4 “ಆಶ್ರಯನಗರಕ್ಕೆ ಓಡಿಹೋದವನು ಆ ಪಟ್ಟಣದ ಪ್ರವೇಶದ್ವಾರದಲ್ಲಿ ನಿಂತು ಅಲ್ಲಿಯ ಜನನಾಯಕರಿಗೆ ನಡೆದ ಸಂಗತಿಯನ್ನು ತಿಳಿಸಲಿ. ಆಗ ನಾಯಕರು ಅವನಿಗೆ ನಗರವನ್ನು ಪ್ರವೇಶಿಸಲು ಅನುಮತಿ ಕೊಡಲಿ; ತಮ್ಮ ಜೊತೆಯಲ್ಲಿ ವಾಸಿಸಲು ಒಂದು ಸ್ಥಳವನ್ನು ಕೊಡಲಿ.
4 ಅಂಥ ಪಟ್ಟಣಕ್ಕೆ ಓಡಿ ಹೋದವನು ಮೊದಲು ಊರ ಬಾಗಿಲಲ್ಲೇ ನಿಂತುಕೊಂಡು ಅಲ್ಲಿನ ಹಿರಿಯರಿಗೆ ತನ್ನ ಸಂಗತಿಯನ್ನು ತಿಳಿಯಪಡಿಸಲಿ. ಅವರು ಅವನನ್ನು ಊರೊಳಕ್ಕೆ ಸೇರಿಸಿಕೊಂಡು, ಅವನ ವಾಸಕ್ಕೆ ಸ್ಥಳ ಕೊಡಲಿ
4 ಅಂಥ ನಗರಕ್ಕೆ ಓಡಿಹೋದವನು ಮೊದಲು ಊರಬಾಗಿಲಲ್ಲೇ ನಿಂತುಕೊಂಡು ಅಲ್ಲಿನ ಹಿರಿಯರಿಗೆ ತನ್ನ ಸಂಗತಿಯನ್ನು ತಿಳಿಯಪಡಿಸಲಿ. ಅವರು ಅವನನ್ನು ಊರೊಳಗೆ ಸೇರಿಸಿಕೊಳ್ಳಲಿ; ವಾಸಕ್ಕೆ ಸ್ಥಳಕೊಡಲಿ.
4 ಅಂಥ ಪಟ್ಟಣಕ್ಕೆ ಓಡಿಹೋದವನು ಮೊದಲು ಊರಬಾಗಲಲ್ಲೇ ನಿಂತುಕೊಂಡು ಅಲ್ಲಿನ ಹಿರಿಯರಿಗೆ ತನ್ನ ಸಂಗತಿಯನ್ನು ತಿಳಿಯಪಡಿಸಲಿ. ಅವರು ಅವನನ್ನು ಊರೊಳಗೆ ಸೇರಿಸಿಕೊಂಡು ಅವನ ವಾಸಕ್ಕೆ ಸ್ಥಳಕೊಡಲಿ.
4 ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು, ಪಟ್ಟಣದ ಬಾಗಿಲ ದ್ವಾರದಲ್ಲಿ ನಿಂತುಕೊಂಡು, ಆ ಪಟ್ಟಣದ ಹಿರಿಯರ ಮುಂದೆ ತನ್ನ ವ್ಯಾಜ್ಯವನ್ನು ತಿಳಿಸಬೇಕು. ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಳ್ಳಲಿ. ಅವರು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಲಿ.
ಆ ಅಧಿಕಾರಿಗಳು ಯೆರೆಮೀಯನನ್ನು ಬಾವಿಗೆ ಹಾಕಿದ ಸಂಗತಿಯು ಎಬೆದ್ಮೆಲೆಕನೆಂಬ ಮನುಷ್ಯನ ಕಿವಿಗೆ ಬಿತ್ತು. ಎಬೆದ್ಮೆಲೆಕನು ಇಥಿಯೋಪಿಯದವನಾಗಿದ್ದು ಅರಮನೆಯಲ್ಲಿ ಕಂಚುಕಿಯಾಗಿದ್ದನು. ರಾಜನಾದ ಚಿದ್ಕೀಯನು ಬೆನ್ಯಾಮೀನ್ ಊರ ಬಾಗಲಲ್ಲಿ ಕುಳಿತಿದ್ದನು. ಎಬೆದ್ಮೆಲೆಕನು ಅರಮನೆಯನ್ನು ಬಿಟ್ಟು ಬೆನ್ಯಾಮೀನ್ ಊರಹೆಬ್ಬಾಗಿಲಿನ ಹತ್ತಿರ ಕುಳಿತಿದ್ದ ರಾಜನಾದ ಚಿದ್ಕೀಯನ ಹತ್ತಿರ ಬಂದು ಹೀಗೆ ಹೇಳಿದನು:
ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.