Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 20:5 - ಪರಿಶುದ್ದ ಬೈಬಲ್‌

5 ಆದರೆ ಅವನನ್ನು ಬೆನ್ನಟ್ಟಿಕೊಂಡು ಬಂದವನು ಆಶ್ರಯನಗರಕ್ಕೆ ಬಂದರೆ, ಆ ನಗರದ ನಾಯಕರು ಕೊಂದವನನ್ನು ಬೆನ್ನಟ್ಟಿ ಬಂದವನ ಕೈಗೆ ಒಪ್ಪಿಸಬಾರದು. ಆಶ್ರಯಕೋರಿ ಅವರಲ್ಲಿಗೆ ಬಂದ ವ್ಯಕ್ತಿಯನ್ನು ಅವರು ರಕ್ಷಿಸಬೇಕು. ಯಾಕೆಂದರೆ ಆ ನರಹತ್ಯವು ಆಕಸ್ಮಿಕವಾದದ್ದೇ ಹೊರತು ದ್ವೇಷದಿಂದ ಮಾಡಿದ್ದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹತವಾದವನ ಸಮೀಪ ಬಂಧುವು ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಹಳೆಯ ದ್ವೇಷವೇನೂ ಇಲ್ಲದೆ ಆಕಸ್ಮಾತ್ತಾಗಿ ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹತನಾದವನ ಹತ್ತಿರದ ಬಂಧು, ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ, ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಕೊಂದದ್ದು ಅಕಸ್ಮಾತ್ತಾಗಿ, ಹಳೆಯ ದ್ವೇಷದಿಂದೇನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹತವಾದವನ ಸಮೀಪಬಂಧುವು ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಯಾಕಂದರೆ ಅವನು ನೆರೆಯವನನ್ನು ಪೂರ್ವದ್ವೇಷವೇನೂ ಇಲ್ಲದೆ ಅಕಸ್ಮಾತ್ತಾಗಿ ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ, ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು. ಏಕೆಂದರೆ ಅವನು ತನ್ನ ನೆರೆಯವನನ್ನು ಅಕಸ್ಮಾತ್ತಾಗಿ ಕೊಂದನು ಮತ್ತು ಪೂರ್ವದಲ್ಲಿ ಅವನ ಬಗ್ಗೆ ದ್ವೇಷ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 20:5
3 ತಿಳಿವುಗಳ ಹೋಲಿಕೆ  

ಕೊಂದವನು ನ್ಯಾಯ ವಿಚಾರಣಾಸಭೆಯ ಮುಂದೆ ನಿಂತುಕೊಳ್ಳುವುದಕ್ಕಿಂತ ಮೊದಲೇ ಕೊಲ್ಲಲ್ಪಟ್ಟವನ ಸಂಬಂಧಿಕನಿಂದ ಕೊಲ್ಲಲ್ಪಡದೆ ಸುರಕ್ಷಿತನಾಗಿರಲು ಆ ಆಶ್ರಯ ಸ್ಥಳಗಳು ನಿಮ್ಮ ಮಧ್ಯದಲ್ಲಿ ಇರಲೇಬೇಕು.


ಕೊಂದವನು ಓಡಿಹೋಗಿದ್ದ ಆಶ್ರಯ ನಗರಕ್ಕೆ ಸಭೆಯವರು ಅವನನ್ನು ಮತ್ತೆ ಕರೆದುಕೊಂಡು ಹೋಗಿ ಕೊಲ್ಲಲ್ಪಟ್ಟವನ ಸಮೀಪಬಂಧುವಿನಿಂದ ರಕ್ಷಿಸಬೇಕು. ಅಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.


“ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ತಿಳಿಯದೆ ಪಾಪಮಾಡಿದರೆ ಮತ್ತು ಮಾಡಬಾರದೆಂದು ಹೇಳಿದವುಗಳನ್ನು ಮಾಡಿದರೆ, ಅವನು ಮಾಡಬೇಕಾದದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು