೂ ಉತ್ತಮರೆಂದು ಭಾವಿಸಿಕೊಂಡಿದ್ದರು. ಆದರೆ ಯೆಹೋವನು ಅವರನ್ನು ತಗ್ಗಿಸಿದ್ದರಿಂದ ಎಲ್ಲಾ ದೇವರುಗಳಲ್ಲಿ ಆತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡೆನು” ಎಂದು ಹೇಳಿದನು.


ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ.


ಮೋಶೆಯು ಕಾದೇಶಿನಲ್ಲಿದ್ದಾಗ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಿಮ್ಮ ಸಂಬಂಧಿಕರವಾದ ಇಸ್ರೇಲರು ಕೇಳಿಕೊಳ್ಳುವುದೇನೆಂದರೆ: ನಮಗೆ ಸಂಭವಿಸಿದ ಎಲ್ಲಾ ಕಷ್ಟಗಳು ನಿಮಗೆ ಗೊತ್ತಿದೆ.


“ಆರೋನನು ಸತ್ತು ಪೂರ್ವಿಕರ ಬಳಿ ಸೇರುವ ಸಮಯ ಬಂದಿದೆ. ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ದೇಶದೊಳಗೆ ಆರೋನನು ಪ್ರವೇಶಿಸುವುದಿಲ್ಲ. ಯಾಕೆಂದರೆ ನೀವಿಬ್ಬರೂ ಮೆರೀಬಾ ಬುಗ್ಗೆಯ ಕುರಿತಾಗಿ ನಾನು ಕೊಟ್ಟ ಆಜ್ಞೆಗೆ ವಿಧೇಯರಾಗದಿದ್ದುದರಿಂದ ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.


ಆ ಇಬ್ಬರು ಗೂಢಚಾರರು ಆ ರಾತ್ರಿ ಅಲ್ಲಿಯೇ ಮಲಗಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ರಾಹಾಬಳು ಮಾಳಿಗೆಯ ಮೇಲೆ ಹೋಗಿ ಅವರೊಂದಿಗೆ ಮಾತನಾಡಿ,


“ಯೆಹೋವನು ನಿಜವಾಗಿಯೂ ಆ ದೇಶವನ್ನೆಲ್ಲಾ ನಮಗೆ ದಯಪಾಲಿಸಿದ್ದಾನೆ. ಆ ದೇಶದ ಎಲ್ಲ ಜನರು ನಮ್ಮಿಂದ ಭಯಗೊಂಡಿದ್ದಾರೆ” ಎಂದು ತಿಳಿಸಿದರು.


ಅದಕ್ಕೆ ಅವರು, “ನಿನ್ನ ಸೇವಕರಾದ ನಾವು ಬಹುದೂರ ದೇಶದಿಂದ ಬಂದಿದ್ದೇವೆ. ನಾವು ಬಂದದ್ದಕ್ಕೆ ಕಾರಣವೇನೆಂದರೆ ನಾವು ನಿಮ್ಮ ದೇವರಾದ ಯೆಹೋವನ ಅದ್ಭುತಶಕ್ತಿಯ ಬಗ್ಗೆ ಕೇಳಿದೆವು. ಆತನು ಮಾಡಿದ ಅದ್ಭುತಕಾರ್ಯಗಳ ಬಗ್ಗೆ ಕೇಳಿದೆವು. ಆತನು ಈಜಿಪ್ಟಿನಲ್ಲಿ ಮಾಡಿದ ಪ್ರತಿಯೊಂದು ಅದ್ಭುತದ ಬಗ್ಗೆ ಕೇಳಿದೆವು.


ಆತನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಇಬ್ಬರು ಅರಸರನ್ನು ಸೋಲಿಸಿದ್ದನ್ನು ನಾವು ಕೇಳಿದೆವು. ಹೆಷ್ಬೋನಿನ ಅರಸನಾದ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸನಾದ ಓಗ್ ಇವರೇ ಆ ಅರಸರು.


ಗಿಬ್ಯೋನ್ಯರು, “ನೀವು ನಮ್ಮನ್ನು ಕೊಲ್ಲಬಹುದೆಂಬ ಭಯದಿಂದ ನಾವು ನಿಮಗೆ ಸುಳ್ಳು ಹೇಳಿದೆವು; ದೇವರು ತನ್ನ ಸೇವಕನಾದ ಮೋಶೆಗೆ ಈ ಎಲ್ಲ ಭೂಪ್ರದೇಶವನ್ನು ನಿಮಗೆ ಕೊಡಬೇಕೆಂದು ಆಜ್ಞಾಪಿಸಿರುವುದನ್ನೂ ಈ ಪ್ರದೇಶದ ಎಲ್ಲ ಜನರನ್ನು ಕೊಂದುಬಿಡಬೇಕೆಂದು ನಿಮಗೆ ಹೇಳಿರುವನೆಂದೂ ನಾವು ಕೇಳಿದ್ದೆವು. ಆದ್ದರಿಂದ ನಾವು ನಿಮಗೆ ಸುಳ್ಳು ಹೇಳಿದೆವು.


ತೂರಿನ ವಿಷಯವಾದ ವಾರ್ತೆಯನ್ನು ಈಜಿಪ್ಟ್ ಕೇಳಿಸಿಕೊಳ್ಳುವದು. ಆ ವರ್ತಮಾನವು ಈಜಿಪ್ಟನ್ನು ದುಃಖದಲ್ಲಿ ಮುಳುಗಿಸುವದು.


ಇಸ್ರೇಲರು ಜೋರ್ಡನ್ ನದಿಯನ್ನು ದಾಟುವವರೆಗೆ ಯೆಹೋವನು ಆ ನದಿಯನ್ನು ಬತ್ತಿಸಿದನು. ಜೋರ್ಡನ್ ನದಿಯ ಪಶ್ಚಿಮ ದಿಕ್ಕಿನಲ್ಲಿರುವ ಅಮೋರಿಯರ ಅರಸರು ಮತ್ತು ಭೂಮಧ್ಯ ಸಾಗರದ ಹತ್ತಿರವಿರುವ ಕಾನಾನ್ಯರ ಅರಸರು ಈ ಸಂಗತಿಯನ್ನು ಕೇಳಿ ಭಯಗ್ರಸ್ತರಾದರು; ಇಸ್ರೇಲರ ವಿರುದ್ಧವಾಗಿ ಹೋರಾಡುವಷ್ಟು ಧೈರ್ಯವಿಲ್ಲದವರಾದರು.


ಆಗ ಯೆಹೋವನು ಯೆಹೋಶುವನಿಗೆ, “ಇಗೋ ನೋಡು, ನೀನು ಜೆರಿಕೊ ನಗರವನ್ನು ಗೆಲ್ಲುವಂತೆ ಮಾಡುತ್ತೇನೆ. ನೀನು ಅರಸನನ್ನು ಮತ್ತು ನಗರದ ಎಲ್ಲ ಯೋಧರನ್ನು ಸೋಲಿಸುವೆ.


ನಮ್ಮ ವೈರಿಗಳೆಲ್ಲಾ ಕೆಲಸ ಸಂಪೂರ್ಣವಾದದ್ದನ್ನು ಕೇಳಿದರು. ನಮ್ಮ ಸುತ್ತಮುತ್ತಲಿನ ಪ್ರಾಂತ್ಯಗಳವರಿಗೂ ದೇಶಗಳವರಿಗೂ ಈ ಸುದ್ದಿಮುಟ್ಟಿತು. ಆಗ ಅವರ ಧೈರ್ಯವು ಕುಗ್ಗಿತು. ಯಾಕೆಂದರೆ ಈ ಮಹಾಕಾರ್ಯವನ್ನು ನಮ್ಮ ದೇವರ ಸಹಾಯದಿಂದಲೇ ನಾವು ಮಾಡಿದ್ದೇವೆಂದು ಅವರಿಗೆ ಅರ್ಥವಾಯಿತು.


ರಾಜನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿ ಎಲ್ಲೆಲ್ಲಿ ರಾಜಶಾಸನವು ತಲಪಿತೋ ಅಲ್ಲಲ್ಲಿ ಯೆಹೂದ್ಯರೆಲ್ಲರೂ ಆನಂದದಿಂದ ನಲಿದಾಡಿದರು. ಅದು ಅವರಿಗೆ ಅತ್ಯಂತ ಸಂತಸದ ದಿವಸವಾಗಿತ್ತು. ತಮ್ಮತಮ್ಮ ಮನೆಗಳಲ್ಲಿ ಔತಣ ಸಿದ್ಧಪಡಿಸಿದರು. ಸಾಮಾನ್ಯ ಜನರಲ್ಲಿ ಎಷ್ಟೋ ಮಂದಿ ಯೆಹೂದ್ಯ ಮತಾವಲಂಭಿಗಳಾದರು. ಯಾಕೆಂದರೆ ಅವರು ಯೆಹೂದ್ಯರಿಗೆ ತುಂಬಾ ಹೆದರಿ ಆ ರೀತಿಯಾಗಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು