ಯೆಹೋಶುವ 21:18 - ಪರಿಶುದ್ದ ಬೈಬಲ್18 ಅನಾತೋತ್ ಮತ್ತು ಅಲ್ಮೋನ್. ಈ ನಾಲ್ಕು ಪಟ್ಟಣಗಳನ್ನೂ ಅವರ ಪಶುಗಳಿಗಾಗಿ ಆ ಪಟ್ಟಣಗಳ ಸಮೀಪದಲ್ಲಿದ್ದ ಸ್ವಲ್ಪ ಭೂಮಿಯನ್ನೂ ಅವರಿಗೆ ಕೊಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅನಾತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳೂ ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಗಿಬ್ಯೋನ್, ಗೆಬ, ಗೆನತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ನಗರಗಳು ದೊರೆತವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅನಾತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳಸಹಿತವಾದ ಪಟ್ಟಣಗಳೂ ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅನಾತೋತನ್ನೂ ಅಲ್ಮೋನನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಟ್ಟರು. ಅಧ್ಯಾಯವನ್ನು ನೋಡಿ |
ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು.