Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:13 - ಪರಿಶುದ್ದ ಬೈಬಲ್‌

13 ಆದ್ದರಿಂದ ಆರೋನನ ಸಂತತಿಯವರಿಗೆ ಆಶ್ರಯನಗರವಾದ ಹೆಬ್ರೋನ್ ನಗರವನ್ನು ಕೊಡಲಾಯಿತು. ಆರೋನನ ಸಂತತಿಯವರಿಗೆ ಅವರು ಲಿಬ್ನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮಹಾಯಾಜಕನಾದ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನೆಂಬ ಆಶ್ರಯ ನಗರವಾದ ಲಿಬ್ನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯಾಜಕ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನ್ ಎಂಬ ಆಶ್ರಯ ನಗರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮಹಾಯಾಜಕನಾದ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನೆಂಬ ಆಶ್ರಯ ನಗರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೀಗೆಯೇ ಯಾಜಕನಾದ ಆರೋನನ ವಂಶದವರಿಗೆ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಕೊಟ್ಟರು. ಲಿಬ್ನಾವನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:13
9 ತಿಳಿವುಗಳ ಹೋಲಿಕೆ  

ಯೆಹೂದದ ಜನರು ಈ ಊರುಗಳನ್ನು ಸಹ ಪಡೆದುಕೊಂಡರು: ಲಿಬ್ನಾ, ಎತೆರ್, ಆಷಾನ್,


ಆದ್ದರಿಂದ ಇಸ್ರೇಲರು “ಆಶ್ರಯನಗರಗಳನ್ನಾಗಿ” ಕೆಲವು ನಗರಗಳನ್ನು ಆರಿಸಿದರು. ಅವು ಯಾವುವೆಂದರೆ: ನಫ್ತಾಲಿ ಕುಲದವರ ಪರ್ವತ ಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್; ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್; ಯೆಹೂದ್ಯರ ಬೆಟ್ಟದ ಸೀಮೆಯಲ್ಲಿನ ಹೆಬ್ರೋನ್ ಎಂಬ ಕಿರ್ಯತರ್ಬ.


ಹುಮ್ಟಾ ಹೆಬ್ರೋನ್ ಎಂಬ ಕಿರ್ಯತರ್ಬ ಮತ್ತು ಚೀಯೋರ್ ಎಂಬ ಒಂಭತ್ತು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.


ಆಗ ಯೆಹೋಶುವನು ಮತ್ತು ಇಸ್ರೇಲರೆಲ್ಲರು ಮಕ್ಕೇದದಿಂದ ಪ್ರಯಾಣ ಮಾಡಿ ಲಿಬ್ನಕ್ಕೆ ಹೋಗಿ ಆ ಪಟ್ಟಣದ ಮೇಲೆ ಧಾಳಿಮಾಡಿದರು.


ಅಶ್ಶೂರದ ಅರಸನಿಗೆ ಒಂದು ಸಂದೇಶವು ಬಂದು ತಲುಪಿತು. ಅದರಲ್ಲಿ, “ಇಥಿಯೋಪ್ಯದ ಅರಸನಾದ ತಿರ್ಹಾಕನು ನಿನ್ನೊಂದಿಗೆ ಯುದ್ಧಮಾಡಲು ಬರುತ್ತಿದ್ದಾನೆ” ಎಂದು ಬರೆದಿತ್ತು. ಅದನ್ನು ಕೇಳಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಲಿಬ್ನಕ್ಕೆ ಹೋದನು. ಸೇನಾದಂಡನಾಯಕನಿಗೆ ಈ ಸಮಾಚಾರ ಮುಟ್ಟಿದ ಕೂಡಲೇ ಅವನು ತನ್ನ ಅರಸನು ಯುದ್ಧಮಾಡುತ್ತಿದ್ದ ಲಿಬ್ನ ಪಟ್ಟಣಕ್ಕೆ ಹೋದನು. ಅಲ್ಲಿಂದ ಅವನು ಹಿಜ್ಕೀಯನ ಬಳಿಗೆ ತನ್ನ ದೂತರನ್ನು ಕಳುಹಿಸಿ,


ನೀವು ಲೇವಿಯರಿಗೆ ಕೊಡುವ ಆರು ಪಟ್ಟಣಗಳು ಆಶ್ರಯ ನಗರಗಳಾಗಿರುತ್ತವೆ. ಬೇರೊಬ್ಬನನ್ನು ಕೊಂದು ಸಂರಕ್ಷಣೆಗಾಗಿ ಓಡಿಹೋಗುವವರು ಈ ಪಟ್ಟಣಗಳಿಗೆ ಬಂದು ಸಂರಕ್ಷಣೆ ಪಡೆಯಲು ನೀವು ಅವಕಾಶ ಕೊಡಬೇಕು. ಇದಲ್ಲದೆ ಇತರ ನಲವತ್ತೆರಡು ಪಟ್ಟಣಗಳನ್ನು ನೀವು ಲೇವಿಯರಿಗೆ ಕೊಡಬೇಕು.


ಆದರೆ ಕಿರ್ಯತರ್ಬ ನಗರದ ಸುತ್ತಮುತ್ತಲಿನ ಸಣ್ಣಸಣ್ಣ ಊರುಗಳು ಮತ್ತು ಅವುಗಳಿಗೆ ಸೇರಿದ ಭೂಮಿಯು ಯೆಫುನ್ನೆಯ ಮಗನಾದ ಕಾಲೇಬನಿಗೆ ಸೇರಿತ್ತು.


ಹೀಗೆ ಎದೋಮ್ಯರು ಯೆಹೂದದ ಆಳ್ವಿಕೆಯಿಂದ ಬೇರ್ಪಟ್ಟರು. ಅವರು ಇಂದಿನ ತನಕ ಯೆಹೂದದ ಆಳ್ವಿಕೆಯಿಂದ ಬೇರ್ಪಟ್ಟು ಸ್ವತಂತ್ರರಾಗಿದ್ದಾರೆ. ಅದೇ ಸಮಯದಲ್ಲಿ ಲಿಬ್ನದವರು ಯೆಹೂದದ ಆಳ್ವಿಕೆಯಿಂದ ಬೇರೆಯಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು