ಯೆಹೋಶುವ 20:3 - ಪರಿಶುದ್ದ ಬೈಬಲ್3 ನಿಮ್ಮಲ್ಲಿ ಒಬ್ಬನು ತಿಳಿಯದೆ ಆಕಸ್ಮಿಕವಾಗಿ ನರಹತ್ಯ ಮಾಡಿದರೆ ಅವನು ಯಾವುದಾದರೊಂದು ಆಶ್ರಯನಗರಕ್ಕೆ ಹೋಗಿ ಅಡಗಿಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿಮ್ಮಲ್ಲಿ ತಿಳಿಯದೆ ಆಕಸ್ಮಾತ್ತಾಗಿ ನರಹತ್ಯಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪ ಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿಮ್ಮಲ್ಲಿ ಯಾರಾದರು ಅರಿಯದೆ ಅಕಸ್ಮಾತ್ತಾಗಿ ನರಹತ್ಯೆ ಮಾಡಿದ್ದೇ ಆದರೆ ಅಂಥವನು ಅಲ್ಲಿಗೆ ಓಡಿಹೋಗಲಿ. ಹತನಾದವನ ಹತ್ತಿರದ ಬಂಧು ಮುಯ್ಯಿತೀರಿಸದಂತೆ ಆ ನಗರಗಳು ನಿಮಗೆ ಆಶ್ರಯ ಸ್ಥಾನವಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಿಮ್ಮಲ್ಲಿ ತಿಳಿಯದೆ ಅಕಸ್ಮಾತ್ತಾಗಿ ನರಹತ್ಯ ಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯಾವನಾದರು ಅರಿಯದೆ ಅಕಸ್ಮಾತ್ತಾಗಿ ಕೈತಪ್ಪಿ ಕೊಂದುಹಾಕಿದರೆ, ಅಂಥವನು ಅಲ್ಲಿಗೆ ಓಡಿಹೋಗಲಿ. ಅವನಿಗೆ ರಕ್ತದ ಸೇಡು ತೀರಿಸುವವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರಲಿ. ಅಧ್ಯಾಯವನ್ನು ನೋಡಿ |
ಆ ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಈ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು. ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು.