ಯೆಹೋಶುವ 20:8 - ಪರಿಶುದ್ದ ಬೈಬಲ್8 ಜೆರಿಕೊವಿನ ಹತ್ತಿರ ಜೋರ್ಡನ್ ನದಿಯ ಪೂರ್ವದಲ್ಲಿದ್ದ ರೂಬೇನ್ಯರ ಪ್ರಾಂತ್ಯದ ಅರಣ್ಯಪ್ರದೇಶದಲ್ಲಿನ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದಲ್ಲಿನ ರಾಮೋತ್; ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್. ಇವೇ ಆ ಆಶ್ರಯನಗರಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇವುಗಳನ್ನು ಮಾತ್ರವಲ್ಲದೆ, ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇವುಗಳನ್ನು ಮಾತ್ರವಲ್ಲ ಜೆರಿಕೋವಿನ ಪೂರ್ವದಲ್ಲಿರುವ ಜೋರ್ಡನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಮರುಭೂಮಿಯಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ನಗರಗಳನ್ನು ನೇಮಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮತ್ತು ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನೂ ನೇವಿುಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನ್ ನದಿ ಆಚೆ ರೂಬೇನನ ಗೋತ್ರಕ್ಕಿರುವ ಸಮ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನು ಗಾದನ ಗೋತ್ರಕ್ಕೆ ಗಿಲ್ಯಾದಿನ ರಾಮೋತನ್ನೂ, ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾನನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿ |
ಇಸ್ರೇಲಿನವನಾಗಲಿ ಅಥವಾ ಅವರೊಂದಿಗೆ ಇರುವ ಒಬ್ಬ ಪರದೇಶಿಯನಾಗಲಿ ಆಕಸ್ಮಿಕವಾಗಿ ನರಹತ್ಯೆ ಮಾಡಿದ್ದರೆ ಒಂದು ಆಶ್ರಯನಗರಕ್ಕೆ ಓಡಿಹೋಗಲು ಅವಕಾಶವಿತ್ತು. ಯಾವನೇ ಆಗಲಿ ಮತ್ತೊಬ್ಬನನ್ನು ಆಕಸ್ಮಿಕವಾಗಿ ಕೊಂದರೆ ಆ ಪಟ್ಟಣಗಳಲ್ಲಿ ಆಶ್ರಯ ಪಡೆಯಬಹುದಾಗಿತ್ತು; ಅಲ್ಲಿ ಸುರಕ್ಷಿತವಾಗಿ ವಾಸಿಸಬಹುದಾಗಿತ್ತು. ಬೆನ್ನಟ್ಟಿ ಬಂದವನು ಅವನನ್ನು ಕೊಲ್ಲಲು ಸಾಧ್ಯವಿರಲಿಲ್ಲ. ಕೊಲೆ ಮಾಡಿದವನಿಗೆ ಆ ಪಟ್ಟಣದ ನ್ಯಾಯಾಲಯವೇ ತೀರ್ಪು ನೀಡುತ್ತಿತ್ತು.